ಆ್ಯಪ್ನಗರ

ರೈತರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬೆಂಬಲ

ರಾಷ್ಟ್ರೀಯ ಹೆದ್ದಾರಿ 206 ರಸ್ತೆಯ ಅಭಿವೃದ್ಧಿಗೆ ಭೂಮಿ ಕಳೆದುಕೊಳ್ಳುವ ರೈತರ ಕಣ್ಣು ಒರೆಸುವ ತಂತ್ರವನ್ನು ಅಧಿಕಾರಿಗಳು ಮಾಡಲು ಹೊರಟಿದ್ದಾರೆ. ರೈತರ ನ್ಯಾಯಯುತ ಬೇಡಿಕೆ ಈಡೇರಿಸಲು ನಮ್ಮ ಬೆಂಬಲವಿದೆ ಎಂದು ಶಾಸಕ ಡಿ.ಎಸ್‌.ಸುರೇಶ್‌ ಹೇಳಿದರು.

Vijaya Karnataka 26 Jul 2019, 5:00 am
ತರೀಕೆರೆ : ರಾಷ್ಟ್ರೀಯ ಹೆದ್ದಾರಿ 206 ರಸ್ತೆಯ ಅಭಿವೃದ್ಧಿಗೆ ಭೂಮಿ ಕಳೆದುಕೊಳ್ಳುವ ರೈತರ ಕಣ್ಣು ಒರೆಸುವ ತಂತ್ರವನ್ನು ಅಧಿಕಾರಿಗಳು ಮಾಡಲು ಹೊರಟಿದ್ದಾರೆ. ರೈತರ ನ್ಯಾಯಯುತ ಬೇಡಿಕೆ ಈಡೇರಿಸಲು ನಮ್ಮ ಬೆಂಬಲವಿದೆ ಎಂದು ಶಾಸಕ ಡಿ.ಎಸ್‌.ಸುರೇಶ್‌ ಹೇಳಿದರು.
Vijaya Karnataka Web CKM-25TKR1


ಪಟ್ಟಣದ ಕನಕ ಕಲಾ ಭವನದಲ್ಲಿ ಗುರುವಾರ ರಾಷ್ಟ್ರೀಯ ಹೆದ್ದಾರಿ 206 ರಸ್ತೆಗೆ ಭೂಮಿ ಕಳೆದುಕೊಳ್ಳುತ್ತಿರುವ ರೈತ ಸಂತ್ರಸ್ತರ ಹೋರಾಟ ಸಮಿತಿ ವತಿಯಿಂದ ನಡೆದ ಸಭೆಯಲ್ಲಿ ಮಾತನಾಡಿದರು. ಪರಿಹಾರ ನೀಡುವಲ್ಲಿ ಅಧಿಕಾರಿಗಳು ತಾರತಮ್ಯ ನೀತಿ ಅನುಸರಿಸಬಾರದು, ರೈತರು ರಾಷ್ಟ್ರೀಯ ಹೆದ್ದಾರಿಯ ಭೂಸ್ವಾಧೀನಾಧಿಕಾರಿಗಳು ನೀಡುವ ಯಾವುದೇ ನೋಟೀಸ್‌ನ್ನು ಪಡೆದುಕೊಳ್ಳಬಾರದು ಎಂದು ಸೂಚಿಸಿದರು. ಮುಂದಿನ ತಿಂಗಳ ಎರಡನೇ ವಾರದಲ್ಲಿ ಲೋಕಸಭಾ ಸದಸ್ಯರು, ಜಿಲ್ಲಾಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಅವಕಾಶ ಕಲ್ಪಿಸಲಾಗುವುದು ಹಾಗೂ ರೈತರಿಗೆ ಸೂಕ್ತ ಪರಿಹಾರ ಕೊಡಿಸಲು ಎಲ್ಲ ರೀತಿಯ ಕ್ರಮ ಅನುಸರಿಸಲಾಗುವುದು ಎಂದು ಹೇಳಿದರು.

ಜಿ.ಪಂ.ಉಪಾಧ್ಯಕ್ಷ ಕೆ.ಆರ್‌.ಆನಂದಪ್ಪ ಮಾತನಾಡಿ, ರೈತರ ವಿಶ್ವಾಸದ ಮೇರೆಗೆ ಮಾತ್ರ ಭೂಮಿ ವಶಪಡಿಸಿಕೊಳ್ಳಬಹುದು. ಬಲವಂತವಾಗಿ ಪಡೆಯಲು ಸಾಧ್ಯವಿಲ್ಲ. ಒಟ್ಟು 1500 ಕೋಟಿ ರೂ. ವೆಚ್ಚದ ಯೋಜನೆಯಲ್ಲಿ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ಸರಕಾರ ಪರಿಹಾರ ನೀಡಬೇಕು ಎಂದು ಹೇಳಿದರು.

ರಾಷ್ಟ್ರೀಯ ಹೆದ್ದಾರಿಯ ಭೂಸ್ವಾಧೀನಾಧಿಕಾರಿ ಗಣಪತಿ ಮಾತನಾಡಿ,2019ರ ನೋಂದಣಿ ಇಲಾಖೆಯ ದರವನ್ನು ಪರಿಗಣಿಸಲು ಸಾಧ್ಯವಿಲ್ಲ. ರೈತರಿಂದ ವಶಪಡಿಸಿಕೊಳ್ಳಲು ಹೊರಟಿರುವ ಜಮೀನುಗಳ ಅಕ್ಕಪಕ್ಕದಲ್ಲಿ ಮಾರಾಟವಾಗಿರುವ ದರವನ್ನು ಪರಿಗಣಿಸಿ ಪರಿಹಾರ ನೀಡಲಾಗುವುದು ಎಂದು ಮಾಹಿತಿ ನೀಡಿದರು. ರೈತರಾದ ಎಂ.ಸಿ.ಹಳ್ಳಿ ಜಗದೀಶ್‌ ಮತ್ತು ಗಾಳೀಹಳ್ಳಿ ಸತೀಶ್‌ ಮಾತನಾಡಿ ಅವೈಜ್ಞಾನಿಕವಾಗಿ ಅಳತೆ ಮಾಡಲಾಗಿದೆ. ಸಮೀಕ್ಷೆಗೆ ಬರುವ ಸರ್ವೇಯರ್‌ಗಳು ಲಂಚ ನೀಡಿದರೆ ಮಾತ್ರ ಹೆಚ್ಚು ದರ ನಿಗದಿಪಡಿಸುತ್ತಾರೆ ಎಂದು ಆರೋಪಿಸಿದರು. ಪುರಸಭೆಯ ಮಾಜಿ ಅಧ್ಯಕ್ಷ ರಾದ Üಟಿ.ಎನ್‌.ಗೋಪಿನಾಥ್‌ ಟಿ.ಎಸ್‌.ರಮೇಶ್‌, ಧರ್ಮರಾಜ್‌, ವರ್ಮಪ್ರಕಾಶ್‌, ಈರಣ್ಣ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಬಿ.ಬಿ.ರವಿಕುಮಾರ್‌, ಹೋರಾಟ ಸಮಿತಿಯ ರಾಜ್ಯ ಸಂಚಾಲಕ ಸ್ವಾಮಿ, ಮುಖಂಡರುಗಳಾದ ಶೇಖರ್‌, ಆನಂದ್‌ ಮತ್ತಿತರರು ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ