ಆ್ಯಪ್ನಗರ

ಪತ್ನಿ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ

ಪತ್ನಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ, 6 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ವಿಕ ಸುದ್ದಿಲೋಕ 31 Jan 2018, 4:16 pm
ದಾವಣಗೆರೆ: ಪತ್ನಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ, 6 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
Vijaya Karnataka Web
ಪತ್ನಿ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ


ಹರಿಹರ ತಾಲೂಕಿನ ಗಂಗನರಸಿ ಗ್ರಾಮದ ಶಿವಪ್ಪ(46)ಶಿಕ್ಷೆಗೊಳಗಾದವ. ಶಿವಪ್ಪನಿಗೆ ಅಪಘಾತವಾಗಿ ಪರಿಹಾರದ ಹಣ ಬಂದಿತ್ತು. ಈ ಹಣವನ್ನು ಪತ್ನಿ ಈರಮ್ಮ ಕೊಡುತ್ತಿಲ್ಲವೆಂದು ಜಗಳವಾಡುತ್ತಿದ್ದಾಗ ಕೊಲೆ ಮಾಡಿದ್ದ. ಜಗಳ ಬಿಡಿಸಲು ಬಂದಿದ್ದ ಮಹಿಳೆಯರಿಗೂ ಜೀವ ಬೇದರಿಕೆ ಹಾಕಿದ್ದ. ಈ ಕುರಿತು ಶಿವಪ್ಪನ ಮಗ ವೀರೇಶ್‌ ಹರಿಹರ ಗ್ರಾಮಾಂತರ ಪೊಲೀಸ್‌ ಠಾಣೆಗೆ ದೂರು ನೀಡಿದ್ದ. ಸಬ್‌ಇನ್ಸಪೆಕ್ಟರ್‌ ಎಚ್‌.ಎಂ.ಸಿದ್ದೇಗೌಡ ಪ್ರಕರಣ ದಾಖಲಿಸಿಕೊಂಡಿದ್ದರು. ವೃತ್ತ ನಿರೀಕ್ಷ ಕ ಜೆ.ಎಸ್‌.ನ್ಯಾಮಗೌಡ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಎಂ.ಶ್ರೀದೇವಿ ಪ್ರಕರಣದ ವಿಚಾರಣೆ ನಡೆಸಿ, ಶಿಕ್ಷೆ ನೀಡಿದ್ದಾರೆ. ಸರಕಾರದ ಪರ ಅಭಿಯೋಜಕ ಎಸ್‌.ವಿ.ಪಾಟೀಲ್‌ ವಾದ ಮಂಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ