Please enable javascript.ಬಾಲಕಿ ಮೇಲೆ ಅತ್ಯಾಚಾರ : 10 ವರ್ಷ ಜೈಲು ಶಿಕ್ಷೆ - 10 year jail to rapist - Vijay Karnataka

ಬಾಲಕಿ ಮೇಲೆ ಅತ್ಯಾಚಾರ : 10 ವರ್ಷ ಜೈಲು ಶಿಕ್ಷೆ

Vijaya Karnataka 27 Mar 2019, 5:00 am
Subscribe

ಲಕಿಯನ್ನು ಪ್ರೀತಿಸುತ್ತಿರುವುದಾಗಿ ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿಸಿದ ಶಾರುಕ್‌ ಖಾನ್‌ ಎಂಬಾತನಿಗೆ (22) 10 ವರ್ಷ ಜೈಲು ಶಿಕ್ಷೆ ವಿಧಿಸಿ 55ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ತೀರ್ಪು ನೀಡಿದೆ.

jail
ಬೆಂಗಳೂರು: ಲಕಿಯನ್ನು ಪ್ರೀತಿಸುತ್ತಿರುವುದಾಗಿ ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿಸಿದ ಶಾರುಕ್‌ ಖಾನ್‌ ಎಂಬಾತನಿಗೆ (22) 10 ವರ್ಷ ಜೈಲು ಶಿಕ್ಷೆ ವಿಧಿಸಿ 55ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ತೀರ್ಪು ನೀಡಿದೆ.

ಪ್ರಕರಣ ದಾಖಲಾಗುವ ವೇಳೆ ಬಾಲಕಿ 8 ತಿಂಗಳ ಗರ್ಭಿಣಿಯಾಗಿದ್ದು, ಈ ಸಂಬಂಧ ಸಂತ್ರಸ್ತೆಯ ತಾಯಿ ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಶಾರುಕ್‌ ಖಾನ್‌ನನ್ನು ಬಂಧಿಸಿದ್ದರು. ತನಿಖೆ ಪೂರ್ಣಗೊಳಿಸಿ ಶಾರುಕ್‌ ವಿರುದ್ಧ ಪೋಕ್ಸೋ ಮತ್ತು ಅತ್ಯಾಚಾರ ಆರೋಪದಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿತ್ತು.

ನೀರಿನ ಟ್ಯಾಂಕರ್‌ ಚಾಲಕನಾಗಿರುವ ಶಾರುಕ್‌ ಖಾನ್‌, ಮನೆ ಸಮೀಪದಲ್ಲಿ ವಾಸವಿದ್ದ ಬಾಲಕಿಯನ್ನು ಪ್ರೀತಿಸುವುದಾಗಿ ಹೇಳಿದ್ದ. ಅದಕ್ಕೆ ಆಕೆ ನಿರಾಕರಿಸಿದಾಗ ಬೆದರಿಸಿ ತಾನು ವಾಸವಿದ್ದ ಶೆಡ್‌ಗೆ ಕರೆದೊಯ್ದು ಹಲವು ಬಾರಿ ಅತ್ಯಾಚಾರ ಮಾಡಿದ್ದ. ಬಾಲಕಿ ಗರ್ಭಿಣಿಯಾಗಿರುವುದು ಗೊತ್ತಾಗಿ ತಾಯಿಯೇ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ವೇಳೆ ಹಲವು ಸಾಕ್ಷಿಗಳು ಉಲ್ಟಾ ಹೊಡೆದಿದ್ದರು. ಆದರೂ, ತನಿಖೆ ವೇಳೆ ಲಭ್ಯವಿದ್ದ ಸಾಕ್ಷಿ ದಾಖಲೆಗಳು, ಹೇಳಿಕೆಗಳಿಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಶಾರುಕ್‌ ಖಾನ್‌ಗೆ ಶಿಕ್ಷೆ ವಿಧಿಸಿ ಆದೇಶಿಸಿದೆ ಎಂದು ಸರಕಾರಿ ಅಭಿಯೋಜಕ ರಂಗಯ್ಯ ತಿಳಿಸಿದರು.
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ