ಆ್ಯಪ್ನಗರ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

Vijaya Karnataka 5 Jul 2018, 9:12 pm
ಚಿಕ್ಕಮಗಳೂರು: ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
Vijaya Karnataka Web protest demand for fulfillment of various demand
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ


ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಕೆ.ಪಿ.ರಾಜರತ್ನಂ ನೇತೃತ್ವದಲ್ಲಿ ನಗರದ ಆಜಾದ್‌ ಪಾರ್ಕಿನಲ್ಲಿ ಪ್ರತಿಭಟಿಸಿದ ಹಲವಾರು ಕಾರ್ಯಕರ್ತರು ವಿವಿಧ ಬೇಡಿಕೆಗಾಗಿ ಆಗ್ರಹಿಸಿ ಘೋಷಣೆ ಕೂಗಿದರು.

ಈ ಸಂದರ್ಭ ರಾಜರತ್ನಂ ಮಾತನಾಡಿ, ನಗರದ ವಿಶ್ವ ವಿದ್ಯಾಲಯ ಶಾಲೆಯಲ್ಲಿನ ಈಗಿರುವ ಆಡಳಿತ ಮಂಡಳಿಯನ್ನು ರದ್ದುಪಡಿಸಿ ಅಧ್ಯಕ್ಷ, ಕಾರ್ಯದರ್ಶಿ ಮೇಲೆ ಮೊಕದ್ದಮೆ ದಾಖಲಿಸಬೇಕು. ಹಾಗೂ ಆ ಸಂಸ್ಥೆಯಲ್ಲಿ ಬಯಸಿದವರೆಲ್ಲರಿಗೂ ಸದಸ್ಯತ್ವ ನೀಡಬೇಕು ಎಂದು ಒತ್ತಾಯಿಸಿದರು.

ಹಾದಿಹಳ್ಳಿ ಸಮುದಾಯ ಭವನ ನಿರ್ಮಾಣಕ್ಕಾಗಿ ಗುರುತಿಸಿರುವ ಜಾಗಕ್ಕೆ ಕೂಡಲೇ ಖಾತೆ ಮಾಡಿಕೊಡಬೇಕು ಹಾಗೂ ಅಲ್ಲಿ ಸಮುದಾಯ ಭವನ ನಿರ್ಮಿಸಬೇಕು. ತಾಲೂಕಿನ ತಡಗಸೆಯಲ್ಲಿ ಪರಿಶಿಷ್ಟ ಜನಾಂಗದ ವ್ಯಕ್ತಿಯಿಂದ ಭೂಮಿ ಖರೀದಿಸಿರುವ ಮೇಲ್ಜಾತಿ ವ್ಯಕ್ತಿ ಮತ್ತು ಮಾರಿದ ವ್ಯಕ್ತಿಯ ಮೇಲೂ ಕೇಸು ದಾಖಲಿಸಬೇಕು. ನಗರಸಭೆ ಪೌರಾಯುಕ್ತರು ಸಿಬ್ಬಂದಿಗೆ ಕಿರುಕುಳ ನೀಡುತ್ತಿದ್ದು ಅವರನ್ನು ಇಲ್ಲಿಂದ ಕೂಡಲೇ ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ಡಿಎಸ್‌ಎಸ್‌ ಮುಖಂಡರಾದ ಹಾದಿಹಳ್ಳಿ ಪುಟ್ಟಸ್ವಾಮಿ, ನಿಂಗಯ್ಯ, ಗಣೇಶ್‌, ಲಕ್ಷ್ಮಣ, ದಿವಾಕರ ಮತ್ತಿತರರು ಹಾಜರಿದ್ದರು. ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ