ಆ್ಯಪ್ನಗರ

ಸೆಲ್ಫಿ ಫೋಟೊ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಸಹೋದ್ಯೋಗಿ ವಿರುದ್ಧ ಎಫ್‌ಐಆರ್‌!

ಸಹೋದ್ಯೋಗಿ ಜತೆಗಿನ ಸೆಲ್ಫಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದವನ ವಿರುದ್ಧ ರಾಮಮೂರ್ತಿನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಮೆಟ್ರೊ ರೈಲು ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ದೂರಿನ ಮೇರಿಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Vijaya Karnataka Web 1 Aug 2020, 3:58 pm
ಬೆಂಗಳೂರು: ಸಹೋದ್ಯೋಗಿ ಜತೆಗಿನ ಸೆಲ್ಫಿ ಫೋಟೋ ಇಟ್ಟುಕೊಂಡು ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದವನ ವಿರುದ್ಧ ರಾಮಮೂರ್ತಿನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.
Vijaya Karnataka Web FIR


ಹೊಯ್ಸಳನಗರದ ನಿವಾಸಿ 27 ವರ್ಷದ ಮಹಿಳೆ ಮೆಟ್ರೊ ರೈಲು ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದು ಇವರು ಕೊಟ್ಟ ದೂರಿನ ಮೇರೆಗೆ ಹರೀಶ್‌ ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಸಹೋದ್ಯೋಗಿ ಆಗಿರುವ ಕಾರಣದಿಂದ ಸೆಲ್ಫಿ ತೆಗೆದುಕೊಂಡಿದ್ದರು. ಇದಾದ ಕೆಲ ದಿನಗಳ ಬಳಿಕ ಯುವಕ ತನ್ನನ್ನು ಪ್ರೀತಿಸುವಂತೆ ಮಹಿಳೆಯ ಬೆನ್ನು ಬಿದ್ದಿದ್ದ. ತನಗೆ ಮದುವೆಯಾಗಿದೆ ಎಂದು ಹೇಳಿ ಆತನಿಗೆ ಬುದ್ಧಿ ಹೇಳಿದರೂ ಆತ ಕೇಳಲಿಲ್ಲ.

ಭ್ರಷ್ಟಾಚಾರದ ಬಗ್ಗೆ ಡಿಕೆಶಿ ಮಾತನಾಡೋದು, ಭೂತದ ಬಾಯಲ್ಲಿ ಭಗವದ್ಗೀತೆಗೂ ವ್ಯತ್ಯಾಸವಿಲ್ಲ- ಸಿಟಿ ರವಿ ಟಾಂಗ್‌

ಬಳಿಕ ಆತನ ಕಾಟ ತಾಳದೆ ಮಹಿಳೆ ಕೆಲಸ ಬಿಟ್ಟಿದ್ದರು. ಅಷ್ಟಾದರೂ ಮತ್ತೆ ಮತ್ತೆ ಕರೆ ಮಾಡಿ ಕಾಟ ಕೊಡುತ್ತಿದ್ದ. ತಾನು ಹೇಳಿದಂತೆ ಕೇಳಬೇಕು. ಇಲ್ಲವಾದರೆ ಸೆಲ್ಫಿ ಫೋಟೊಗಳನ್ನು ಅಶ್ಲೀಲವಾಗಿ ಎಡಿಟ್‌ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್‌ ಮಾಡುವುದಾಗಿ ಬೆದರಿಸಿದ್ದಾನೆ ಎಂದು ಆರೋಪಿಸಿ ಮಹಿಳೆ ದೂರಿನಲ್ಲಿ ವಿವರಿಸಿದ್ದಾರೆ.

6ನೇ ತರಗತಿಯಿಂದ ಇಂಗ್ಲಿಷ್‌ ಮಾಧ್ಯಮವಿರಲಿ: ಡಾ.ಎಲ್‌.ಹನುಮಂತಯ್ಯ

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದು ಸದ್ಯದಲ್ಲೇ ಆರೋಪಿಯನ್ನು ವಶಕ್ಕೆ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ