ಆ್ಯಪ್ನಗರ

ಚಾರ್ಮಾಡಿ ಘಾಟಿಯಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿ

ರಾಷ್ಟ್ರೀಯ ಹೆದ್ದಾರಿ-73ರ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ ಉಂಟಾಗಿದ್ದರಿಂದ ಹಾಗೂ ರಿಪೇರಿ ಕಾರ್ಯಾಚರಣೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ನಿಷೇಧಿಸಲಾಗಿತ್ತು.

Vijaya Karnataka Web 29 Aug 2019, 7:53 pm
ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ 73ರ (ಹಳೆಯ ಸಂಖ್ಯೆ-234) ಮಂಗಳೂರು-ವಿಲ್ಲುಪುರಂ ರಸ್ತೆಯ ಚಿಕ್ಕಮಗಳೂರು ವ್ಯಾಪ್ತಿಯ 86.200 ರಿಂದ 99.200 ಕಿ.ಮೀ (ಕೊಟ್ಟಿಗೆಹಾರ) ವರೆಗಿನ ಚಾರ್ಮಾಡಿ ಘಾಟ್ ಭಾಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದೆ.
Vijaya Karnataka Web ಚಾರ್ಮಾಡಿ
ಚಾರ್ಮಾಡಿ


ಭಾರಿ ಪ್ರಮಾಣದ ಮಳೆಯಿಂದ ಗುಡ್ಡ ಕುಸಿತ ಹಾಗೂ ಮರಗಳು ರಸ್ತೆಗುರುಳಿದ ಹಿನ್ನಲೆಯಲ್ಲಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ಮೋಟಾರು ವಾಹನಗಳ ಕಾಯ್ದೆ ಪ್ರಕಾರ ಕೊಟ್ಟಿಗೆಹಾರ ವ್ಯಾಪ್ತಿಯವರಗೆ ವಾಹನಗಳ ಸಂಚಾರವನ್ನು ಸೆಪ್ಟೆಂಬರ್ 14ರ ವರೆಗೆ ನಿಷೇಧಿಸಲಾಗಿತ್ತು.

ಪ್ರಯಾಣಿಕರ ಹಿತದೃಷ್ಟಿಯಿಂದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿರುವುದರಿಂದ ಸದರಿ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲವನ್ನು ಪರಿಗಣಿಸಿ ಈ ಭಾಗದಲ್ಲಿ ವಾಹನ ಸಂಚಾರವನ್ನು ಮುಕ್ತಗೊಳಿಸಿ, ಆಗಸ್ಟ್ 29 ರಿಂದ ಬೆಳಗ್ಗೆಯಿಂದ ಸಂಜೆ 6ರವರೆಗೆ ಸೀಮಿತಗೊಳಿಸಿ ಮಳೆಗಾಲ ಮುಗಿಯುವವರೆಗೆ ಲಘು ವಾಹನಗಳಾದ ಕಾರುಗಳು, ಜೀಪು, ಟೆಂಪೋ, ವ್ಯಾನ್, ಎಲ್‌ಸಿವಿ (ಮಿನಿ ವ್ಯಾನ್) ದ್ವಿಚಕ್ರ ವಾಹನಗಳು ಹಾಗೂ ಆಂಬುಲೆನ್ಸ್ ವಾಹನಗಳ ಓಡಾಟಕ್ಕೆ ಅನುವು ಮಾಡಿಕೊಟ್ಟಿದೆ.

ಭಾರೀ ವಾಹನಗಳಾದ ಕೆ.ಎಸ್.ಆರ್.ಟಿ.ಸಿ ಬಸ್ಸುಗಳು, ಲಾರಿಗಳು, ಬುಲೆಟ್ ಟ್ಯಾಂಕರ್‌ಗಳು, ಷಿಪ್ ಕಾರ್ಗೋ ಕಂಟೈನರ್ಸ್ ಹಾಗೂ ಲಾಂಗ್ ಚಾಸೀಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಆಕ್ಸೆಲ್ ಟ್ರಕ್, ಟ್ರಕ್ ಟ್ರೈಲರ್ ಮತ್ತು ಎಲ್ಲಾ ಬಗೆಯ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ