ಆ್ಯಪ್ನಗರ

ಟಿಡಿಆರ್‌ ಹಗರಣ: ಖಾಸಗಿ ಸರ್ವೇಯರ್‌ ಮನೆಗಳ ಮೇಲೆ ಎಸಿಬಿ ದಾಳಿ

ಬಿಬಿಎಂಪಿಯ ಬಹುಕೋಟಿ ಟಿಡಿಆರ್‌ ಹಗರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬಿಡಿಎ ಎಂಜಿನಿಯರ್‌ ಮತ್ತು ಖಾಸಗಿ ವ್ಯಕ್ತಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು, ತನಿಖೆ ಮುಂದುವರಿಸಿ ಮತ್ತಿಬ್ಬರು ಖಾಸಗಿ ಸರ್ವೆಯರ್‌ಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.

Vijaya Karnataka 2 May 2019, 5:00 am
ಬೆಂಗಳೂರು : ಬಿಬಿಎಂಪಿಯ ಬಹುಕೋಟಿ ಟಿಡಿಆರ್‌ ಹಗರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಬಿಡಿಎ ಎಂಜಿನಿಯರ್‌ ಮತ್ತು ಖಾಸಗಿ ವ್ಯಕ್ತಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು, ತನಿಖೆ ಮುಂದುವರಿಸಿ ಮತ್ತಿಬ್ಬರು ಖಾಸಗಿ ಸರ್ವೆಯರ್‌ಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿ ಬಿಬಿಎಂಪಿ ಮತ್ತು ಬಿಡಿಎನ ದಾಖಲೆಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.
Vijaya Karnataka Web acb raid on pvt surveyors houses
ಟಿಡಿಆರ್‌ ಹಗರಣ: ಖಾಸಗಿ ಸರ್ವೇಯರ್‌ ಮನೆಗಳ ಮೇಲೆ ಎಸಿಬಿ ದಾಳಿ


ಆರ್‌ಎಂವಿ ಬಡಾವಣೆಯಲ್ಲಿರುವ ಅಭಿಷೇಕ್‌ ಮತ್ತು ಗೆದ್ದಲಹಳ್ಳಿಯಲ್ಲಿರುವ ಮನೋಜ್‌ ಎಂಬುವರ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ಬುಧವಾರ ದಾಳಿ ನಡೆಸಿದಾಗ ಬಿಡಿಎ ಮತ್ತು ಬಿಬಿಎಂಪಿ ಕಚೇರಿಗಳಲ್ಲಿ ಇರಬೇಕಾಗಿದ್ದ ದಾಖಲೆಗಳು ಪತ್ತೆಯಾಗಿವೆ. ಅವುಗಳನ್ನು ಜಪ್ತಿ ಮಾಡಿಕೊಂಡಿರುವ ಅಧಿಕಾರಿಗಳು, ವಿಚಾರಣೆಗೆ ಹಾಜರಾಗಲು ನೋಟಸ್‌ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಮಾ.26ರಂದು ಬಿಡಿಎ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ ಕೃಷ್ಣಲಾಲ್‌ ಮತ್ತು ಇಬ್ಬರು ಖಾಸಗಿ ವ್ಯಕ್ತಿಗಳಿಗೆ ಸೇರಿದ ಆರು ಸ್ಥಳಗಳ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ಕೃಷ್ಣಲಾಲ್‌ ಸೇರಿ ಮೂವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿತ್ತು. ಆದರೆ, ಕೃಷ್ಣಲಾಲ್‌ ಅವರು ವಿಚಾರಣೆಗೆ ಗೈರು ಹಾಜರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ