ಆ್ಯಪ್ನಗರ

ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ

ತಾಲೂಕಿನ ಹೊರಕೆರೆ ದೇವರಪುರ ಗ್ರಾಮದ ಶ್ರೀಲಕ್ಷ್ಮೀ ನರಸಿಂಹಸ್ವಾಮಿ (ಹೊರಕೆರೆ ರಂಗನಾಥಸ್ವಾಮಿ)ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.

Vijaya Karnataka 23 Mar 2019, 5:00 am
ಹೊಳಲ್ಕೆರೆ : ತಾಲೂಕಿನ ಹೊರಕೆರೆ ದೇವರಪುರ ಗ್ರಾಮದ ಶ್ರೀಲಕ್ಷ್ಮೀ ನರಸಿಂಹಸ್ವಾಮಿ (ಹೊರಕೆರೆ ರಂಗನಾಥಸ್ವಾಮಿ)ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಜರುಗಿತು.
Vijaya Karnataka Web lakshmi narasimhaswamy brahma rathotsava
ಲಕ್ಷ್ಮೀ ನರಸಿಂಹಸ್ವಾಮಿ ಬ್ರಹ್ಮ ರಥೋತ್ಸವ


ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಸ್ವಾಮಿ ಕೃಪೆಗೆ ಪಾತ್ರರಾದರು. ತಾಲೂಕಿನಲ್ಲಿ ದೊಡ್ಡ ರಥ ಇದು. ಶ್ರೀಲಕ್ಷ್ಮೀ ನರಸಿಂಹಸ್ವಾಮಿಯ ಪಲ್ಲಕ್ಕಿ ಉತ್ಸವ ಕೂಡ ಮಾಡಲಾಗಿತ್ತು. ಗ್ರಾಮದ ಎಲ್ಲ ದೇವರನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿತ್ತು.

ಗರುಡ ಪಕ್ಷಿಯ ಪ್ರದಕ್ಷಿಣೆ:

ಶ್ರೀಲಕ್ಷ್ಮೀ ನರಸಿಂಹಸ್ವಾಮಿಯನ್ನು ಧ್ವಾರಬಾಗಿಲ ಬಳಿ ಕರೆತರಲಾಯಿತು. ನಂತರ ರಥೋತ್ಸವದಲ್ಲಿ ಪ್ರತಿಷ್ಠಾಪಿಸಿದ ಭಕ್ತ ಸಮೂಹ ರಥ ಎಳೆಯಲು ಪ್ರಾರಂಭವಾಗುತ್ತಿರುವಾಗ ಗರುಡ ಪಕ್ಷಿಯೊಂದು ಎತ್ತರದಿಂದಲೇ ರಥವನ್ನು ಮೂರು ಸುತ್ತು ಪ್ರದಕ್ಷಿಣೆ ಹಾಕಿ ಮಾಯವಾಯಿತು. ಗರುಡ ಪಕ್ಷಿಯ ಆಗಮನವನ್ನೇ ಕಾಯುತ್ತಿದ್ದ ಸಾವಿರಾರು ಭಕ್ತರು ನೋಡಿ ಖುಷಿಪಟ್ಟರು.

ದೇವಾಲಯವು ಮುಜರಾಯಿ ಇಲಾಖೆಗೆ ಸೇರಿದ್ದು, ಜಾತ್ರೆಯಲ್ಲಿ ಕುಡಿವ ನೀರು, ಸ್ವಚ್ಛತೆ ಸೇರಿದಂತೆ ಸಕಲ ಸೌಲಭ್ಯ ಕಲ್ಪಿಸಲಾಗಿತ್ತು. ಇಲ್ಲಿನ ಎಸ್‌ಎಲ್‌ಎನ್‌ ಟ್ರಸ್ಟ್‌ ಬರುವಂತ ಭಕ್ತರಿಗೆ ಅನ್ನದಾಸೋಹ, ವಿದ್ಯುತ್‌ ದೀಪದ ವ್ಯವಸ್ಥೆ, ಎಲ್ಲ ಭಕ್ತರು ದೇವರ ದರ್ಶನ ಪಡೆಯಲು ಸೂಕ್ತ ವ್ಯವಸ್ಥೆ ಕೂಡ ಕಲ್ಪಿಸಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ