ಆ್ಯಪ್ನಗರ

‘ಮದ್ಯ’ದ ದೂರಿಗೆ ಟೋಲ್‌ ಫ್ರೀ ಸಂಖ್ಯೆ

ವಿಧಾನಸಭೆ ಚುನಾವಣೆಯನ್ನು ಮದ್ಯ ಮುಕ್ತವಾಗಿ ನಡೆಸಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಟೋಲ್‌ ಫ್ರೀ ಸಂಖ್ಯೆ ತೆರೆಯಲಾಗಿದೆ. ಅಕ್ರಮ ಮದ್ಯ ಶೇಖರಣೆ, ಸಾಗಾಣಿಕೆ, ಮಾರಾಟದ ಬಗ್ಗೆ ದೂರುಗಳಿದ್ದರೆ ಅಬಕಾರಿ ಉಪ ಆಯುಕ್ತರ ಕಚೇರಿಯ ಉಚಿತ ದೂರವಾಣಿ ಸಂಖ್ಯೆ 1800-425-8242ಕ್ಕೆ ಮಾಹಿತಿ ನೀಡಬಹುದು ಎಂದು ಅಬಕಾರಿ ಇಲಾಖೆ ಉಪ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

Vijaya Karnataka 29 Mar 2018, 5:00 am
ಚಿಕ್ಕಮಗಳೂರು: ವಿಧಾನಸಭೆ ಚುನಾವಣೆಯನ್ನು ಮದ್ಯ ಮುಕ್ತವಾಗಿ ನಡೆಸಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಟೋಲ್‌ ಫ್ರೀ ಸಂಖ್ಯೆ ತೆರೆಯಲಾಗಿದೆ. ಅಕ್ರಮ ಮದ್ಯ ಶೇಖರಣೆ, ಸಾಗಾಣಿಕೆ, ಮಾರಾಟದ ಬಗ್ಗೆ ದೂರುಗಳಿದ್ದರೆ ಅಬಕಾರಿ ಉಪ ಆಯುಕ್ತರ ಕಚೇರಿಯ ಉಚಿತ ದೂರವಾಣಿ ಸಂಖ್ಯೆ 1800-425-8242ಕ್ಕೆ ಮಾಹಿತಿ ನೀಡಬಹುದು ಎಂದು ಅಬಕಾರಿ ಇಲಾಖೆ ಉಪ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
Vijaya Karnataka Web toll free number for alcohol complaint
‘ಮದ್ಯ’ದ ದೂರಿಗೆ ಟೋಲ್‌ ಫ್ರೀ ಸಂಖ್ಯೆ


ಫ್ಲೆಕ್ಸ್‌, ವೆಬ್‌ಸೈಟ್‌ ತೆರವಿಗೆ ಸೂಚನೆ


ಚಿಕ್ಕಮಗಳೂರು: ವಿಧಾನಸಭೆ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದ್ದು, ಜಿಲ್ಲಾದ್ಯಂತ ವಿವಿಧ ಇಲಾಖೆಗಳಿಂದ ಅಳವಡಿಸಿದ್ದ ರಾಜಕೀಯ ವ್ಯಕ್ತಿಗಳ ಭಾವಚಿತ್ರ, ಸರಕಾರದ ಸಾಧನೆ ಸಾರುವ ಜಾಹೀರಾತು ಫಲಕ, ಫ್ಲೆಕ್ಸ್‌, ವೆಬ್‌ಸೈಟ್‌ಗಳನ್ನು 24 ಗಂಟೆಯೊಳಗೆ ತೆರವುಗೊಳಿಸಬೇಕು. ಯಾವುದಾದರೂ ಇಲಾಖೆಗಳಲ್ಲಿ ಜಾಹೀರಾತು ಫಲಕಗಳ ತೆರವಿಗೆ ಕ್ರಮ ಕೈಗೊಳ್ಳದಿದ್ದರೆ ಇದನ್ನು ಚುನಾವಣೆ ಮಾದರಿ ನೀತಿಸಂಹಿತೆ ಉಲ್ಲಂಘನೆ ಎಂದು ಪರಿಗಣಿಸಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತಿಳಿಸಿದ್ದಾರೆ.

'ಸರಕಾರಿ ವಾಹನ ಸುಸ್ಥಿತಿಯಲ್ಲಿಡಿ'

ಚಿಕ್ಕಮಗಳೂರು: ವಿಧಾನಸಭೆ ಚುನಾವಣೆಯ ವಿವಿಧ ಕೆಲಸ ನಿರ್ವಹಿಸಲು ಜಿಲ್ಲೆಯ ಎಲ್ಲ ಇಲಾಖೆಗಳ ಅಧೀನದಲ್ಲಿರುವ ಸರಕಾರಿ ವಾಹನಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಬೇಕು. ಸಾರ್ವಜನಿಕರು ಪರವಾನಗಿ ಹೊಂದಿರುವ ಶಸ್ತ್ರಾಸ್ತ್ರಗಳನ್ನು ಮುಂಜಾಗ್ರತಾ ಕ್ರಮವಾಗಿ ಸಮೀಪದ ಪೊಲೀಸ್‌ ಠಾಣೆ ಅಥವಾ ಆಯುಧಗಳನ್ನು ಠೇವಣಿ ಇಡಲು ಅಧಿಕೃತ ಪರವಾನಗಿ ಹೊಂದಿರುವ ವಹಿವಾಟುದಾರರಲ್ಲಿ ಠೇವಣಿ ಇಡಬೇಕು. ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಯಾವುದೇ ವ್ಯಕ್ತಿಗಳು ಶಸ್ತ್ರಾಸ್ತ್ರ, ಬಂದೂಕು ಹಿಡಿದು ತಿರುಗಾಡುವುದನ್ನು ನಿಷೇಧಿಸಲಾಗಿದೆ. ಠೇವಣಿ ಇಡುವ ಶಸ್ತ್ರಾಸ್ತ್ರಗಳ ಪರಿಶೀಲನೆ, ಮೇಲುಸ್ತುವಾರಿ ನೋಡಿಕೊಳ್ಳಲು ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸಮಿತಿ ರಚಿಸಲಾಗಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ (ಉಪಾಧ್ಯಕ್ಷರು), ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ (ಸದಸ್ಯ ಕಾರ‍್ಯದರ್ಶಿ), ಅಪರ ಜಿಲ್ಲಾಧಿಕಾರಿ (ಸದಸ್ಯರು) ಸಮಿತಿಯಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ