ಆ್ಯಪ್ನಗರ

ಎರಡು, ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ: ಬಿಎಸ್‌ವೈ ವಿಶ್ವಾಸ

ಮುಂದಿನ ಎರಡು ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದಲ್ಲಿ ಭಾನುವಾರ ಮಾತನಾಡಿದ ಅವರು ಈ ಕುರಿತಾಗಿ ಹೇಳಿದ್ದಿಷ್ಟು.

Vijaya Karnataka Web 29 Nov 2020, 11:36 am
ಚಿತ್ರದುರ್ಗ: ಎರಡು ಅಥವಾ ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Vijaya Karnataka Web BS Yediyurappa


ಚಿತ್ರದುರ್ಗ ಮುರುಘಾ ಮಠದಲ್ಲಿ ನಿರ್ಮಿಸಿರುವ ಮುರುಘಾ ಶ್ರೀ ಪ್ರಾಚ್ಯವಸ್ತು ಸಂಗ್ರಹಾಲಯ ಉದ್ಘಾಟನೆಗೆ ಆಗಮಿಸಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು ಶೀರ್ಘದಲ್ಲೇ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದರು. ಅಲ್ಲದೆ ಈ ಕುರಿತಾಗಿ ಭಾನುವಾರ ದೆಹಲಿ ಮುಖಂಡರ ಜತೆ ಮಾತನಾಡುತ್ತೇನೆ ಎಂದು ಹೇಳಿದರು.

ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ವಿಳಂಬ ಆಗುತ್ತಿದ್ದು ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಶುಕ್ರವಾರ ಸಿಎಂ ಬಿಎಸ್‌ ಯಡಿಯೂರಪ್ಪನವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಫೋನ್ ಕರೆ ಮಾಡಿ ಸಂಪುಟ ವಿಸ್ತರಣೆ ಕುರಿತಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇತ್ತ ಸಿಎಂ ಬಿಎಸ್‌ವೈ ಸಂಪುಟ ವಿಸ್ತರಣೆಯ ಕುರಿತಾಗಿ ವಿಶ್ವಾಸ ವ್ಯಕ್ತಪಡಿಸುತ್ತಿದ್ದರೂ ವರಿಷ್ಠರಿಂದ ಗ್ರೀನ್ ಸಿಗ್ನಲ್ ಇನ್ನೂ ದೊರಕಿಲ್ಲ.

ರಾಜಾಹುಲಿ ಬಲ ಕುಂದಿಸಲು ಹೈಕಮಾಂಡ್‌ ಪ್ಲ್ಯಾನ್! ಕುರ್ಚಿ ಉಳಿಸಿಕೊಳ್ಳಲು ಬಿಎಸ್‌ವೈ ತಂತ್ರವೇನು ?

ಕೆಎಂಎಫ್ ಗೆ ನಿರ್ದೇಶನ

ಇದೇ ವೇಳೆ ಮೆಕ್ಕೆಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸ ಬೇಕೆಂದು ರೈತರು ಸಿಎಂ ಬಿಎಸ್‌ವೈಗೆ ಮನವಿ ಮಾಡಿದರು. ಶೀಘ್ರವೇ ಖರೀದಿಸುವಂತೆ ಕೆಎಂಎಫ್ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಯಡಿಯೂರಪ್ಪ ಈ ಕುರಿತಾಗಿ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ, ಎಂ. ಚಂದ್ರಪ್ಪ, ಗೂಳಿಹಟ್ಟಿ ಶೇಖರ್, ನಿಗಮ‌ ಮಂಡಳಿ ಅಧ್ಯಕ್ಷರಾದ ಎಸ್. ಲಿಂಗಮೂರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬದರೀನಾಥ್ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ