ಆ್ಯಪ್ನಗರ

9ರಂದು ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ

ಕರ್ನಾಟಕ ಯಕ್ಷಗಾನ ಅಕಾಡೆಮಿ ನೀಡುವ 2018ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಗರದ ಕುವೆಂಪು ಕಲಾ ಮಂದಿರದಲ್ಲಿಡಿ.9ರಂದು ಆಯೋಜಿಸಲಾಗಿದೆ ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ ತಿಳಿಸಿದರು.

Vijaya Karnataka 8 Dec 2019, 5:00 am
ಚಿಕ್ಕಮಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ ನೀಡುವ 2018ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಗರದ ಕುವೆಂಪು ಕಲಾ ಮಂದಿರದಲ್ಲಿಡಿ.9ರಂದು ಆಯೋಜಿಸಲಾಗಿದೆ ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೊ.ಎಂ.ಎ.ಹೆಗಡೆ ತಿಳಿಸಿದರು.
Vijaya Karnataka Web yakshagana academy award on 9th
9ರಂದು ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರದಾನ


ಶನಿವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ಪುಸ್ತಕ ಬಹುಮಾನ ಪ್ರದಾನ ಸಮಾರಂಭ ಅಂದು ಸಂಜೆ 4.30ಕ್ಕೆ ನಡೆಯಲಿದೆ ಎಂದು ತಿಳಿಸಿದರು.

ಸಮಾರಂಭವನ್ನು ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಉದ್ಘಾಟಿಸಲಿದ್ದು, ಪ್ರತಿಷ್ಠಿತ ಪಾರ್ತಿಸುಬ್ಬ, ಗೌರವ ಪ್ರಶಸ್ತಿ ಪ್ರದಾನ ಮಾಡುವರು. ಯಕ್ಷಸಿರಿ ವಾರ್ಷಿಕ ಪ್ರಶಸ್ತಿಯನ್ನು ವಿಧಾನ ಪರಿಷತ್‌ ಉಪ ಸಭಾಪತಿ ಎಸ್‌.ಎಲ್‌.ಧರ್ಮೇಗೌಡ, ಪುಸ್ತಕ ಬಹುಮಾನವನ್ನು ಜಿ.ಪಂ. ಅಧ್ಯಕ್ಷೆ ಸುಜಾತಕೃಷ್ಣಪ್ಪ ಪ್ರದಾನ ಮಾಡುವರು ಎಂದು ತಿಳಿಸಿದರು.

ಪ್ರಶಸ್ತಿ ಪುರಸ್ಕೃತರ ಕಿರುಪರಿಚಯ ಪುಸ್ತಕವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್‌.ರಂಗಪ್ಪ ಲೋಕಾರ್ಪಣೆ ಮಾಡುವರು. ಸಂಸದರಾದ ಶೋಭಾ ಕರಂದ್ಲಾಜೆ, ಪ್ರಜ್ವಲ್‌ ರೇವಣ್ಣ, ರಾಜ್ಯಸಭೆ ಸದಸ್ಯ ಜೈರಾಂ ರಮೇಶ್‌, ವಿಧಾನ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌, ಶಾಸಕರಾದ ಎಂ.ಪಿ.ಕುಮಾರಸ್ವಾಮಿ, ಡಿ.ಎಸ್‌.ಸುರೇಶ್‌, ಬೆಳ್ಳಿಪ್ರಕಾಶ್‌, ಟಿ.ಡಿ.ರಾಜೇಗೌಡ, ವಿಧಾನ ಪರಿಷತ್‌ ಸದಸ್ಯರಾದ ಎಂ.ಕೆ.ಪ್ರಾಣೇಶ್‌, ಎಸ್‌.ಎಲ್‌.ಬೋಜೇಗೌಡ ಮತ್ತಿತರರು ಪಾಲ್ಗೊಳ್ಳುವರು ಎಂದರು.

ಅಕಾಡೆಮಿ ಸದಸ್ಯ ಸಂಚಾಲಕ ರಮೇಶ್‌ ಬೇಗಾರ್‌, ರಿಜಿಸ್ಟ್ರಾರ್‌ ಎಸ್‌.ಎಚ್‌.ಶಿವರುದ್ರಪ್ಪ ಹಾಜರಿದ್ದರು.
------------
ಶರಸೇತು ಬಂಧನ ಯಕ್ಷಗಾನ
ಪ್ರಶಸ್ತಿ ಪ್ರದಾನ ಸಮಾರಂಭದ ಹಿನ್ನೆಲೆಯಲ್ಲಿಅಂದು ಸಂಜೆ 4.30ಕ್ಕೆ ತೆಂಕುತಿಟ್ಟು, ಬಡಗುತಿಟ್ಟು, ಮೂಡಲಪಾಯ ಯಕ್ಷಗಾನ ಕೂಡುವಿಕೆಯಲ್ಲಿಗಾನ-ವೈವಿಧ್ಯ ನಡೆಯಲಿದೆ. ಕಾವ್ಯಶ್ರೀನಾಯಕ, ಪ್ರಸಾದ್‌ ಮೊಗೆಬೆಟ್ಟು, ಎ.ಎನ್‌.ತಿಮ್ಮಯ್ಯ ಯಕ್ಷಗಾನ ಪ್ರಸಂಗ ಪ್ರಸ್ತುತಪಡಿಸುವರು. ರಾತ್ರಿ 7ಕ್ಕೆ ಸಿದ್ದಾಪುರದ ಅನಂತ ಯಕ್ಷ ಕಲಾ ಪ್ರತಿಷ್ಠಾನದಿಂದ ಶರಸೇತು ಬಂಧನ ಎಂಬ ಬಡಗತಿಟ್ಟು ಯಕ್ಷಗಾನ ಪ್ರದರ್ಶನ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ