ಆ್ಯಪ್ನಗರ

ಪಿಯು ಪರೀಕ್ಷೆ: ಬದಲಿ ವಿದ್ಯಾರ್ಥಿ ಕೇಸು

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಕಲು (ಬದಲಿ) ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿದ್ದು, ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಕ ಸುದ್ದಿಲೋಕ 30 Mar 2016, 3:22 pm
ದಾವಣಗೆರೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಕಲು (ಬದಲಿ) ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿದ್ದು, ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Vijaya Karnataka Web
ಪಿಯು ಪರೀಕ್ಷೆ: ಬದಲಿ ವಿದ್ಯಾರ್ಥಿ ಕೇಸು


ಮಾ.28ರಂದು ನಡೆದ ಕನ್ನಡ ಪರೀಕ್ಷೆಯಲ್ಲಿ ನಗರದ ವಿಶ್ವಚೇತನ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಮಾರುತಿ ಪಪೂ ಕಾಲೇಜಿನ ವಿದ್ಯಾರ್ಥಿ ಬದಲಿಗೆ ಇನ್ನೊಬ್ಬ ಪರೀಕ್ಷೆಗೆ ಹಾಜರಾಗಿದ್ದ.

ಕೊಠಡಿ ಮೇಲ್ವಿಚಾರಕರು ಎಲ್ಲ ವಿದ್ಯಾರ್ಥಿಗಳ ಪ್ರವೇಶ ಪತ್ರ ಹಾಗೂ ಫೋಟೊ ಪರಿಶೀಲನೆ ನಡೆಸಿದಾಗ ಬೇರೆ ವ್ಯಕ್ತಿ ಪರೀಕ್ಷೆಗೆ ಹಾಜರಾಗಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಮೇಲ್ವಿಚಾರಕರು ಮುಖ್ಯ ಅಧೀಕ್ಷಕರ ಗಮನಕ್ಕೆ ತಂದು ಆ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದಾಗ, ಆತ ತನ್ನ ಸ್ನೇಹಿತನ ಪರವಾಗಿ ಪರೀಕ್ಷೆ ಬರೆಯಲು ಬಂದಿರುವುದಾಗಿ ತಿಳಿಸಿದ್ದಾನೆ.

ವಿಶೇಷ ಜಾಗೃತ ದಳದ ಸದಸ್ಯರು ಹಾಗೂ ಪಿಯು ಡಿಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜತೆಗೆ ನಕಲಿ ವಿದ್ಯಾರ್ಥಿಯನ್ನು ಪೊಲೀಸ್ ವಶಕ್ಕೆ ಒಪ್ಪಿಸಿ, ಬದಲಿ ವಿದ್ಯಾರ್ಥಿ ಪ್ರಕರಣ ದಾಖಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ