ಆ್ಯಪ್ನಗರ

ಗ್ರಾಮ ಪಂಚಾಯಿತಿಗೆ ಅವಿರೋಧ ಆಯ್ಕೆ ಮಾಡಿದರೆ ಕ್ರಿಮಿನಲ್‌ ಕೇಸ್‌!

ಹಣ ನೀಡುವುದು, ಹರಾಜು ಮಾಡುವುದು ಸೇರಿ ಇತರೆ ವ್ಯವಹಾರಗಳ ಮೂಲಕ ಚುನಾವಣೆ ಪ್ರಕ್ರಿಯೆ ನಡೆಸದೇ ಸದಸ್ಯ ಸ್ಥಾನಗಳನ್ನು ಆಯ್ಕೆ ಮಾಡಿದಲ್ಲಿ ಅಂತಹವರ ವಿರುದ್ದ ಕ್ರಿಮಿನಲ್‌ ಕೇಸ್‌ ದಾಖಲಿಸುವುದಾಗಿ ಚುನಾವಣಾ ಆಯೋಗ ಎಚ್ಚರಿಸಿದೆ.

ಮಹಾರಾಷ್ಟ್ರ ಟೈಮ್ಸ್ 11 Dec 2020, 12:07 am
ದಾವಣಗೆರೆ: ಹಣ ನೀಡುವುದು, ಹರಾಜು ಮಾಡುವುದು ಸೇರಿ ಇತರೆ ವ್ಯವಹಾರಗಳ ಮೂಲಕ ಚುನಾವಣೆ ಪ್ರಕ್ರಿಯೆ ನಡೆಸದೇ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಅವಿರೋಧವಾಗಿ ಆಯ್ಕೆ ಮಾಡಿದಲ್ಲಿ ಅಂತಹವರ ವಿರುದ್ದ ಕ್ರಿಮಿನಲ್‌ ಕೇಸ್‌ ದಾಖಲಿಸುವುದಾಗಿ ಚುನಾವಣಾ ಆಯೋಗ ಎಚ್ಚರಿಸಿದೆ.
Vijaya Karnataka Web Election
Representative Image


ರಾಜ್ಯದ ಹಲವು ಭಾಗಗಳಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಹರಾಜು ಕೂಗುವ ಮೂಲಕ ಕೊಂಡುಕೊಳ್ಳಲಾಗುತ್ತಿದೆ. ಊರಿಗೆ ಹಣ ನೀಡಿದವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗುತ್ತಿದೆ. ಈ ಕುರಿತು ಜಾಗೃತಗೊಂಡಿರುವ ಚುನಾವಣಾ ಆಯೋಗ ಎಚ್ಚರಿಸಿದೆ.

ಗ್ರಾಮ ಪಂಚಾಯಿತಿ ಸ್ಥಾನಗಳನ್ನು ಹರಾಜು ಮೂಲಕ ಖರೀದಿ ಮಾಡುವ ಇಲ್ಲವೇ ದೇವಾಲಯಕ್ಕೆ ಹಣ ನೀಡಿದಾಗ ಚುನಾವಣೆ ನಡೆಸದೇ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಿದರೆ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು ಎಂದು ಚುನಾವಣಾ ಆಯೋಗ ಎಚ್ಚರಿಸಿದೆ.

ಕುರುಬ ಸಮಾಜಕ್ಕೆ ಎಸ್‌ಟಿ ಮೀಸಲಾತಿಗಾಗಿ ಜ.15ರಿಂದ ಕಾಗಿನೆಲೆ ಶ್ರೀ ಸುದೀರ್ಘ ಪಾದಯಾತ್ರೆ

ಚುನಾವಣಾ ವೇಳಾಪಟ್ಟಿಯಂತೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ದಾವಣಗೆರೆ, ಹೊನ್ನಾಳಿ ಮತ್ತು ಜಗಳೂರು ತಾಲೂಕಲ್ಲಿ ಮೊದಲ ಹಂತ, ಹರಿಹರ, ಚನ್ನಗಿರಿ ಮತ್ತು ನ್ಯಾಮತಿ ತಾಲೂಕಲ್ಲಿ ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ.

ದಾವಣಗೆರೆಯಲ್ಲಿ ಲಾಟರಿ ಮೂಲಕ ಹೂವಿನ ಮಳಿಗೆ ಹಂಚಿಕೆ: ಹೈಕೋರ್ಟ್‌ನಲ್ಲಿ ಅರ್ಜಿ ವಜಾ!

ಹಣ ನೀಡುವುದು, ಹರಾಜು ಮಾಡುವುದು ಸೇರಿ ಇತರೆ ವ್ಯವಹಾರಗಳ ಮೂಲಕ ಚುನಾವಣೆ ಪ್ರಕ್ರಿಯೆ ನಡೆಸದೇ ಸದಸ್ಯ ಸ್ಥಾನಗಳನ್ನು ಆಯ್ಕೆ ಮಾಡಿದಲ್ಲಿಅಂತಹವರ ವಿರುದ್ದ ಕ್ರಿಮಿನಲ್‌ ಕೇಸ್‌ ಹಾಕಲಾಗುವದು. ಈ ರೀತಿ ಆಯ್ಕೆ ನಡೆದಿದ್ದಲ್ಲಿ ಸಾರ್ವಜನಿಕರು ತಹಸೀಲ್ದಾರ್‌ಗೆ ಮಾಹಿತಿ ನೀಡಬಹುದು. ಅವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಡಿಸಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ