ಆ್ಯಪ್ನಗರ

ನಿವೇಶನಕ್ಕೆ ಆಗ್ರಹಿಸಿ ಪ್ರತಿಭಟನೆ

ನಗರ ಪ್ರದೇಶದ ನಿರ್ಗತಿಕ, ದೀನದಲಿತ, ಅಲ್ಪಸಂಖ್ಯಾತ ಬಡವರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಶನಿವಾರ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.

Vijaya Karnataka 3 Mar 2019, 10:16 pm
ಚಿಕ್ಕಮಗಳೂರು: ನಗರ ಪ್ರದೇಶದ ನಿರ್ಗತಿಕ, ದೀನದಲಿತ, ಅಲ್ಪಸಂಖ್ಯಾತ ಬಡವರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಶನಿವಾರ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
Vijaya Karnataka Web protest demand for land
ನಿವೇಶನಕ್ಕೆ ಆಗ್ರಹಿಸಿ ಪ್ರತಿಭಟನೆ


ಜಿಲ್ಲಾ ಸಂಚಾಲಕ ಕೆ.ಕುಮಾರ್‌ ಮಾತನಾಡಿ, ನಗರ ವ್ಯಾಪ್ತಿಯಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಸುತ್ತಮುತ್ತಲಿನ ನಿರಾಶ್ರಿತರಿಗೆ ನಗರಸಭೆಗೆ ಸೇರಿದ ಖಾಲಿ ಜಾಗದಲ್ಲಿ ನಿವೇಶನ ಕೊಡಬೇಕು. ಇಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುಡಿಸಲು ಕಟ್ಟಿಕೊಂಡು ವಾಸಿಸುತ್ತಿದ್ದ ಈ ಕುಟುಂಬಗಳನ್ನು ಏಕಾಏಕಿ ತೆರವು ಮಾಡಲಾಗಿದೆ. ಆ ಕುಟುಂಬಗಳು ಬೀದಿಪಾಲಾಗಿವೆ ಎಂದರು.

ಇಂದಿರಾಗಾಂಧಿ ಬಡಾವಣೆ, ವಾಜಪೇಯಿ ಬಡಾವಣೆಗಳಲ್ಲಿ ರಾಜಕೀಯ ಪಕ್ಷದ ಕೆಲವು ಬ್ರೋಕರ್‌ಗಳು ನಿವೇಶನಗಳನ್ನು ಲಕ್ಷಾಂತರ ಹಣ ಪಡೆದು ಶ್ರೀಮಂತರಿಗೆ ಮಾರಾಟ ಮಾಡುತ್ತಿದ್ದಾರೆ. ಇವರ ವಿರುದ್ಧ ನಗರಾಭಿವೃದ್ಧಿ ಪ್ರಾಧಿಕಾರ, ನಗರಸಭೆ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ನಗರ ಸಂಚಾಲಕ ಉಮೇಶ್‌, ತಾಲೂಕು ಸಂಚಾಲಕ ನರೇಂದ್ರಕುಮಾರ್‌, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಇಲಿಯಾಜ್‌ ಅಹಮದ್‌, ಕಂಬಿಗೆರೆ ಮೋಹನ್‌, ಬೀರೂರು ಮೋಹನ್‌ಕುಮಾರ್‌, ಕಡೂರು ದೇವು ಹಾಜರಿದ್ದರು.

ಫೋಟೊ: 2 ಆರಗ-ಪಿ8

ಚಿಕ್ಕಮಗಳೂರಿನಲ್ಲಿ ಶನಿವಾರ ನಿರ್ಗತಿಕ ಕುಟುಂಬಗಳಿಗೆ ನಿವೇಶನಕ್ಕೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ‍್ಯಕರ್ತರು ಪ್ರತಿಭಟನೆ ನಡೆಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ