ಆ್ಯಪ್ನಗರ

ಸಂಭ್ರಮದ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ

ತಾಲೂಕಿನ ಬೆಲಗೂರು ಗ್ರಾಮದಲ್ಲಿ ಐತಿಹಾಸಿಕ ಲಕ್ಷ್ಮಿನಾರಾಯಣ ಸ್ವಾಮಿ ಹಾಗೂ ವೀರಪ್ರತಾಪ ಆಂಜನೇಯ ಸ್ವಾಮಿ ಮಹಾ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ವಿಜೃಂಭಣೆಯಿಂದ ನೆರವೇರಿತು.

Vijaya Karnataka 21 Dec 2018, 5:00 am
ಹೊಸದುರ್ಗ : ತಾಲೂಕಿನ ಬೆಲಗೂರು ಗ್ರಾಮದಲ್ಲಿ ಐತಿಹಾಸಿಕ ಲಕ್ಷ್ಮಿನಾರಾಯಣ ಸ್ವಾಮಿ ಹಾಗೂ ವೀರಪ್ರತಾಪ ಆಂಜನೇಯ ಸ್ವಾಮಿ ಮಹಾ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಗುರುವಾರ ವಿಜೃಂಭಣೆಯಿಂದ ನೆರವೇರಿತು.
Vijaya Karnataka Web celebration of the anjaneya swami brahmarathotsava
ಸಂಭ್ರಮದ ಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ


ಬ್ರಹ್ಮರಥೋತ್ಸವ ನಿಮಿತ್ತ ಇಡೀ ಗ್ರಾಮ ಸಿಂಗಾರಗೊಂಡಿತ್ತು. ತೇರಿಗೆ ನಾನಾ ಹೂವು, ಫಲಪುಷ್ಪಗಳು, ಬಾಳೆಕಂದು ಹಾಗೂ ತಳಿರು ತೋರಣಗಳಿಂದ ಅಲಂಕಾರ ಮಾಡಲಾಗಿತ್ತು. ಜಾನಪದ ಕಲಾತಂಡಗಳು ರಥೋತ್ಸವಕ್ಕೆ ಮೆರಗು ನೀಡಿದವು. ರಥ ಮುಂದೆ ಸಾಗುತ್ತಿದ್ದಂತೆ ಭಕ್ತರು ಬಾಳೆ ಹಣ್ಣು ತೂರುವ ಮೂಲಕ ಭಕ್ತಿ ಸಮರ್ಪಿಸಿದರು.

ಹನುಮ ಜಯಂತಿ ಪ್ರಯುಕ್ತ ಸಂಜೆ ಶ್ರೀರಾಮ ಸಾಮ್ರಾಜ್ಯ ಪಟ್ಟಾಭಿಷೇಕ ಉತ್ಸವಾದಿಗಳು ನೆಡೆದವು. ಪೀಠದ ಆವರಣದಲ್ಲಿರುವ ಮಹಾಲಕ್ಷ್ಮೀ, ಮಾರುತಿ, ಲಕ್ಷ್ಮೀನಾರಾಯಣ ದೇವಾಲಯದಲ್ಲಿ ವಿಶೇಷ ಪೂಜೆ ಪುನಸ್ಕಾರ ನಡೆದವು.

ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಆಗಮಿಸಿದ್ದ ಎಲ್ಲಾ ಭಕ್ತರಿಗೂ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ಮಾರುತಿ ಪೀಠದ ಶ್ರೀಬಿಂದುಮಾಧವ ಶರ್ಮಾ ಸ್ವಾಮೀಜಿ ಮಂಗಳವಾರ ಹನುಮ ಜಯಂತಿ ಕಾರ್ಯಕ್ರಮಗಳಿಗೆ ವಿಧ್ಯುಕ್ತವಾಗಿ ಚಾಲನೆ ನೀಡಿದ್ದರು. ಬುಧÜವಾರದಂದು ಕಾಗಿನೆಲೆ ಕನಕ ಗುರುಪೀಠ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ, ಕುಂಚಿಟಿಗ ಮಠದ ಡಾ. ಶಾಂತವೀರ ಸ್ವಾಮೀಜಿ ದೇವಾಲಯಕ್ಕೆ ಭೇಟಿ ನೀಡಿದ್ದರು. ಗುರುವಾರ ಭಗೀರಥ ಮಠದ ಡಾ. ಪುರುಷೋತ್ತಮಾನಂದಪುರಿ ಸ್ವಾಮೀಜಿ, ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ಇತರರು ರಥೋತ್ಸವದಲ್ಲಿ ಭಾಗಿಯಾಗಿದ್ದರು.

ಕಳೆದೆರೆಡು ದಿನಗಳಿಂದ ಊರಿನ ಪ್ರಮುಖ ಬೀದಿಗಳಲ್ಲಿ ಅಡ್ಡಪಲ್ಲಕ್ಕಿ ಉತ್ಸವ ಜರುಗಿತು. ಮಹಾಗಣಪತಿ ಪೂಜೆ, ಗಂಗಾಪೂಜೆ, ಸ್ವಸ್ತಿವಾಚನ, ದೇವಾನಂದಿ, ಕೌತುಕ ಬಂಧನ, ಧ್ವಜಾರೋಹಣ, ಕಳಶ ಸ್ಥಾಪನೆ, ಸೂರ್ಯ ನಮಸ್ಕಾರ, ಲಕ್ಷ್ಮೀ ಕಲ್ಯಾಣ ಮಹೋತ್ಸವ, ಸೀತಾಕಲ್ಯಾಣ ಮಹೋತ್ಸವ ಜರುಗಿದವು. ಮಾರುತಿ ಪೀಠದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಭಟ್‌, ಮಠದ ಆಡಳಿತಾಧಿಕಾರಿ ಗುರುದತ್ತ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ