ಆ್ಯಪ್ನಗರ

ಸ್ನೇಹಿತನ ಕಾರನ್ನು ಒಎಲ್‌ಎಕ್ಸ್‌ನಲ್ಲಿ ಮಾರಾಟ ಮಾಡಿ ಸಿಕ್ಕಿ ಬಿದ್ದ

ಪ್ರವಾಸಕ್ಕೆ ಹೋಗಿ ಬರುವುದಾಗಿ ಹೇಳಿ ಸ್ನೇಹಿತನ ಕಾರನ್ನು ಪಡೆದು ಒಎಲ್‌ಎಕ್ಸ್‌ನಲ್ಲಿ ಮಾರಾಟ ಮಾಡಿದ್ದ ಖದೀಮನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

Vijaya Karnataka 24 Jun 2019, 5:00 am
ಬೆಂಗಳೂರು : ಪ್ರವಾಸಕ್ಕೆ ಹೋಗಿ ಬರುವುದಾಗಿ ಹೇಳಿ ಸ್ನೇಹಿತನ ಕಾರನ್ನು ಪಡೆದು ಒಎಲ್‌ಎಕ್ಸ್‌ನಲ್ಲಿ ಮಾರಾಟ ಮಾಡಿದ್ದ ಖದೀಮನನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web friends vehicle sold in olx arrest
ಸ್ನೇಹಿತನ ಕಾರನ್ನು ಒಎಲ್‌ಎಕ್ಸ್‌ನಲ್ಲಿ ಮಾರಾಟ ಮಾಡಿ ಸಿಕ್ಕಿ ಬಿದ್ದ


ಕನಕಪುರದ ನಿವಾಸಿ ಚರಣ್‌ರಾಜ್‌ (32) ಬಂಧಿತ ಆರೋಪಿ. ಫೇಸ್‌ಬುಕ್‌ನಲ್ಲಿ ಶ್ರೀಮಂತ ಯುವಕರನ್ನು ಪತ್ತೆ ಹಚ್ಚಿ ಅವರನ್ನು ಸ್ನೇಹಿತರನ್ನಾಗಿ ಮಾಡಿಕೊಳ್ಳುತ್ತಿದ್ದ ಚರಣ್‌ರಾಜ್‌, ಬಳಿಕ ಅವರನ್ನು ಕಾಫಿ ಶಾಧಿಪ್‌ಗೆ ಕರೆಸಿ ಆತ್ಮೀಯತೆ ಬೆಳೆಸಿಕೊಳ್ಳುತ್ತಿದ್ದ. ಕೆಲ ದಿನಗಳ ನಂತರ ಊಟಕ್ಕೆ ಐಷಾರಾಮಿ ಹೋಟೆಲ್‌ಗೆ ಕರೆಸುತ್ತಿದ್ದ. ಈ ರೀತಿ ಒಡನಾಟ ಬೆಳೆಸಿಕೊಂಡು ಒಂದೆರಡು ದಿನ ಪ್ರವಾಸಕ್ಕೆ ಹೋಗಿ ಬರುವುದಾಗಿ ಹೇಳಿ ಅವರ ಕಾರನ್ನು ಬಾಡಿಗೆಗೆ ಪಡೆಯುತ್ತಿದ್ದ. ಬಳಿಕ ಕಾರನ್ನು ಒಎಲ್‌ಎಕ್ಸ್‌ನಲ್ಲಿ ಮಾರಾಟ ಮಾಡಿ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿ ತಲೆಮರೆಸಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಮಾಕ್ಷಿಪಾಳ್ಯದ ನಿವಾಸಿ ರುದ್ರೇಶ್‌ ಎನ್ನುವವರಿಗೆ ಮೂಧಿರು ತಿಂಗಳ ಹಿಂದೆ ಈತ ಪರಿಚಯವಾಗಿದ್ದ. ಕೆಲವು ದಿನಗಳ ಹಿಂದೆ ಅವರ ಕಾರನ್ನು ಎರಡು ದಿನಗಳ ಮಟ್ಟಿಗೆ ಪಡೆದುಕೊಂಡು ಒಎಲ್‌ಎಕ್ಸ್‌ನಲ್ಲಿ ಮಾರಾಟ ಮಾಡಿಬಿಟ್ಟಿದ್ದ. ರುದ್ರೇಶ್‌ ಮೇಲಿಂದ ಮೇಲೆ ಚರಣ್‌ರಾಜ್‌ಗೆ ಕರೆ ಮಾಡಿದರೂ ಮೊಬೈಲ್‌ ಸ್ವಿಚ್‌ ಆಫ್‌ ಬರುತ್ತಿತ್ತು. ಅನುಮಾನಗೊಂಡು ಕಾಮಾಕ್ಷಿಪಾಳ್ಯ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾಧಿರೆ. ಆಧಿರೋಧಿಪಿ ಕಾರನ್ನು ಒಎಲ್‌ಎಕ್ಸ್‌ನಲ್ಲಿ ಮಾರಾಟ ಮಾಡಿದ್ದನ್ನು ಒಪ್ಪಿಕೊಂಡಿದ್ದಾನೆ. ಸದ್ಯ ಆರೋಪಿಯನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ