ಆ್ಯಪ್ನಗರ

ಕಾರು ಡಿಕ್ಕಿ: ನಾಲ್ವರ ಸಾವು

ರಸ್ತೆ ಬದಿಯಲ್ಲಿ ಬಸ್‌ಗೆ ಕಾಯುತ್ತಾ ನಿಂತಿದ್ದವರಿಗೆ ಕಾರ್‌ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ದಾರುಣ ಘಟನೆ ತಾಲೂಕಿನ ಹರಳಹಳ್ಳಿ ಗ್ರಾಮದ ಬಸ್‌ ನಿಲ್ದಾಣದ ಬಳಿ ಬುಧವಾರ ಸಂಜೆ ಸಂಭವಿಸಿದೆ.

Vijaya Karnataka 14 Feb 2019, 5:00 am
ಹೊನ್ನಾಳಿ : ರಸ್ತೆ ಬದಿಯಲ್ಲಿ ಬಸ್‌ಗೆ ಕಾಯುತ್ತಾ ನಿಂತಿದ್ದವರಿಗೆ ಕಾರ್‌ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ದಾರುಣ ಘಟನೆ ತಾಲೂಕಿನ ಹರಳಹಳ್ಳಿ ಗ್ರಾಮದ ಬಸ್‌ ನಿಲ್ದಾಣದ ಬಳಿ ಬುಧವಾರ ಸಂಜೆ ಸಂಭವಿಸಿದೆ.
Vijaya Karnataka Web car collision four people dead
ಕಾರು ಡಿಕ್ಕಿ: ನಾಲ್ವರ ಸಾವು


ತಾಲೂಕಿನ ಅರಬಗಟ್ಟೆ ಗ್ರಾಮದ ರಮೇಶ್‌(38), ಉಷಾ(28), ಚಂದ್ರು(6) ಮತ್ತು ಕಾರು ಚಾಲಕ ದಾವಣಗೆರೆಯ ಎಸ್ಸೆಸ್‌ ಲೇ ಔಟ್‌ ನಿವಾಸಿ, ಗುತ್ತಿಗೆದಾರ ಹಿರೇಮಠ್‌(45) ಸಾವಿಗೀಡಾಗಿರುವ ದುರ್ದೈವಿಗಳು.

ಕಾರಿನ ಟೈರ್‌ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯಲ್ಲಿ ನಿಂತಿದ್ದವರಿಗೆ ಡಿಕ್ಕಿ ಹೊಡೆದು, ಬಳಿಕ ಮರಕ್ಕೆ ತಾಗಿಕೊಂಡು ನಿಂತಿದೆ. ಒಂದು ವೇಳೆ ರಸ್ತೆಯ ಬದಿ ಮರ ಇಲ್ಲದಿದ್ದರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುತ್ತಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.

ತಾಲೂಕಿನ ಅರಬಗಟ್ಟೆ ಗ್ರಾಮದ ಚೀಲೋಡಿ ಮನೆತನದ ಒಂದೇ ಕುಟುಂಬಕ್ಕೆ ಸೇರಿದ ರಮೇಶ್‌, ಉಷಾ, ಚಂದ್ರು ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮಕ್ಕೆ ತೆರಳಲು ಬಸ್‌ಗೆ ಕಾಯುತ್ತ ನಿಂತಿದ್ದರು. ಕಾರ್‌(ನಂ. ಕೆಎ17 ಪಿ5003) ಶಿವಮೊಗ್ಗದಿಂದ ದಾವಣಗೆರೆಗೆ ತೆರಳುತ್ತಿತ್ತು.

ಹೊನ್ನಾಳಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಶವಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಹೊನ್ನಾಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ