ಆ್ಯಪ್ನಗರ

ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚನೆ

ಪದವೀಧರ ಪ್ರಾಥಮಿಕ ಶಾಲಾ ಶಿಕ್ಷ ಕರ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಮೇ 25 ಮತ್ತು 26ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಶಿಕ್ಷ ಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

Vijaya Karnataka 22 May 2019, 5:00 am
ಚಿಕ್ಕಮಗಳೂರು : ಪದವೀಧರ ಪ್ರಾಥಮಿಕ ಶಾಲಾ ಶಿಕ್ಷ ಕರ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆ ಮೇ 25 ಮತ್ತು 26ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್‌ ಶಿಕ್ಷ ಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka Web notice to authorities for necessary preparation
ಅಗತ್ಯ ಸಿದ್ಧತೆಗೆ ಅಧಿಕಾರಿಗಳಿಗೆ ಸೂಚನೆ


ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷ ಕರ ನೇಮಕಾತಿ ಸ್ವರ್ಧಾತ್ಮಕ ಪರೀಕ್ಷೆ ಸಿದ್ಧತೆಗಳ ಬಗ್ಗೆ ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷ ತೆ ವಹಿಸಿ ಅವರು ಮಾತನಾಡಿದರು.

85 ಅಭ್ಯರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದಾರೆ. ನಗರದ ಬೇಲೂರು ರಸ್ತೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದ್ದು, 25ರಂದು ಸಾಮಾನ್ಯ ಪತ್ರಿಕೆ ಹಾಗೂ ಆಂಗ್ಲ ಭಾಷಾ ಪತ್ರಿಕೆ, 26ರಂದು ಗಣಿತ ಮತ್ತು ವಿಜ್ಞಾನ, ಸಮಾಜ ಪಾಠಗಳು ಹಾಗೂ ಭಾಷಾ ಸಾಮರ್ಥ್ಯ‌ ಪರೀಕ್ಷೆ ನಡೆಯಲಿದೆ ಎಂದು ಹೇಳಿದರು.

ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀ. ವ್ಯಾಪ್ತಿಯಲ್ಲಿ ಸೆಕ್ಷ ನ್‌ 144ರ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಉಪ ಪ್ರಾಂಶುಪಾಲ ಡಿ.ಎಸ್‌.ಪುಟ್ಟಸ್ವಾಮಿಗೌಡ ಅವರನ್ನು ಮುಖ್ಯ ಅಧೀಕ್ಷ ಕರನ್ನಾಗಿ ನೇಮಿಸಲಾಗಿದ್ದು, ಕೊಠಡಿ ಮೇಲ್ವಿಚಾರಕರನ್ನು ಪರೀಕ್ಷೆ ಕೇಂದ್ರದ ಮುಖ್ಯ ಅಧೀಕ್ಷ ಕರ ಮೂಲಕ ನೇಮಕ ಮಾಡಿಕೊಳ್ಳುವಂತೆ ಸೂಚಿಸಿದ ಅವರು, ಅಂಬಳೆ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷ ಕ ಎಸ್‌.ಸುಬ್ರಹ್ಮಣ್ಯ ಅವರನ್ನು ಮಾರ್ಗಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಉಪನಿರ್ದೇಶಕರ ಕಚೇರಿಯ ವಿಷಯ ಪರಿವೀಕ್ಷ ಕ ಎಂ.ಕೆ.ಪತ್ತಾರ್‌ ಅವರನ್ನು ಸ್ಥಾನಿಕ ಜಾಗೃತ ದಳದ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಪರೀಕ್ಷೆ ಕೇಂದ್ರದ ಬಳಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗುವುದು ಎಂದರು.

ಪರೀಕ್ಷೆಯಲ್ಲಿ ಯಾವುದೇ ಆಕ್ರಮಗಳಿಗೆ ಆಸ್ಪದ ನೀಡದೆ ಕಟ್ಟುನಿಟ್ಟಾಗಿ ನಡೆಸಬೇಕು. ಪರೀಕ್ಷಾ ಆಕ್ರಮಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಯನ್ನು ಜವಾಬ್ದಾರರನ್ನಾಗಿ ಮಾಡಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ 2 ಆಂಗ್ಲ ಭಾಷೆ ಹುದ್ದೆಗಳು, 45 ವಿಜ್ಞಾನ ವಿಷಯದ ಹುದ್ದೆಗಳು ಸೇರಿದಂತೆ ಒಟ್ಟು 47 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. 85 ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿದ್ದಾರೆ ಎಂದು ಸಾರ್ವಜನಿಕ ಶಿಕ್ಷ ಣ ಇಲಾಖೆ ಉಪನಿರ್ದೇಶಕ ನಂಜಯ್ಯ ಮಾಹಿತಿ ನೀಡಿದರು. ಜಿಲ್ಲಾ ಖಜಾನಾಧಿಕಾರಿ ಫಯಾಜ್‌ ಅಹಮ್ಮದ್‌ ಸೇರಿದಂತೆ ವಿವಿಧ ಇಲಾಖೆæ ಅಧಿಕಾರಿಗಳು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ