ಆ್ಯಪ್ನಗರ

ಶೃಂಗೇರಿ ಶ್ರೀಪೀಠಕ್ಕೆ ಶೋಭಾ ಭೇಟಿ

ಬಿಜೆಪಿ ಕಾರ್ಯಕರ್ತೆಯಾಗಿ, ಪಕ್ಷ ಬಯಸಿದಂತೆ ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿರುವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

Vijaya Karnataka 28 Mar 2019, 5:00 am
ಶೃಂಗೇರಿ : ಬಿಜೆಪಿ ಕಾರ್ಯಕರ್ತೆಯಾಗಿ, ಪಕ್ಷ ಬಯಸಿದಂತೆ ಉಡುಪಿ ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿರುವೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
Vijaya Karnataka Web CKM-27SRI4


ಶ್ರೀಮಠಕ್ಕೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಉತ್ತಮ ಆಡಳಿತ ನೀಡಿದ್ದು, ದೇಶದಲ್ಲಿ ಮೋದಿ ಪರ ಅಲೆ ಇದೆ. ಸದೃಢ ಸರಕಾರಕ್ಕೆ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಪಕ್ಷದ ಜಿಲ್ಲಾಧ್ಯಕ್ಷ ಡಿ.ಎನ್‌.ಜೀವರಾಜ್‌ ಮಾತನಾಡಿ, ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಪುನರ್‌ ಜೀವನ ನೀಡಿದ ಕ್ಷೇತ್ರ. ಕಾಂಗ್ರೆಸ್‌ ಪಕ್ಷ ಕ್ಕೆ ಕೊನೆಯವರೆಗೂ ಸಮರ್ಥ ಅಭ್ಯರ್ಥಿ ಸಿಗದೇ ಜೆಡಿಎಸ್‌ ಪಕ್ಷ ದ ಅಭ್ಯರ್ಥಿಯಾಗಿ ಪ್ರಮೋದ್‌ ಮಧ್ವರಾಜ್‌ ಅವರನ್ನು ಕಣಕ್ಕೆ ಇಳಿಸಿದೆ. ಸಂಸದೆ ಶೋಭಾ ಕರಂದ್ಲಾಜೆ ಅವರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಮಲೆನಾಡಿನ ಅಡಕೆ ಎಲೆ ಹಳದಿ ರೋಗ, ಬಗರ್‌ಹುಕುಂ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದಾರೆ ಎಂದರು.

ಇದಕ್ಕೂ ಮೊದಲು ಸಂಸದರು ಶ್ರೀಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನರಸಿಂಹವನದ ಗುರುನಿವಾಸದಲ್ಲಿ ಉಭಯ ಶ್ರೀಗಳಾದ ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಶ್ರೀ ಶಂಕರಾಚಾರ್ಯ ದೇಗುಲ, ತೋರಣಗಣಪತಿ ಹಾಗೂ ಶ್ರೀ ಮಲಹಾನಿಕರೇಶ್ವರ ಸನ್ನಿಧಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜಪ್ಪ, ಬಿಜೆಪಿ ಮುಖಂಡರಾದ ಕವಿಲುಕೂಡಿಗೆ ಶ್ರೀಧರ್‌ರಾವ್‌, ಪ.ಪಂ ಮಾಜಿ ಅಧ್ಯಕ್ಷೆ ಶಾರದಾ ಗೋಪಾಲ್‌, ಶೋಭಾ ಅನಂತಯ್ಯ, ಜ್ಯೋತಿ ರಾಘವೇಂದ್ರ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ