ಆ್ಯಪ್ನಗರ

ಬಿಡುಗಡೆಯಾದ ಎರಡೇ ದಿನದಲ್ಲಿ ಮತ್ತೆ ಜೈಲಿಗೆ

ಬಿಡುಗಡೆಯಾದ ಎರಡೇ ದಿನಕ್ಕೆ ಮತ್ತೆ ಕಳ್ಳತನಕ್ಕೆ ಹೋದ ಕಳ್ಳ ರೆಡ್‌ ಹ್ಯಾಂಡ್‌ ಆಗಿ ಪೊಲೀಸರಿಗೆ ಸಿಕ್ಕಿಬಿದ್ದು ಮತ್ತೆ ಜೈಲು ಪಾಲಾಗಿದ್ದಾನೆ.

ವಿಕ ಸುದ್ದಿಲೋಕ 15 Jun 2016, 4:00 am

-ಕಳ್ಳತನ ಮಾಡಿ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ ಕಳ್ಳ-

ಬೆಂಗಳೂರು: ಬಿಡುಗಡೆಯಾದ ಎರಡೇ ದಿನಕ್ಕೆ ಮತ್ತೆ ಕಳ್ಳತನಕ್ಕೆ ಹೋದ ಕಳ್ಳ ರೆಡ್‌ ಹ್ಯಾಂಡ್‌ ಆಗಿ ಪೊಲೀಸರಿಗೆ ಸಿಕ್ಕಿಬಿದ್ದು ಮತ್ತೆ ಜೈಲು ಪಾಲಾಗಿದ್ದಾನೆ.

ಅಸ್ಸಾಂ ಮೂಲದ ರವಿ ತಾಪ ಸಿಕ್ಕಿಬಿದ್ದ ಕಳ್ಳ. ಈತ ಶಿರೂರುಪಾರ್ಕ್‌ ಬಳಿಯಲ್ಲಿರುವ ಕಚೇರಿಯೊಂದರ ಕಿಟಕಿ ಗಾಜು ಮುರಿದು ಹಣ, ಎಟಿಎಂ ಹಾಗೂ ಇನ್ನಿತರ ವಸ್ತುಗಳನ್ನು ಕಳ್ಳತನ ಮಾಡಿದ್ದ. ಬಳಿಕ ಕಳವು ಮಾಡಿದ ವಸ್ತುಗಳನ್ನು ತೆಗೆದುಕೊಂಡು ಹೋಗುವಾಗ ರಾತ್ರಿ ಗಸ್ತಿನಲ್ಲಿದ್ದ ಶೇಷಾದ್ರಿಪುರಂ ಠಾಣೆಯ ಸಿಬ್ಬಂದಿ ಜಹೀರ್‌ ಅಹಮದ್‌, ಎಂ.ಮಧು ಅವರ ಕೈಗೆ ಸಿಕ್ಕಿ ಬಿದ್ದಿದ್ದಾನೆ.

ಈ ವೇಳೆ ಆತನ ಬಳಿ 15 ಸಾವಿರ ರೂ. ಮತ್ತು ಎಟಿಎಂ ಕಾರ್ಡ್‌ಗಳು ಇದ್ದವು. 2014ರಲ್ಲಿ ಚಂದ್ರಾಲೇಔಟ್‌ ಠಾಣೆ ಪೊಲೀಸರು ಕಳ್ಳತನ ಪ್ರಕರಣವೊಂದರಲ್ಲಿ ಬಂಧಿಸಿದ್ದರು. ಆರೋಪ ಸಾಬೀತಾದ ಕಾರಣ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದ. ಅಲ್ಲಿಂದ ಬಿಡುಗಡೆಯಾದ ಎರಡೇ ದಿನದಲ್ಲಿ ಮತ್ತೆ ಕಳ್ಳತನ ಮಾಡಲು ಹೋಗಿ ಸಿಕ್ಕಿಬಿದ್ದಿದ್ದಾನೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ