ಆ್ಯಪ್ನಗರ

ವೈದ್ಯರ ಕಾರು ಡಿಕ್ಕಿ ಹೊಡೆದು ಯುವಕ ಸಾವು

ಪಾದಚಾರಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆಸಿ ಅವರ ಸಾವಿಗೆ ಕಾರಣರಾದ ಆರೋಪದ ಮೇಲೆ ಹಲಸೂರು ಸಂಚಾರ ಠಾಣೆ ಪೊಲೀಸರು ಕ್ಯಾನ್ಸರ್‌ ತಜ್ಞ ಡಾ.ರವಿತೇಜ (32) ಅವರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿದ್ದಾರೆ.

Vijaya Karnataka 21 Aug 2018, 12:26 pm
ಬೆಂಗಳೂರು: ಪಾದಚಾರಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆಸಿ ಅವರ ಸಾವಿಗೆ ಕಾರಣರಾದ ಆರೋಪದ ಮೇಲೆ ಹಲಸೂರು ಸಂಚಾರ ಠಾಣೆ ಪೊಲೀಸರು ಕ್ಯಾನ್ಸರ್‌ ತಜ್ಞ ಡಾ.ರವಿತೇಜ (32) ಅವರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿದ್ದಾರೆ.
Vijaya Karnataka Web accident


ದೊಮ್ಮಲೂರು ಮೇಲುರಸ್ತೆ ಬಳಿ ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದ್ದು, ಸ್ಥಳೀಯ ನಿವಾಸಿ ಕೆವಿನ್‌ (17) ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದಿತ್ತು. ಇದರಿಂದ ತೀವ್ರ ರಕ್ತಸ್ರಾವ ಆಗಿ ಆತ ಸ್ಥಳದಲ್ಲೇ ಮೃತಪಟ್ಟಿದ್ದ ಎಂದು ಪೊಲೀಸರು ಮಾಹಿತಿ ನೀಡಿದರು.

ಅಪಘಾತದ ವೇಳೆ ವೈದ್ಯರು ಮದ್ಯ ಸೇವನೆ ಮಾಡಿದ್ದರು ಎನ್ನುವ ಸಂಗತಿ ಪರಿಶೀಲನೆ ವೇಳೆ ಪತ್ತೆಯಾಗಿದೆ. ಮದುವೆ ಹಾಗೂ ಶುಭ ಸಮಾರಂಭಗಳಲ್ಲಿ ಹೂವಿನ ಅಲಂಕಾರದ ಕೆಲಸ ಮಾಡುತ್ತಿದ್ದ ಕೆವಿನ್‌ ಭಾನುವಾರ ತಡರಾತ್ರಿ 12.30ರ ಸುಮಾರಿಗೆ ದೊಮ್ಮಲೂರು ಮೇಲುರಸ್ತೆ ಬಳಿಯ ಕನಕದಾಸ ಪಾರ್ಕ್‌ ಬಳಿ ರಸ್ತೆ ದಾಟುತ್ತಿದ್ದರು. ಇದೇ ವೇಳೆ ತಮ್ಮ ಬಿಎಂಡಬ್ಲ್ಯೂ ಕಾರಿನಲ್ಲಿ ವೇಗವಾಗಿ ಬಂದ ರವಿತೇಜ ಏಕಾಏಕಿ ಕೆವಿನ್‌ಗೆ ಡಿಕ್ಕಿ ಹೊಡೆದಿದ್ದರು. ಈ ಸಂಬಂಧ ವೈದ್ಯರನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲಾಗಿದೆ. ತನಿಖೆ ಮುಂದುವರಿದಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ