ಆ್ಯಪ್ನಗರ

ದತ್ತಪೀಠ ಮಾರ್ಗದಲ್ಲಿ ಮಿನಿ ಬಸ್‌ ಸಂಚಾರಕ್ಕೆ ಆಗ್ರಹ

ಚಿಕ್ಕಮಗಳೂರಿನಿಂದ ದತ್ತಪೀಠಕ್ಕೆ ಮಿನಿ ಬಸ್‌ ಸಂಚಾರ ಆರಂಭಿಸಬೇಕು ಎಂದು ಆಗ್ರಹಿಸಿ ಅತ್ತಿಗುಂಡಿ ಸುತ್ತಮುತ್ತಲ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

Vijaya Karnataka 21 Jun 2019, 5:00 am
ಚಿಕ್ಕಮಗಳೂರು: ಚಿಕ್ಕಮಗಳೂರಿನಿಂದ ದತ್ತಪೀಠಕ್ಕೆ ಮಿನಿ ಬಸ್‌ ಸಂಚಾರ ಆರಂಭಿಸಬೇಕು ಎಂದು ಆಗ್ರಹಿಸಿ ಅತ್ತಿಗುಂಡಿ ಸುತ್ತಮುತ್ತಲ ಗ್ರಾಮಸ್ಥರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
Vijaya Karnataka Web CKM-20SHIVUP1


ಮುಳ್ಳಯ್ಯನಗಿರಿ ತಪ್ಪಲು ಹಿತರಕ್ಷಣಾ ವೇದಿಕೆ ಅಧ್ಯಕ್ಷ ಗುರುವೇಶ್‌ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ಅವರನ್ನು ಬುಧವಾರ ಭೇಟಿಯಾದ ಗ್ರಾಮಸ್ಥರು ಸಮರ್ಪಕ ಸಂಚಾರ ವ್ಯವಸ್ಥೆ ಇಲ್ಲದೆ ನಮ್ಮ ದೈನಂದಿನ ಜೀವನಕ್ಕೆ ತುಂಬಾ ಅನಾನುಕೂಲವಾಗಿದೆ ಎಂದು ಮನವರಿಕೆ ಮಾಡಿದರು.

ಅತ್ತಿಗುಂಡಿ, ಮಹಲ್‌, ಸಂಪಿಗೆಕಟ್ಟೆ ಮತ್ತಿತರೆ ಗ್ರಾಮಗಳಿಂದ ಚಿಕ್ಕಮಗಳೂರಿಗೆ ಬರಲುಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲ. ಇರುವ ಒಂದು ಖಾಸಗಿ ಬಸ್‌ ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ.ವಿದ್ಯಾರ್ಥಿಗಳು ಸಕಾಲಕ್ಕೆ ಮನೆ ತಲುಪಲು ಸಾಧ್ಯವಾಗುತ್ತಿಲ್ಲ.ಅಧಿಕಾರಿ , ಸಿಬ್ಬದಿಗೂ ಈ ಗ್ರಾಮಗಳಿಗೆ ಬಂದು ಹೋಗಲು ಆಗುತ್ತಿಲ್ಲ ಎಂದು ಹೇಳಿದರು.

ಮಿನಿ ಬಸ್‌ ಬಿಡುವ ಬಗ್ಗೆ ಸಾರಿಗೆ ಸಚಿವ, ಶಾಸಕ ಸಿ.ಟಿ.ರವಿ, ಜಿಲ್ಲಾ ಪಂಚಾಯಿತಿ ಸದಸ್ಯರು, ಲೋಕಸಭಾ ಸದಸ್ಯರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ತಾವು ಸಮಸ್ಯೆಯನ್ನು ಮನಗಂಡು ಕೂಡಲೇ ದತ್ತಪೀಠಕ್ಕೆ ಮಿನಿ ಬಸ್‌ ಬಿಡಲು ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ಮನವಿ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ