ಆ್ಯಪ್ನಗರ

ಎನ್‌ಎಸ್‌ಯುಐ ಕಾರ್ಯದರ್ಶಿಗಳ ಮೇಲೆ ಲಾಂಗ್‌ನಿಂದ ಹಲ್ಲೆ

ರಸ್ತೆ ಮಧ್ಯೆ ನಿಂತು ಮದ್ಯ ಸೇವಿಸುತ್ತಿದ್ದುದನ್ನು ಪ್ರಶ್ನಿಸಿದ ಕಾರಣಕ್ಕೆ ಕಾಂಗ್ರೆಸ್‌ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐನ ಪ್ರಧಾನ ಕಾರ್ಯದರ್ಶಿ ಹಾಗೂ ನಗರ ಕಾರ್ಯದರ್ಶಿ ಮೇಲೆ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಘಟನೆ ಕೆ.ಜಿ.ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Vijaya Karnataka 19 Feb 2019, 5:00 am
ಬೆಂಗಳೂರು : ರಸ್ತೆ ಮಧ್ಯೆ ನಿಂತು ಮದ್ಯ ಸೇವಿಸುತ್ತಿದ್ದುದನ್ನು ಪ್ರಶ್ನಿಸಿದ ಕಾರಣಕ್ಕೆ ಕಾಂಗ್ರೆಸ್‌ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐನ ಪ್ರಧಾನ ಕಾರ್ಯದರ್ಶಿ ಹಾಗೂ ನಗರ ಕಾರ್ಯದರ್ಶಿ ಮೇಲೆ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಘಟನೆ ಕೆ.ಜಿ.ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Vijaya Karnataka Web miscreants attacked nsui secretary
ಎನ್‌ಎಸ್‌ಯುಐ ಕಾರ್ಯದರ್ಶಿಗಳ ಮೇಲೆ ಲಾಂಗ್‌ನಿಂದ ಹಲ್ಲೆ


ಘಟನೆಯಲ್ಲಿ ಪ್ರಧಾನ ಕಾರ್ಯದರ್ಶಿ ರಾಜೇಶ್‌ ಹಾಗೂ ನಗರ ಕಾರ್ಯದರ್ಶಿ ಪ್ರಸಾದ್‌ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳಾದ ಸುಮನ್‌ ಹಾಗೂ ಮತ್ತಿಬ್ಬರಿಗಾಗಿ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ರಾತ್ರಿ 9.30 ಗಂಟೆ ಸುಮಾರಿಗೆ ಊಟ ಮಾಡಲು ರಾಜೇಶ್‌ ಮತ್ತು ಪ್ರಸಾದ್‌ ಹೋಟೆಲ್‌ಗೆ ತೆರಳುತ್ತಿದ್ದರು. ಈ ವೇಳೆ ಜೊಮ್ಯಾಟೋದಲ್ಲಿ ಕೆಲಸ ಮಾಡುವ ಮೂವರು ಯುವಕರು ರಸ್ತೆಯಲ್ಲಿ ನಿಂತು ಮದ್ಯ ಸೇವಿಸುತ್ತಿದ್ದರು. ಇದನ್ನು ಪ್ರಶ್ನಿಸಿದ್ದ ಅವರು ಬಳಿಕ ಹೋಟೆಲ್‌ಗೆ ತೆರಳಿದ್ದರು. ಊಟ ಮುಗಿಸಿ ವಾಪಸ್ಸಾಗುವಾಗ 11.30ರ ಸುಮಾರಿಗೆ ನಾಗವಾರ ಸಬ್‌ ರಿಜಿಸ್ಟರ್‌ ಕಚೇರಿ ಬಳಿ ಮಾತನಾಡುತ್ತಾ ನಿಂತಿದ್ದ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿ ಆಗಿದ್ದಾರೆ.

ಘಟನೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದ್ದು ಇದರ ಆಧಾರದಲ್ಲಿ ಆರೋಪಿಗಳ ಗುರುತು ಹಿಡಿಯಲಾಗಿದೆ. ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದು, ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ