ಆ್ಯಪ್ನಗರ

ಅಧಿಕಾರಿ, ಜನಪ್ರತಿನಿಧಿಗಳು ನಗರ ಬಿಟ್ಟು ನೆರೆ ಸ್ಥಳಕ್ಕೆ ಧಾವಿಸಲಿ

ಅಧಿಕಾರಿ, ಜನಪ್ರತಿನಿಧಿಗಳು ಜಿಲ್ಲಾ ಕೇಂದ್ರದಲ್ಲಿ ಕೂತು ಸಭೆ ನಡೆಸುವುದರಿಂದ ಪ್ರಯೋಜನವಿಲ್ಲ. ಅತಿವೃಷ್ಟಿ ಹಾನಿ ಪ್ರದೇಶಕ್ಕೆ ತೆರಳಿ ಆಗಿರುವ ಬೆಳೆ ನಷ್ಟ, ಸಾರ್ವಜನಿಕ ಆಸ್ತಿಹಾನಿ ಸಮೀಕ್ಷೆ ಮಾಡಿ ಸರಕಾರಕ್ಕೆ ವರದಿ ನೀಡಬೇಕು ಎಂದು ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್‌.ಎಚ್‌.ದೇವರಾಜ್‌ ಆಗ್ರಹಿಸಿದರು.

Vijaya Karnataka 11 Aug 2019, 5:00 am
ಚಿಕ್ಕಮಗಳೂರು : ಅಧಿಕಾರಿ, ಜನಪ್ರತಿನಿಧಿಗಳು ಜಿಲ್ಲಾ ಕೇಂದ್ರದಲ್ಲಿ ಕೂತು ಸಭೆ ನಡೆಸುವುದರಿಂದ ಪ್ರಯೋಜನವಿಲ್ಲ. ಅತಿವೃಷ್ಟಿ ಹಾನಿ ಪ್ರದೇಶಕ್ಕೆ ತೆರಳಿ ಆಗಿರುವ ಬೆಳೆ ನಷ್ಟ, ಸಾರ್ವಜನಿಕ ಆಸ್ತಿಹಾನಿ ಸಮೀಕ್ಷೆ ಮಾಡಿ ಸರಕಾರಕ್ಕೆ ವರದಿ ನೀಡಬೇಕು ಎಂದು ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಚ್‌.ಎಚ್‌.ದೇವರಾಜ್‌ ಆಗ್ರಹಿಸಿದರು.
Vijaya Karnataka Web officerrepresentatives leave city move to neighborhood
ಅಧಿಕಾರಿ, ಜನಪ್ರತಿನಿಧಿಗಳು ನಗರ ಬಿಟ್ಟು ನೆರೆ ಸ್ಥಳಕ್ಕೆ ಧಾವಿಸಲಿ


ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಮಲೆನಾಡಿನ ಮೂಡಿಗೆರೆ, ಕೊಪ್ಪ, ಶೃಂಗೇರಿ ಭಾಗದಲ್ಲಿ ಅತ್ಯಧಿಕ ಮಳೆಯಾಗಿದೆ. ಕಾಫಿ, ಅಡಕೆ, ಮೆಣಸು, ಭತ್ತದ ಬೆಳೆ ಮಳೆ ರಭಸ ಮತ್ತು ಪ್ರವಾಹಕ್ಕೆ ನೆಲಕಚ್ಚಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಅಧಿಕಾರಿಗಳು ಸಭೆ ಮಾಡುವುದನ್ನು ಬಿಟ್ಟು ಹಳ್ಳಿಗಳಿಗೆ ತೆರಳಲಿ. ತೊಂದರೆಗೆ ಸಿಲುಕಿದ ಜನರಿಗೆ ಸಾಂತ್ವನ ಹೇಳುವ ಜತೆಗೆ ಪರಿಹಾರ ಕ್ರಮಕ್ಕೆ ಮುಂದಾಗಬೇಕು. ಬೆಳೆಹಾನಿಯಿಂದ ನಷ್ಟಕ್ಕೊಳಗಾಗಿರುವ ರೈತರಿಗೆ ಸ್ಥಳದಲ್ಲಿಯೇ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಸರಕಾರ ರಚನೆಯಾಗಿ 15 ದಿನವಾದರೂ ಮಂತ್ರಿ ಮಂಡಲ ರಚನೆಯಾಗಲಿಲ್ಲ. ಇಲ್ಲಿನ ಎಂಪಿ ಶೋಭಾ ಕರಂದ್ಲಾಜೆ ಅವರು ಬಿಜೆಪಿ ಮುಖಂಡರನ್ನು ಭೇಟಿ ಮಾಡಿ, ಅಧಿಕಾರಿಗಳ ಸಭೆ ನಡೆಸಿ, ಹಾಲೂರು ನೋಡಿಕೊಂಡು ಬೆಂಗಳೂರಿಗೆ ಹೋಗಿದ್ದಾರೆ. ಜನರು ಯಾರ ಬಳಿ ಸಮಸ್ಯೆ ಹೇಳಿಕೊಳ್ಳಬೇಕು ಎಂದು ಪ್ರಶ್ನಿಸಿದ ಅವರು, ಇಲ್ಲಿಗೆ ಒಬ್ಬ ವಿಶೇಷ ಅಧಿಕಾರಿಯನ್ನು ನೇಮಿಸಬೇಕು. ಮಲೆನಾಡಿನಲ್ಲಿ ಪ್ರವಾಹದಿಂದ ಕೋಟ್ಯಂತರ ರೂ.ನಷ್ಟ ಉಂಟಾಗಿದ್ದು ಈ ಬಗ್ಗೆ ಸಮೀಕ್ಷೆ ನಡೆಸಿ ವರದಿ ನೀಡಬೇಕು. ರೈತರು ಸಂಕಷ್ಟದಲ್ಲಿ ಸಿಲುಕಿದ್ದು ಸಾಲ ವಸೂಲಾತಿಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಜೆಡಿಎಸ್‌ ಎಸ್ಸಿಎಸ್ಟಿ ಘಟಕದ ಮುಖಂಡ ಲಕ್ಷ್ಮಣ ಮಾತನಾಡಿ, ಪ್ರವಾಹದಿಂದ ಹಳ್ಳಿಗಾಡಿನಲ್ಲಿ ಅನಾರೋಗ್ಯ ಸಮಸ್ಯೆ ಕಾಡುತ್ತಿದ್ದು, ಜಿಲ್ಲಾಡಳಿತ ಗಮನಹರಿಸಬೇಕು ಎಂದು ಹೇಳಿದರು. ಜೆಡಿಎಸ್‌ ಮುಖಂಡರಾದ ಚಂದ್ರಪ್ಪ, ಜಮೀಲ್‌ಅಹ್ಮದ್‌, ಮಂಜಪ್ಪ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ