ಆ್ಯಪ್ನಗರ

ಡಾ.ಮೀರಾಸಾಬಿಹಳ್ಳಿ ಶಿವಣ್ಣ ಸಮ್ಮೇಳನ ಅಧ್ಯಕ್ಷ

ನಗರದ ತರಾಸು ರಂಗಮಂದಿರದಲ್ಲಿ ಜೂ.29,30ರಂದು ಎರಡು ದಿನಗಳ ಕಾಲ ನಡೆಯಲಿರುವ ಹದಿನೈದನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರನ್ನಾಗಿ ಜಾನಪದ ವಿದ್ವಾಂಸ ಡಾ.ಮೀರಾಸಾಬಿಹಳ್ಳಿ ಶಿವಣ್ಣರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡಮಲ್ಲಯ್ಯ ತಿಳಿಸಿದರು.

Vijaya Karnataka 23 Jun 2019, 5:00 am
ಚಿತ್ರದುರ್ಗ: ನಗರದ ತರಾಸು ರಂಗಮಂದಿರದಲ್ಲಿ ಜೂ.29,30ರಂದು ಎರಡು ದಿನಗಳ ಕಾಲ ನಡೆಯಲಿರುವ ಹದಿನೈದನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರನ್ನಾಗಿ ಜಾನಪದ ವಿದ್ವಾಂಸ ಡಾ.ಮೀರಾಸಾಬಿಹಳ್ಳಿ ಶಿವಣ್ಣರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ದೊಡ್ಡಮಲ್ಲಯ್ಯ ತಿಳಿಸಿದರು.
Vijaya Karnataka Web dr meerazabihalli is the president of the shivanna conference
ಡಾ.ಮೀರಾಸಾಬಿಹಳ್ಳಿ ಶಿವಣ್ಣ ಸಮ್ಮೇಳನ ಅಧ್ಯಕ್ಷ


ನಗರದ ಐಶ್ವರ್ಯ ಫೋರ್ಟ್‌ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಸಮ್ಮೇಳನಾಧ್ಯಕ್ಷರ ಆಯ್ಕೆ, ಸಮ್ಮೇಳನದ ವಿವರ ಕುರಿತು ಮಾಹಿತಿ ನೀಡಿದರು.

ಸಾಹಿತ್ಯ ಸಮ್ಮೇಳನದ ಉದ್ಘಾಟನೆ 29ರಂದು ನಡೆಯಲಿದ್ದು, ಬೆಳಗ್ಗೆ 8ಕ್ಕೆ ಧ್ವಜಾರೋಹಣ, ನಂತರ ಪರಿಷತ್ತಿನ ಧ್ವಜ ಹಾಗೂ ನಾಡಧ್ವಜ ಕಾರ್ಯಕ್ರಮ ನೆರವೇರಲಿದೆ. 8.30ಕ್ಕೆ ಸಮ್ಮೇಳನಾಧ್ಯಕ್ಷ ರ ಮೆರವಣಿಗೆ ಆಯೋಜಿಸಲಾಗಿದೆ ಎಂದರು.

ಕಳೆದ ಮೂರ್ನಾಲ್ಕು ವರ್ಷಗಳಿಂದ ಬರ ಪರಿಸ್ಥಿತಿ ಈ ಬಾರಿಯೂ ಮುಂದುವರಿದಿದೆ. ಇಂಥ ಸಮಯದಲ್ಲಿ ಸಮ್ಮೇಳನ ನಡೆಸುವುದರ ಔಚಿತ್ಯದ ಕುರಿತು ಪ್ರಶ್ನಿಸಿದ್ದಾರೆ. ಕೆಲವರು ಕನ್ನಡ ಪರ ಕೆಲಸಕ್ಕೆ ಯಾವುದೂ ಅಡೆತಡೆಯಾಗಬಾರದು. ಸರಳವಾಗಿ ಆಚರಿಸೋಣ ಎಂದು ಸಲಹೆ ನೀಡಿದ್ದಾರೆ ಎಂದರು.

ಎಲ್ಲವನ್ನೂ ದೃಷ್ಟಿಯಲ್ಲಿಟ್ಟುಕೊಂಡು ಪರಿಷತ್ತಿನ ಸಾಂಸ್ಕೃತಿಕ, ಸಾಹಿತ್ಯಕ ಧ್ವನಿಯನ್ನು ಮಂಡಿಸುವ ನಿಟ್ಟಿನಲ್ಲಿ ಎರಡು ದಿನಗಳ ಸಾಹಿತ್ಯ ಸಮ್ಮೇಳನವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಸಮ್ಮೇಳನದಲ್ಲಿ 'ಭಾರತದ ಸಂವಿಧಾನ', ಖ್ಯಾತ ಸಾಹಿತಿ ತರಾಸು ಅವರ ಜನ್ಮಶತಮಾನೋತ್ಸವ ಪ್ರಯುಕ್ತ 'ತರಾಸು ಸಾಹಿತ್ಯ ಕುರಿತು ಸಮಗ್ರ ಚರ್ಚೆ', 'ಕನ್ನಡ ನಾಡಿನ ಚಳವಳಿಗಳು', 'ಕೃಷಿ' ಹಾಗೂ ಸಮ್ಮೇಳನಾಧ್ಯಕ್ಷ ರ ಅಕ್ಷರ ಕೃಷಿ, ಕೊಡುಗೆಗಳ ಬಗ್ಗೆ ವಿಚಾರಗೋಷ್ಠಿ ನಡೆಯಲಿವೆ ಎಂದರು.

ಸಾಹಿತಿ ಡಾ.ಬಂಜಗೆರೆ ಜಯಪ್ರಕಾಶ್‌ ನಿಕಟಪೂರ್ವ ಸಮ್ಮೇಳನಾಧ್ಯಕ್ಷ ರ ನುಡಿಗಳನ್ನಾಡಲಿದ್ದಾರೆ. ಕಸಾಪ ರಾಜ್ಯ ಘಟಕದ ಅಧ್ಯಕ್ಷ ಮನುಬಳಿಗಾರ್‌ ಆಶಯ ನುಡಿಗಳನ್ನಾಡಲಿದ್ದಾರೆ. ನಂತರ ಸಮ್ಮೇಳನಾಧ್ಯಕ್ಷ ಡಾ.ಮೀರಸಾಬಿಹಳ್ಳಿ ಶಿವಣ್ಣ ಅಧ್ಯಕ್ಷ ರ ನುಡಿಗಳನ್ನಾಡಲಿದ್ದಾರೆ ಎಂದು ಹೇಳಿದರು.

ಸಮ್ಮೇಳನದಲ್ಲಿ ವಿಚಾರಗೋಷ್ಠಿಗಳ ಜತೆಗೆ ಪುಸ್ತಕಾಸಕ್ತರಿಗಾಗಿ ಸಮ್ಮೇಳನದಲ್ಲಿ ಪುಸ್ತಕ ಮಳಿಗೆ ತೆರೆಯಲಾಗುವುದು. ನಾನಾ ಪ್ರಕಾರದ ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಾಗುವುದು. ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕೃತಿ, ಪರಂಪರೆಯ ಹಿತದೃಷ್ಟಿಯಿಂದ ಸಮ್ಮೇಳನ ನಡೆಸುವುದು ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆ ನಡೆಯುತ್ತಿದೆ ಎಂದರು.

ಸಮಾರೋಪ ಸಮಾರಂಭ 30ರ ಸಂಜೆ 4ರ ನಂತರ ನಡೆಯಲಿದ್ದು, ಗೌರವ ಅತಿಥಿಗಳಾಗಿ ಜನಪ್ರತಿನಿಧಿಗಳು, ಸಾಹಿತಿಗಳು ಭಾಗವಹಿಸುವರು. ಕಸಾಪ ಜಿಲ್ಲಾಧ್ಯಕ್ಷ ರು ಅಧ್ಯಕ್ಷ ತೆ ವಹಿಸುವರು ಎಂದರು.

ಕಸಾಪ ಗೌರವ ಕೋಶಾಧ್ಯಕ್ಷ ಗೋವಿಂದಪ್ಪ, ಸಾಹಿತಿಗಳಾದ ಶರೀಫಾ ಬಿ, ಬಿ.ಆರ್‌.ಗುರುನಾಥ್‌, ಗೌರವ ಕಾರ್ಯದರ್ಶಿ ಕೆ.ಎಂ.ಯೂಸಫ್‌, ತಾಲೂಕು ಕಾರ್ಯದರ್ಶಿ ಎಸ್‌. ಸುರೇಶ್‌, ಸದಸ್ಯೆ ಮೋಕ್ಷ ರುದ್ರಸ್ವಾಮಿ, ಪ್ರಾಚಾರ್ಯ ಶಿವಕುಮಾರ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ