ಆ್ಯಪ್ನಗರ

ಸಮಯ ಪಾಲನೆಯಿಂದ ಸಾಧನೆ ಸಾಧ್ಯ

ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು, ಸಮಯ ಪಾಲನೆ, ಕಠಿಣ ಪರಿಶ್ರಮವಿದ್ದರೆ ಮಾತ್ರ ಸಾಧನೆಯ ಶಿಖರ ತಲುಪಬಹುದು ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು.

Vijaya Karnataka 9 Jul 2019, 5:00 am
ಆಲ್ದೂರು : ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು, ಸಮಯ ಪಾಲನೆ, ಕಠಿಣ ಪರಿಶ್ರಮವಿದ್ದರೆ ಮಾತ್ರ ಸಾಧನೆಯ ಶಿಖರ ತಲುಪಬಹುದು ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದರು.
Vijaya Karnataka Web CKM-7ALDUR1


ಪಟ್ಟಣದ ಮಾನಸ ಶಾಲೆಯಲ್ಲಿ ಏರ್ಪಡಿಸಿದ್ದ ಪರಿಸರ ದಿನಾಚಾರಣೆ ಕಾರ್ಯಕ್ರಮ ಅಂಗವಾಗಿ ಶಾಲೆ ಆವರಣದಲ್ಲಿ ಸಸಿ ನೆಟ್ಟು ಮಾತನಾಡಿದರು.

ಸಮಯ ಪಾಲನೆ ಅಮೂಲ್ಯವಾದುದು. ಬೀದಿ ದೀಪದ ಕೆಳಗೆ ಓದಿ ಇತಿಹಾಸ ನಿರ್ಮಿಸಿದ ಸರ್‌.ಎಂ.ವಿಶ್ವೇಶ್ವರಯ್ಯ, ಅಂಬೇಡ್ಕರ್‌ ಅವರನ್ನು ವಿಶ್ವವೇ ಸ್ಮರಿಸುತ್ತಿದೆ. ಇತಿಹಾಸ ಓದುವ ವ್ಯಕ್ತಿಗಳಾಗಬೇಡಿ. ಇತಿಹಾಸ ನಿರ್ಮಿಸುವ ವ್ಯಕ್ತಿಗಳಾಗಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಪ್ರಸ್ತುತ ದಿನಗಳಲ್ಲಿ ಅರಣ್ಯ ನಾಶದಿಂದಾಗಿ ಪ್ರಕೃತಿ ವಿಕೋಪಗಳು ಹೆಚ್ಚುತ್ತಿವೆ. ಅತಿವೃಷ್ಟಿ ಅನಾವೃಷ್ಟಿಯಂತಹ ಗಂಡಾಂತರಗಳನ್ನು ನಾವು ಎದುರಿಸುತ್ತಿದ್ದೇವೆ. ಕೆರೆಗಳು ಮಾಯವಾಗಿವೆ. ಗದ್ದೆಗಳು ಪಾಳು ಬಿದ್ದಿರುವ ಪರಿಣಾಮ ಅಂತರ್ಜಲದ ಮಟ್ಟ ಕುಸಿಯುತ್ತಿದೆ. ಕಾಡನ್ನು ಉಳಿಸಿ ಬೆಳೆಸದಿದ್ದರೆ ಭೀಕರ ಗಂಡಾಂತರಗಳನ್ನು ಎದುರಿಸುವ ಸ್ಥಿತಿ ನಿರ್ಮಾಣವಾಗುತ್ತದೆ ಎಂದರು.

ಶಾಲೆ ಮುಖ್ಯ ಶಿಕ್ಷಕಿ ಸಾವಿತ್ರಿ ಮಾತನಾಡಿ, ಶಾಲೆಗೆ ಹೆಚ್ಚುವರಿ ಕೊಠಡಿಗಳ ಅವಶ್ಯಕತೆ ಇದೆ. ತಮ್ಮ ಅನುದಾನದಲ್ಲಿ ಶಾಲೆ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಸಲ್ಲಿಸಿದರು.

ಇದೇ ಸಂದರ್ಭ ಶಾಲೆ ವಿದ್ಯಾರ್ಥಿಗಳ ಮಂತ್ರಿ ಮಂಡಲ ರಚಿಸಲಾಯಿತು.

ಬಿಜೆಪಿ ಮುಖಂಡರಾದ ನಾರಾಯಣ ಆಚಾರ್ಯ, ಗ್ರಾ.ಪಂ. ಮಾಜಿ ಸದಸ್ಯ ನಾಗೇಶ್‌, ಶಾಲೆ ಶಿಕ್ಷಕರಾದ ಕೃಷ್ಣಪೂಜಾರಿ, ಮುನಿಸ್ವಾಮಿ, ಮಹೇಂದ್ರ, ಸತ್ಯನಾರಾಯಣ, ಜ್ಯೋತಿ ಕಾರ್ಯಕ್ರದಲ್ಲಿ ಪಾಲ್ಗೊಂಡಿದ್ದರು.

ಶಿಕ್ಷಕರಾದ ಚಂದ್ರಶೇಖರ್‌ ಸ್ವಾಗತಿಸಿದರು. ವೀರಣ್ಣ ಹಿರೇಮಠ್‌ ನಿರೂಪಿಸಿ, ಸಾವಿತ್ರಿ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ