ಆ್ಯಪ್ನಗರ

ಜಿಲ್ಲೆಗೆ 111 ಕೋಟಿ ರೂ. ಅನುದಾನ ಬಿಡುಗಡೆ

ಜಿಲ್ಲೆಗೆ ರಸ್ತೆ ಮತ್ತು ಸೇತುವೆ ಕಾಮಗಾರಿಗಳಿಗೆ 111.68 ಕೋಟಿ ರೂ.ಅನುದಾನ ಬಿಡುಗಡೆಯಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಎಸ್‌.ಎಲ್‌.ಬೋಜೇಗೌಡ ಹೇಳಿದರು.

Vijaya Karnataka 10 Mar 2019, 5:00 am
ಚಿಕ್ಕಮಗಳೂರು : ಜಿಲ್ಲೆಗೆ ರಸ್ತೆ ಮತ್ತು ಸೇತುವೆ ಕಾಮಗಾರಿಗಳಿಗೆ 111.68 ಕೋಟಿ ರೂ.ಅನುದಾನ ಬಿಡುಗಡೆಯಾಗಿದೆ ಎಂದು ವಿಧಾನಪರಿಷತ್‌ ಸದಸ್ಯ ಎಸ್‌.ಎಲ್‌.ಬೋಜೇಗೌಡ ಹೇಳಿದರು.
Vijaya Karnataka Web rs 111 crore to the district grant release
ಜಿಲ್ಲೆಗೆ 111 ಕೋಟಿ ರೂ. ಅನುದಾನ ಬಿಡುಗಡೆ


ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿವಿಧ ಕಾಮಗಾರಿಗಳ ಪಟ್ಟಿಯನ್ನು ತಾವು ಮತ್ತು ವಿಧಾನಪರಿಷತ್‌ ಉಪಸಭಾಪತಿ ಎಸ್‌.ಎಲ್‌.ಧರ್ಮೇಗೌಡ ಅವರು ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ಅವರಿಗೆ ಸಲ್ಲಿಸಿದ್ದೆವು. ಅದಕ್ಕೆ ಅನುಮೋದನೆ ನೀಡಿರುವ ಸಚಿವರು 5054 ಲೆಕ್ಕಶೀರ್ಷಿಕೆಯಡಿ ಕಡೂರು ಮತ್ತು ಚಿಕ್ಕಮಗಳೂರು ತಾಲೂಕಿನ ವಿವಿಧ 36 ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದರು.

ಕಡೂರು ತಾಲೂಕಿನ ಅಯ್ಯನಕೆರೆ ಸುತ್ತಲ ನಾಲೆಗಳ ಅಭಿವೃದ್ಧಿಗಾಗಿ ಸಣ್ಣ ನೀರಾವರಿ ಇಲಾಖೆಗೆ 5.64 ಕೋಟಿ ರೂ.ಗಳನ್ನು ಸಹ ಸರಕಾರ ಬಿಡುಗಡೆ ಮಾಡಿದೆ. ಇದರೊಟ್ಟಿಗೆ ಹೊನ್ನಮ್ಮನಹಳ್ಳದಿಂದ ರಾಮೇಶ್ವರ ಕೆರೆ ಮೂಲಕ ದಾಸರಹಳ್ಳಿ ಕಣಿವೆ, ಲಕ್ಯಾ ಭಾಗದ ಕೆರೆಗಳನ್ನು ತುಂಬಿಸುವ ಯೋಜನೆಗೆ ವಿಸ್ತೃತ ಯೋಜನೆ ಸಿದ್ಧಪಡಿಸಲು ಸರಕಾರ ಸೂಚನೆ ನೀಡಿದೆ ಎಂದರು.

ಈ ಬಾರಿ ಬಜೆಟ್‌ ನಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜಿಲ್ಲೆಗೆ ಈ ಹಿಂದಿನ ಯಾವುದೇ ಸರಕಾರಗಳು ನೀಡದಷ್ಟು ಕೊಡುಗೆ ನೀಡಿದ್ದಾರೆ. ಬಹುದಿನದ ಬೇಡಿಕೆಯಾಗಿದ್ದ ಜಿಲ್ಲಾಸ್ಪತ್ರೆ ಮೇಲ್ದರ್ಜೆಗೇರಿಸಲು ಬಜೆಟ್‌ನಲ್ಲಿ 50 ಕೋಟಿ ರೂ.ಮೀಸಲಿಡಲಾಗಿದೆ. ಕಳೆದ ವಾರ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯೊಂದಿಗೆ ಈ ಬಗ್ಗೆ ಚರ್ಚಿಸಿ, ಕೂಡಲೆ ಯೋಜನೆ ರೂಪುರೇಷೆ ಸಿದ್ಧಪಡಿಸಲು ತಿಳಿಸಲಾಗಿದೆ ಎಂದರು.

ಮಲೆನಾಡು ಭಾಗದಲ್ಲಿ ಸೇತುವೆಗಳು ಇಲ್ಲದಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಓಡಾಡಲು ತೀವ್ರ ತೊಂದರೆಯಾಗಿತ್ತು. ಬಜೆಟ್‌ನಲ್ಲಿ ರಾಜ್ಯದ ವಿವಿಧೆಡೆ 1317 ಕಿರುಸೇತುವೆ ನಿರ್ಮಿಸಲು 100 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಇದರಲ್ಲಿ ಜಿಲ್ಲೆಯ ಮೂಡಿಗೆರೆ ಹಾಗೂ ಶೃಂಗೇರಿ ವಿಧಾನಸಭಾ ಕ್ಷೇತ್ರಕ್ಕೆ ಸಾಕಷ್ಟು ಅನುಕೂಲವಾಗಲಿದೆ ಎಂದರು.

ಹೆಬ್ಬೆ ಯೋಜನೆಗೆ ಮಂಜೂರಾತಿ ನೀಡಿ 100 ಕೋಟಿ ರೂ. ನೀಡಲಾಗಿದೆ. ಇದರಿಂದ ಕಡೂರು ಹಾಗೂ ತರೀಕೆರೆ ತಾಲೂಕಿನ ಹಲವು ಕೆರೆಗಳಿಗೆ ನೀರು ತುಂಬಿಸಲಾಗುವುದು. ಹಾಸನ ಹಾಗೂ ಚಿಕ್ಕಮಗಳೂರು ವಿಮಾನ ನಿಲ್ದಾಣವನ್ನು ಖಾಸಗಿ ಸಹಭಾಗಿತ್ವದಡಿ ನಿರ್ಮಿಸಲು ಅನುಮೋದನೆ ನೀಡಿ ಅದಕ್ಕಾಗಿ 100 ಕೋಟಿ ರೂ. ಇಡಲಾಗಿದೆ ಎಂದರು.ಜೆಡಿಎಸ್‌ ಮುಖಂಡರಾದ ದೇವಿಪ್ರಸಾದ್‌, ದಿನೇಶ್‌ ಇತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ