ಆ್ಯಪ್ನಗರ

ಬಾಲಕಿಯನ್ನು ಕೂಡಿ ಹಾಕಿ ಅತ್ಯಾಚಾರ

ಅಪ್ರಾಪ್ತ ಬಾಲಕಿಯನ್ನು ಕೊಠಡಿಯಲ್ಲಿ ಕೂಡಿ ಹಾಕಿ ಅತ್ಯಾಚಾರ ನಡೆಸಿರುವ ತಾಲೂಕಿನ ಬಳ್ಳೂರಿನಲ್ಲಿ ಬುಧವಾರ ರಾತ್ರಿ ನಡೆದಿದೆ.

Vijaya Karnataka 29 Mar 2019, 5:00 am
ಆನೇಕಲ್‌: ಅಪ್ರಾಪ್ತ ಬಾಲಕಿಯನ್ನು ಕೊಠಡಿಯಲ್ಲಿ ಕೂಡಿ ಹಾಕಿ ಅತ್ಯಾಚಾರ ನಡೆಸಿರುವ ತಾಲೂಕಿನ ಬಳ್ಳೂರಿನಲ್ಲಿ ಬುಧವಾರ ರಾತ್ರಿ ನಡೆದಿದೆ.
Vijaya Karnataka Web rape


ಘಟನೆಗೆ ಸಂಬಂಧಿಸಿದಂತೆ ಬಳ್ಳೂರಿನ ಇಬ್ಬರು ಆರೋಪಿಗಳಾದ ಮಹೇಶ್‌ ಹಾಗೂ ಅರುಣ್‌ರನ್ನು ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಆರೋಪಿಗಳು ಗ್ರಾಮದ 15 ವರ್ಷದ ಬಾಲಕಿಯನ್ನು ಆಮಿಷವೊಡ್ಡಿ ಕೊಠಡಿಗೆ ಕರೆದಿದ್ದರು. ಒಪ್ಪದಿದ್ದಾಗ ಬೆದರಿಸಿ ಕೊಠಡಿಗೆ ಕರೆದೊಯ್ದು ರಾತ್ರಿಯಿಡೀ ಕೂಡಿ ಹಾಕಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ. ರಾತ್ರಿ ಮಗಳು ಮನೆಗೆ ಬಾರದಿರುವುದನ್ನು ಗಮನಿಸಿದ ಆಕೆಯ ತಂದೆ ಹುಡುಕಾಟ ನಡೆಸಿದ್ದಾರೆ. ತಂದೆ ಹುಡುಕಾಟ ನಡೆಸುತ್ತಿರುವುದನ್ನು ನೋಡಿದ ಆರೋಪಿಗಳು ಬಾಲಕಿಯ ಬಗ್ಗೆ ಏನೂ ಗೊತ್ತಿಲ್ಲದಂತೆ ವರ್ತಿಸಿದ್ದಾರೆ. ನಂತರ ರೂಮಿಗೆ ತೆರಳಿ ಅತ್ಯಾಚಾರ ಮಾಡಿ ಬೆಳಗಿನ ಜಾವ ಬಾಲಕಿಯನ್ನು ಮನೆಗೆ ಕಳುಹಿಸಿದ್ದಾರೆ. ಈ ಸಮಯದಲ್ಲಿ ಬಂದ ಬಾಲಕಿಯನ್ನು ಗದರಿಸಿ ವಿಚಾರಿಸಿದಾಗ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಕೂಡಲೇ ಆಕೆಯ ಪೋಷಕರು ಅತ್ತಿಬೆಲೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಪೋಕ್ಸೋ ಕಾಯಿದೆ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ