ಆ್ಯಪ್ನಗರ

ಬಾಲಕಿ ಅತ್ಯಾಚಾರ ಆರೋಪಿಗೆ ಜೀವಾವಧಿ ಶಿಕ್ಷೆ

ಚಾಕೋಲೇಟ್‌ ಕೊಡಿಸುವುದಾಗಿ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಯುವಕನಿಗೆ 2ನೇ ಹೆಚ್ಚುವರಿ ಸೆಷನ್ಸ್‌ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ಮತ್ತು 65 ಸಾವಿರ ರೂ. ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.

Vijaya Karnataka 11 Jul 2019, 5:00 am
ದಾವಣಗೆರೆ : ಚಾಕೋಲೇಟ್‌ ಕೊಡಿಸುವುದಾಗಿ ಕರೆದೊಯ್ದು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಯುವಕನಿಗೆ 2ನೇ ಹೆಚ್ಚುವರಿ ಸೆಷನ್ಸ್‌ ಹಾಗೂ ಪೋಕ್ಸೋ ವಿಶೇಷ ನ್ಯಾಯಾಲಯ ಕಠಿಣ ಜೀವಾವಧಿ ಶಿಕ್ಷೆ ಮತ್ತು 65 ಸಾವಿರ ರೂ. ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.
Vijaya Karnataka Web child rape convict sentenced to life imprisonment
ಬಾಲಕಿ ಅತ್ಯಾಚಾರ ಆರೋಪಿಗೆ ಜೀವಾವಧಿ ಶಿಕ್ಷೆ


ಚನ್ನಗಿರಿ ತಾಲೂಕಿನ ಹಳ್ಳಿಮಲ್ಲಾಪುರ ಗ್ರಾಮದ ವಾಸಿ ಮಹಾಂತೇಶ ನಾಯ್ಕ (23) ಶಿಕ್ಷೆಗೆ ಗುರಿಯಾದ ಯುವಕ. ಹಳ್ಳಿಮಲ್ಲಾಪುರ ಗ್ರಾಮದ ಸರಕಾರಿ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಚಾಕೋಲೇಟ್‌ ನೀಡಿ ಶಾಲೆಯ ಹಿಂಭಾಗಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದನು. ಈ ಸಂಬಂಧ ಸಂತೆಬೆನ್ನೂರು ಪೊಲೀಸ್‌ ಠಾಣೆಯಲ್ಲಿ ಆರೋಪಿ ಮಹಾಂತೇಶ ನಾಯ್ಕ ವಿರುದ್ಧ ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ದೀರ್ಘ ವಿಚಾರಣೆ ನಡೆದು ಆರೋಪಿ ತಪ್ಪಿತಸ್ಥನೆಂದು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶೆ ನಾಗಶ್ರೀ ಆರೋಪಿಗೆ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ಮತ್ತು 65 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಶೌಕತ್‌ ಅಲಿ ಎಸ್‌.ಎಚ್‌.ಎಸ್‌ ವಾದ ಮಂಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ