ಆ್ಯಪ್ನಗರ

ಚಿತ್ರದುರ್ಗ: ಕೊರೊನಾ ನಿಯಂತ್ರಿಸಲು ತಕ್ಷಣದಿಂದಲೇ ಎಲ್ಲ ಗಡಿ ಬಂದ್‌

ಕೊರೊನಾ ವೈರಸ್‌ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಚಿತ್ರದುರ್ಗ ಜಿಲ್ಲೆಗೆ ಸಂಪರ್ಕಿಸುವ ಎಲ್ಲ ಜಿಲ್ಲಾ, ರಾಜ್ಯ ಮತ್ತು ಅಂತರ್‌ರಾಜ್ಯ ಗಡಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಂಪೂರ್ಣವಾಗಿ ಬಂದ್‌ ಮಾಡಲು ಆದೇಶಿಸಲಾಗಿದೆ. ಇನ್ನು, ಖಾಸಗಿ ಆಸ್ಪತ್ರೆಗಳನ್ನು ಕ್ವಾರಂಟೈನ್‌ ಸೌಲಭ್ಯಕ್ಕಾಗಿ ವಶಪಡಿಸಿಕೊಳ್ಳಲಾಗಿದೆ.

Vijaya Karnataka Web 30 Mar 2020, 3:41 pm
ಚಿತ್ರದುರ್ಗ: ಕೊರೊನಾ ವೈರಸ್‌ ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಜಿಲ್ಲೆಗೆ ಸಂಪರ್ಕಿಸುವ ಎಲ್ಲ ಜಿಲ್ಲಾ, ರಾಜ್ಯ ಮತ್ತು ಅಂತರ್‌ರಾಜ್ಯ ಗಡಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸಂಪೂರ್ಣವಾಗಿ ಬಂದ್‌ ಮಾಡಲು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಆದೇಶಿಸಿದ್ದಾರೆ.
Vijaya Karnataka Web coronavirus


ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಜಾರಿಗೊಳಿಸಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಬಿಗಿ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿರುತ್ತದೆ. ಲಾಕ್‍ಡೌನ್‍ನಿಂದಾಗಿ ಸಂಕಷ್ಟದಲ್ಲಿರುವ ನಿರಾಶ್ರಿತರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಕಲ್ಪಿಸಲು ಆದೇಶಿಸಲಾಗಿದೆ.

ಸಾಂಕ್ರಾಮಿಕ ಕಾಯ್ದೆ-1987 ಮತ್ತು ಕರ್ನಾಟಕ ಕೋವಿಡ್-19 ರೆಗ್ಯುಲೇಷನ್ ಕಾಯ್ದೆ 2020 ನಿಯಮ-12ರಲ್ಲಿ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಲಂ 30ರಡಿಯಲ್ಲಿ ಜಿಲ್ಲೆಯ ಎಲ್ಲ ಗಡಿಗಳನ್ನು ಬಂದ್‌ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದು, ಅಗತ್ಯ ಹಾಗೂ ತುರ್ತು ವಾಹನಗಳಿಗೆ ಬಂದ್‌ನಿಂದ ವಿನಾಯಿತಿ ನೀಡಲಾಗಿದೆ.

ಕೊರೊನಾ ತುರ್ತು: ಖಾಸಗಿ ಆಸ್ಪತ್ರೆ, ಕ್ಲಿನಿಕ್ ತೆರೆಯಲು ಕಟ್ಟುನಿಟ್ಟಿನ ಸೂಚನೆ!

ಖಾಸಗಿ ಆಸ್ಪತ್ರೆಗಳ ವಶಕ್ಕೆ ಆದೇಶ
ಇನ್ನು, ಕ್ವಾರಂಟೈನ್ ಸೌಲಭ್ಯಕ್ಕಾಗಿ ಖಾಸಗಿ ಆಸ್ಪತ್ರೆಗಳನ್ನು ವಶಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಆರೋಗ್ಯ ಇಲಾಖೆಯ ವಶಕ್ಕೆ ನೀಡಲಾಗಿರುವ ಖಾಸಗಿ ಆಸ್ಪತ್ರೆಗಳ ವಿವರ ಇಂತಿದೆ. ಬಸವೇಶ್ವರ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಸಿಎಂಎಚ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಪತಂಜಲಿ ಆಸ್ಪತ್ರೆ, ಕೃಷ್ಣ ನರ್ಸಿಂಗ್ ಹೋಂ, ಸುನೀತಾ ನರ್ಸಿಂಗ್ ಹೋಂ, ಅರ್ಜುನ್ ಯುರೋಲಜಿ ಸೆಂಟರ್, ಬಸಪ್ಪ ಆಸ್ಪತ್ರೆ, ಪಂಪಶ್ರೀ ಆಸ್ಪತ್ರೆ, ಅಕ್ಷಯ ನರ್ಸಿಂಗ್ ಹೋಂ, ರವಿ ನರ್ಸಿಂಗ್ ಹೋಂ ಸೇರಿ ಒಟ್ಟು 10 ಆಸ್ಪತ್ರೆಗಳನ್ನು ಕ್ವಾರಂಟೈನ್ ಸೌಲಭ್ಯಕ್ಕಾಗಿ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ತಿಳಿಸಿದ್ದಾರೆ.

ಆರೋಗ್ಯ ಸಚಿವರ ತವರಲ್ಲೇ ಐಸೊಲೇಷನ್‌ ವಾರ್ಡ್‌ ಅವ್ಯವಸ್ಥೆ, ಶಂಕಿತ ಕೊರೊನಾ ರೋಗಿಗಳಿಂದ ಆಕ್ರೋಶ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ