ಆ್ಯಪ್ನಗರ

ಬೆಂಗಳೂರು: ಕರ್ತವ್ಯನಿರತ ಮಹಿಳಾ ಪೇದೆ ಮೇಲೆ ಹಲ್ಲೆ, ಮೂವರ ಬಂಧನ

ಲಾಕ್‌ಡೌನ್‌ ನಿಯಮ ಮೀರಿ ಬೈಕ್ ನಲ್ಲಿ ಸುತ್ತಾಡುತ್ತಿದ್ದನ್ನು ಪ್ರಶ್ನಿಸಿದ್ದಕ್ಕೆ ಕರ್ತವ್ಯನಿರತ ಮಹಿಳಾ ಪೇದೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಮೂವರನ್ನು ಬಂಧಿಸಲಾಗಿದೆ. ಮೂರು ಬೈಕ್ ನಲ್ಲಿ ತ್ರಿಬಲ್ ರೈಡ್ ಮಾಡುತ್ತಿದ್ದರು.

Vijaya Karnataka Web 4 Apr 2020, 9:02 am
ಬೆಂಗಳೂರು: ಲಾಕ್‌ಡೌನ್‌ ವೇಳೆ ಕರ್ತವ್ಯನಿರತ ಮಹಿಳಾ ಪೇದೆ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಹುಳಿಮಾವು ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
Vijaya Karnataka Web coups


ರವಿ(24), ರೋಹಿತ್‌(25) ಮತ್ತು ಪ್ರವೀಣ್‌(24) ಬಂಧಿತ ಆರೋಪಿಗಳು. ಹುಳಿಮಾವು ಠಾಣೆಯ ಪೇದೆ ಹೇಮಾ ಮೇಲೆ ಇವರು ಹಲ್ಲೆ ನಡೆಸಿದ್ದರು. ಇದರಿಂದ ಹೇಮಾ ಅವರ ಮುಖ ಮತ್ತು ಕಣ್ಣಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಏ.1ರಂದು ಸಂಜೆ 6 ಗಂಟೆ ವೇಳೆಯಲ್ಲಿ ಘಟನೆ ನಡೆದಿದೆ. ದೊಡ್ಡಕಮ್ಮನಹಳ್ಳಿಯ ಜುಂಜಪ್ಪ ಸರ್ಕಲ್‌ ಬಳಿ ಮುಖ್ಯಪೇದೆ ರಾಜೇಶ್ವರಿ, ಮಹಿಳಾ ಪೇದೆ ಹೇಮಾ ಮತ್ತು ಚಿಕ್ಕಪ್ಪ ಅವರನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅವರು ಅನವಶ್ಯಕವಾಗಿ ಮನೆಯಿಂದ ಹೊರಗೆ ಬರುವವರು ಮತ್ತು ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಅದೇ ಮಾರ್ಗದಲ್ಲಿ ಬೈಕ್‌ನಲ್ಲಿ ಬಂದ ಮೂವರನ್ನು ತಡೆದು ತಪಾಸಣೆ ನಡೆಸುವ ವೇಳೆ ಘಟನೆ ನಡೆದಿದೆ.

ಕೊರೊನಾ ಲೈವ್ ಅಪ್ಡೇಟ್ಸ್: ದೇಶದಲ್ಲಿ 3100ರ ಗಡಿ ದಾಟಿದ ಸೋಂಕಿತ ಪ್ರಕರಣ!

ಪಾಸ್‌ ಇಲ್ಲದೆಯೇ, ಅನವಶ್ಯಕವಾಗಿ ಓಡಾಡುತ್ತಿರುವುದು ಕಂಡು ಬಂದಿದ್ದರಿಂದ ಮೂವರನ್ನೂ ತಡೆದು ನಿಲ್ಲಿಸಿ ತಪಾಸಣೆಗೆ ಒಳಪಡಿಸಲಾಗಿತ್ತು. ಇದೇ ಕಾರಣಕ್ಕೆ ಕರ್ತವ್ಯನಿರತ ಸಿಬ್ಬಂದಿ ಜತೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೆ, ಮಹಿಳಾ ಪೇದೆ ಹೇಮಾ ಅವರ ಶರ್ಟ್‌ ಹಿಡಿದು ಎಳೆದು ತಳ್ಳಿದ್ದರು. ಇದರಿಂದ ಅವರ ಕಣ್ಣಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ