ಆ್ಯಪ್ನಗರ

‘ಕನಿಷ್ಠ ಆದಾಯ ಖಾತ್ರಿ ಯೋಜನೆ ಸ್ವಾಗತಾರ್ಹ’

ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಭಾರತದ ಬಡತನ ನಿರ್ಮೂಲನೆಗಾಗಿ ಘೋಷಿಸಿರುವ ಕನಿಷ್ಠ ಆದಾಯ ಖಾತ್ರಿ ಯೋಜನೆ ಸ್ವಾಗತಾರ್ಹ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಡಿ.ಎಲ್‌.ವಿಜಯಕುಮಾರ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vijaya Karnataka 28 Mar 2019, 5:00 am
ಚಿಕ್ಕಮಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಭಾರತದ ಬಡತನ ನಿರ್ಮೂಲನೆಗಾಗಿ ಘೋಷಿಸಿರುವ ಕನಿಷ್ಠ ಆದಾಯ ಖಾತ್ರಿ ಯೋಜನೆ ಸ್ವಾಗತಾರ್ಹ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಡಿ.ಎಲ್‌.ವಿಜಯಕುಮಾರ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Vijaya Karnataka Web Vijayakumar D.L.


ದೇಶದಲ್ಲಿ ಶೇ.20 ಅಂದರೆ ಸುಮಾರು 5 ಕೋಟಿ ಜನರ ಮಾಸಿಕ ಆದಾಯ 12 ಸಾವಿರ ರೂ.ಗಳಿಗಿಂತ ಕಡಿಮೆ ಇದ್ದು ಅವರ ಬದುಕು ಕಷ್ಟಕರವಾಗಿದೆ. ಇಂತಹ ಕುಟುಂಬಗಳಿಗೆ ವಾರ್ಷಿಕ 72 ಸಾವಿರ ರೂ.ಗಳನ್ನು ನೀಡುವ ಮೂಲಕ ಬಡತನದಿಂದ ಮೇಲೆತ್ತುವ, ಬಡವರು-ಶ್ರೀಮಂತರ ನಡುವಿನ ಅಂತರ ಕಡಿಮೆ ಮಾಡುವ ಕ್ರಾಂತಿಕಾರಿ ಯೋಜನೆಯಾಗಿದೆ ಎಂದಿದ್ದಾರೆ.

ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಗರೀಬಿ ಹಠಾವೊದಂತಹ ಜನಪ್ರಿಯ ಯೋಜನೆಯನ್ನು ನೆನಪಿಸುವಂತಹ ಕನಿಷ್ಠ ಆದಾಯ ಖಾತ್ರಿ ಯೋಜನೆ ದೇಶದ ಬಡಜನರ ಆಶಾಕಿರಣ. ಕೆಲ ತಿಂಗಳ ಹಿಂದೆ ನಡೆದ ರಾಜಸ್ತಾನ, ಮಧ್ಯಪ್ರದೇಶ, ಛತ್ತಿಸ್‌ಗಡ ಚುನಾವಣೆ ಸಂದರ್ಭ ಕಾಂಗ್ರೆಸ್‌ ಪಕ್ಷ ಆ ರಾಜ್ಯದ ರೈತರಿಗೆ ನೀಡಿದ್ದ ಭರವಸೆಯಂತೆ ಒಂದೇ ವಾರದಲ್ಲಿ ಕೃಷಿ ಸಾಲಮನ್ನಾ ಮಾಡಿತು. ಕಾಂಗ್ರೆಸ್‌ ನುಡಿದಂತೆ ನಡೆಯುವ ಪಕ್ಷ. ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಬಡತನ ನಿರ್ಮೂಲನೆ ಯೋಜನೆ ಜಾರಿ ಆಗುವುದರಲ್ಲಿ ಅನುಮಾನವಿಲ್ಲ ಎಂದು ಹೇಳಿದ್ದಾರೆ.

ನರೇಂದ್ರ ಮೋದಿ ಈ ಹಿಂದೆ ಯುಪಿಎ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಉದ್ಯೋಗ ಖಾತ್ರಿ, ಆಹಾರ ಭದ್ರತಾ ಕಾಯಿದೆ, ಭೂಸ್ವಾಧೀನ ಕಾಯಿದೆ, ಅರಣ್ಯ ಹಕ್ಕು ಕಾಯಿದೆಗಳನ್ನು ದುರ್ಬಲಗೊಳಿಸಿದರು. ಯುಪಿಎ ಸರಕಾರದ ರೈತರ ಬೆಳೆಯ ಶೇ.50 ಕನಿಷ್ಠ ಬೆಂಬಲ ಬೆಲೆಯನ್ನು ವಿರೋಧಿಸಿದ್ದಲ್ಲದೆ ರೈತರ ಕೃಷಿ ಸಾಲ ಮನ್ನಾವನ್ನು ಸಾರಾ ಸಗಟಾಗಿ ತಿರಸ್ಕರಿಸಿದ್ದಾರೆ ಎಂದಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡಗಳು, ಅತಿ ಹಿಂದುಳಿದ ವರ್ಗಗಳ ಸಬ್‌ ಪ್ಲಾನ್‌ ಕೂಡ ರದ್ದುಗೊಳಿಸಿದ್ದಾರೆ. ನೋಟು ಅಮಾನ್ಯೀಕರಣದ ನಂತರ ದೇಶದ ಕೋಟ್ಯಂತರ ಜನರ ಬದುಕು ದುಸ್ತರಗೊಂಡಿದೆ. ಜಿಎಸ್‌ಟಿ ಮೂಲಕ ಕೋಟ್ಯಂತರ ಜನರ ಉದ್ಯೋಗ ಕಿತ್ತುಕೊಂಡಿದ್ದಾರೆ. ಲಕ್ಷಾಂತರ ಉದ್ದಿಮೆಗಳು, ಸಣ್ಣ ಮತ್ತು ಮಧ್ಯಮ ವ್ಯಾಪಾರಸ್ಥರನ್ನು ಬೀದಿಗೆ ತಳ್ಳಿದ್ದಾರೆ ಎಂದು ದೂರಿದ್ದಾರೆ.

ಬಿಜೆಪಿ ನೇತೃತ್ವದ ಮೋದಿ ಸರಕಾರದ ಜನವಿರೋಧಿ ನೀತಿಗಳಿಗೆ ಅಂತ್ಯ ಹಾಡಬೇಕಾದರೆ ದೇಶದಲ್ಲಿ ಕಾಂಗ್ರೆಸ್‌ ನೇತೃತ್ವದ ಸರಕಾರ ಅಧಿಕಾರಕ್ಕೆ ಬರಬೇಕು. ಇದಕ್ಕಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ