ಆ್ಯಪ್ನಗರ

ಸುತ್ತೂರುಶ್ರೀ ಜನ್ಮಶತಮಾನೋತ್ಸವ

ಮೈಸೂರು ಜಿಲ್ಲೆ ಸುತ್ತೂರು ಶ್ರೀಕ್ಷೇತ್ರದಲ್ಲಿ ಆ.26ರಿಂದ 29ರವರೆಗೆ ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಜನ್ಮಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ.

ವಿಕ ಸುದ್ದಿಲೋಕ 23 Aug 2016, 11:41 am
ದಾವಣಗೆರೆ: ಮೈಸೂರು ಜಿಲ್ಲೆ ಸುತ್ತೂರು ಶ್ರೀಕ್ಷೇತ್ರದಲ್ಲಿ ಆ.26ರಿಂದ 29ರವರೆಗೆ ಡಾ.ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಜನ್ಮಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ.
Vijaya Karnataka Web
ಸುತ್ತೂರುಶ್ರೀ ಜನ್ಮಶತಮಾನೋತ್ಸವ


ಆ.26ರಂದು ಮಧ್ಯಾಹ್ನ 12.30ಕ್ಕೆ ಜ್ಯೋತಿಯಾತ್ರೆ, ಮೆರವಣಿಗೆಗೆ ಸಾಲೂರು ಮಠದ ಗುರುಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಸಂಜೆ 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.

27ರಂದು ನಡೆಯುವ ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಡಾ. ಶಿವಕುಮಾರ ಸ್ವಾಮೀಜಿ, ಚಿತ್ರದುರ್ಗÜದ ಡಾ. ಶಿವಮೂರ್ತಿ ಮುರುಘಾ ಶರಣರು ಸಾನ್ನಿಧ್ಯವಹಿಸುವರು. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಕೇಂದ್ರ ಮಾನವ ಸಂಪನ್ಮೂಲ ಸಚಿವ ಚಿದಾನಂದ ಸ್ವಾಮಿ ಉದ್ಘಾಟಿಸಲಿದ್ದಾರೆ.

ಮಧ್ಯಾಹ್ನ 3ಕ್ಕೆ ಜೆಎಸ್‌ಎಸ್‌ ಮಹಾವಿದ್ಯಾಪೀಠದ ವಜ್ರಮಹೋತ್ಸವವಿದೆ. ಡಾ. ತೋಂಟದಾರ್ಯ ಸಿದ್ಧಲಿಂಗ ಸ್ವಾಮೀಜಿ, ಕೊಟ್ಟೂರು ಮಠದ ಮಹಾಂತ ಸ್ವಾಮೀಜಿ ಸಾನ್ನಿಧ್ಯವಹಿಸುವರು. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌, ಅನಂತಕುಮಾರ್‌, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಇತರರು ಆಗಮಿಸಲಿದ್ದಾರೆ.

28ರಂದು ಜೆಎಸ್‌ಎಸ್‌ ಗುರುಕುಲ ಅಮೃತಮಹೋತ್ಸವದಲ್ಲಿ ಡಾ. ರವಿಶಂಕರ್‌ ಗುರೂಜಿ, ನಾಗನೂರು ರುದ್ರಾಕ್ಷಿ ಮಠದ ಡಾ. ಸಿದ್ಧರಾಮಸ್ವಾಮಿ ಸ್ವಾಮೀಜಿ ವಹಿಸುವರು. ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ,ಲೋಕಸಭೆ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ್‌ ಖರ್ಗೆ ಭಾಗವಹಿಸಲಿದ್ದಾರೆ.

29ರಂದು ಪ್ರಸಾದ ಸಂಚಿಕೆ ಮಹೋತ್ಸವದಲ್ಲಿ ಸಿರಿಗೆರೆ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ,ಬಾಬಾ ರಾಮ್‌ದೇವರು ಸಾನ್ನಿಧ್ಯವಹಿಸುವರು. ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌, ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾರೋಪ ಭಾಷಣ ಮಾಡಲಿದ್ದಾರೆ .

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ