ಆ್ಯಪ್ನಗರ

ವಿಧವೆಗೆ ಲೈಂಗಿಕ ಕಿರುಕುಳ: ಕೇಸ್‌ ದಾಖಲು

ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿರುವ 39 ವರ್ಷದ ವಿಧವೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಶೋಕ್‌ ಕುಮಾರ್‌ ಎಂಬಾತನ ವಿರುದ್ಧ ಬ್ಯಾಟರಾಯನಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vijaya Karnataka 26 Mar 2019, 5:00 am
ಬೆಂಗಳೂರು: ಮೆಡಿಕಲ್‌ ಶಾಪ್‌ನಲ್ಲಿ ಕೆಲಸ ಮಾಡುತ್ತಿರುವ 39 ವರ್ಷದ ವಿಧವೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಅಶೋಕ್‌ ಕುಮಾರ್‌ ಎಂಬಾತನ ವಿರುದ್ಧ ಬ್ಯಾಟರಾಯನಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka Web harrasemnt


15 ವರ್ಷಗಳ ಹಿಂದೆ ಅಪಘಾತದಲ್ಲಿ ಪತಿಯನ್ನು ಕಳೆದುಕೊಂಡಿರುವ ಸಂತ್ರಸ್ಥೆ, ಮೆಡಿಕಲ್‌ ಶಾಪ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರಿಗೆ ಇಬ್ಬರು ಮಕ್ಕಳಿದ್ದು ಕಾಲೇಜು ವ್ಯಾಸಂಗ ಮಾಡುತ್ತಿದ್ದಾರೆ.

''ಆರೋಪಿಯು ಆಗಾಗ ಔಷಧಿ ಖರೀದಿಸುವ ಸೋಗಿನಲ್ಲಿ ಶಾಪ್‌ಗೆ ಬಂದು ಕಿರುಕುಳ ನೀಡುತ್ತಿದ್ದ. ಮದುವೆಯಾಗುವಂತೆ ಪೀಡಿಸುತ್ತಿದ್ದ. ನಿನ್ನನ್ನು ನೋಡಿಕೊಳ್ಳುತ್ತೇನೆ ಎಂದಿದ್ದ. ಅದಕ್ಕೆ ನಿರಾಕರಿಸಿದ್ದಕ್ಕೆ ಲೈಂಗಿಕವಾಗಿ ಸಹಕರಿಸು ಇಲ್ಲದಿದ್ದರೆ ನಿನ್ನ ಮಗಳನ್ನು ಅಪಹರಿಸುತ್ತೇನೆ ಎಂದು ಬೆದರಿಸಿದ್ದ. ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಮಾ.19ರಂದು ರಾತ್ರಿ 11ರ ಸುಮಾರಿಗೆ ಕೆಲಸ ಮಾಡುವ ಶಾಪ್‌ ಬಳಿ ಬಂದಿದ್ದ ಆರೋಪಿ, ಪ್ರಾಣ ಬೆದರಿಕೆ ಹಾಕಿದ್ದ'' ಎಂದು ದೂರಿನಲ್ಲಿ ಮಹಿಳೆ ಆರೋಪಿದ್ದಾರೆ.

ಲೈಂಗಿಕ ಕಿರುಕುಳ, ಮಹಿಳೆ ಗೌರವಕ್ಕೆ ಧಕ್ಕೆ, ಬೆದರಿಕೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ