ಆ್ಯಪ್ನಗರ

ಚಿಕ್ಕಮಗಳೂರು ರೈತರ ಸಮಸ್ಯೆ ಆಲಿಸಲು ನಿರ್ಮಲಾ ಸೀತಾರಾಮನ್ ಶುಕ್ರವಾರ ವಿಡಿಯೋ ಸಂವಾದ

ಅನೇಕ ರೀತಿಯ ಬೆಳೆಗಾರರು ಸಮಸ್ಯೆಗಳಿಂದ ಹೈರಾಣಾಗಿದ್ದು, ಇನ್ನೂ ಪೂರಕವಾದ ಸ್ಪಂದನೆ ದೊರೆತಿಲ್ಲ. ಹೀಗಾಗಿ ನಾಳೆ ನಿರ್ಮಲಾ ಸೀತಾರಾಮನ್ ಅವರು ಜಿಲ್ಲೆಯ ಬೆಳೆಗಾರರೊಂದಿಗೆ ವಿಡಿಯೋ ಸಂವಾದದ ಮೂಲಕ ಸಮಸ್ಯೆಗಳನ್ನು ಆಲಿಸಲಿದ್ದಾರೆ.

Vijaya Karnataka Web 3 Sep 2020, 5:43 pm
ಚಿಕ್ಕಮಗಳೂರು: ಜಿಲ್ಲೆಯ ರೈತ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶುಕ್ರವಾರ ವಿಡಿಯೋ ಸಂವಾದ ನಡೆಸಲಿದ್ದಾರೆ.
Vijaya Karnataka Web nirmala sitharaman


ಚಿಕ್ಕಮಗಳೂರು ಭಾಗದಲ್ಲಿ ಧಾರಾಕಾರ ಮಳೆ: ಮಂದಹಾಸ ಮೂಡಿಸಿದ ಇಳಿ ಸಂಜೆಯ ಮಳೆ!

ಚಿಕ್ಕಮಗಳೂರು ಜಿಲ್ಲೆಯ ಬೆಳೆಗಾರರು ಕಳೆದ ಕೆಲವು ವರ್ಷಗಳಿಂದ ಭೂ ಕುಸಿತ, ವಿಪರೀತ ಮಳೆ, ಕಳೆ ರೋಗ ಸೇರಿದಂತೆ ಅನೇಕ ರೀತಿಯ ಸಮಸ್ಯೆಗಳಿಂದ ಹೈರಾಣಾಗಿದ್ದು, ಇನ್ನೂ ಪೂರಕವಾದ ಸ್ಪಂದನೆ ದೊರೆತಿಲ್ಲ. ಹೀಗಾಗಿ ನಾಳೆ ನಿರ್ಮಲಾ ಸೀತಾರಾಮನ್ ಅವರು ಜಿಲ್ಲೆಯ ಬೆಳೆಗಾರರೊಂದಿಗೆ ವಿಡಿಯೋ ಸಂವಾದದ ಮೂಲಕ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ಮಲೆನಾಡಿನ ಹಳ್ಳಿ ಹಳ್ಳಿಗೂ ವ್ಯಾಪಿಸಿದೆ ಡ್ರಗ್ಸ್ ಮಾಫಿಯಾ..! ಕಿಂಗ್‌ಪಿನ್‌ಗಳ ಬೃಹತ್ ನೆಟ್‌ವರ್ಕ್..!

ನಾಳೆ ಸಂಜೆ 3.45ರ ಸುಮಾರಿಗೆ ವಿಡಿಯೋ ಸಂವಾದ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವ ಸಿಟಿ ರವಿ ತಿಳಿಸಿದ್ದಾರೆ.

ಉತ್ಕೃಷ್ಟ ಗೋತಳಿ ವಿನಾಶದಂಚಿಗೆ, ಮಲ್ನಾಡ್‌ ಗಿಡ್ಡ ಕಟುಕರ ಪಾಲು!

ಕಳೆದ ಆಗಸ್ಟ್ 18ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ನಿಯೋಗವೊಂದು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ