ಆ್ಯಪ್ನಗರ

ಸೋತ ಯೋಗೀಶ್ವರ್ ಗೆ ಯಾಕೆ ಮಂತ್ರಿಗಿರಿ: ಶಾಸಕ ತಿಪ್ಪಾರೆಡ್ಡಿ ಆಕ್ರೋಶ

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚಿತ್ರದುರ್ಗ ಶಾಸಕ ಜಿ ಎಚ್ ತಿಪ್ಪಾರೆಡ್ಡಿ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋತ ಯೋಗೀಶ್ವರ್ ಗೆ ಯಾಕೆ ಮಂತ್ರಿಗಿರಿ, ಯೋಗೀಶ್ವರ್ ಗೆ ಈಗಾಗಲೇ ಪರಿಷತ್ ಸ್ಥಾನ ನೀಡಲಾಗಿದೆ ಎಂದಿದ್ದಾರೆ.

Vijaya Karnataka Web 13 Jan 2021, 11:37 am
ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರಕಾರದ ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ ಆರಂಭವಾಗಿದೆ.
Vijaya Karnataka Web tipparedy


ಇದರ ಬೆನ್ನಲ್ಲೇ ಚಿತ್ರದುರ್ಗ ಶಾಸಕ ಜಿ ಎಚ್ ತಿಪ್ಪಾರೆಡ್ಡಿ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋತ ಯೋಗೀಶ್ವರ್ ಗೆ ಯಾಕೆ ಮಂತ್ರಿಗಿರಿ, ಯೋಗೀಶ್ವರ್ ಗೆ ಈಗಾಗಲೇ ಪರಿಷತ್ ಸ್ಥಾನ ನೀಡಲಾಗಿದೆ. ಪಕ್ಷಕ್ಕೆ ಅವರೇನ್ ಸಹಾಯ ಮಾಡಿದ್ದಾರೆ ಎಂದು ನನಗಂತು ಗೊತ್ತಿಲ್ಲ. ಈ ಬಾರಿಯ ಸಚಿವ ಸಂಪುಟದಲ್ಲಿ ಸಮಾನತೆ ಕಾಣುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಸರಕಾರ ರಚನೆಗೆ ಯೋಗೀಶ್ವರ್ ಯಾವ ರೀತಿಯಲ್ಲಿ ಸಹಾಯ ಮಾಡಿದ್ದಾರೆ.? ಪರಿಷತ್ ಸ್ಥಾನ ನೀಡಿಯೂ ಮಂತ್ರಿ ಸ್ಥಾನ ಬೇಕಾ? ಪಕ್ಷ ವಿರೋಧಿ ಕೆಲಸ ಮಾಡಿದವರಿಗೂ ಮಂತ್ರಿ ಸ್ಥಾನ ಕೊಡಬೇಕಾ? ಎಂದು ತಮ್ಮ ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಪುಟ ವಿಸ್ತರಣೆ: ಕಾವೇರಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

ಸಚಿವ ಸಂಪುಟ ವಿಸ್ತರಣೆ ಬುಧವಾರ ಸಂಜೆ 3.50 ರಾಜಭವನದಲ್ಲಿ ನಡೆಯಲಿದೆ. ಸದ್ಯ 7 ಸ್ಥಾನಗಳನ್ನು ಭರ್ತಿ ಮಾಡಲು ಬಿಎಸ್‌ವೈ ಮುಂದಾಗಿದ್ದಾರೆ. ಉಮೇಶ ಕತ್ತಿ, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಎಸ್.ಅಂಗಾರ, ಎಂ.ಟಿ.ಬಿ.ನಾಗರಾಜ್, ಆರ್.ಶಂಕರ್, ಸಿ.ಪಿ.ಯೋಗೇಶ್ವರ್ ಸಂಪುಟ ಸೇರ್ಪಡೆಯಾಗುತ್ತಿದ್ದಾರೆ ಎಂದು ಬಿಎಸ್‌ವೈ ಅಧಿಕೃತವಾಗಿ ತಿಳಿಸಿದ್ದಾರೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ