ಆ್ಯಪ್ನಗರ

ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ

ಜೆಡಿಎಸ್‌ ಮತ್ತು ಕಾಂಗ್ರೆಸ್‌ನವರಿಗೆ ತಾಕ್ಕತ್ತಿದ್ದರೆ ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆಗೆ ಬನ್ನಿ, 150 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ನನಗೆ ಇದೆ ಎಂದು ವಿಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಸರಕಾರಕ್ಕೆ ಸವಾಲು ಹಾಕಿದರು.

Vijaya Karnataka 4 Jun 2018, 3:05 pm
ದಾವಣಗೆರೆ : ಜೆಡಿಎಸ್‌ ಮತ್ತು ಕಾಂಗ್ರೆಸ್‌ನವರಿಗೆ ತಾಕ್ಕತ್ತಿದ್ದರೆ ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆಗೆ ಬನ್ನಿ, 150 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ನನಗೆ ಇದೆ ಎಂದು ವಿಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಸರಕಾರಕ್ಕೆ ಸವಾಲು ಹಾಕಿದರು.
Vijaya Karnataka Web dissolve the assembly and come to the polls
ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ


ನಗರದ ಎಸ್‌ಎಸ್‌ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಬಿಜೆಪಿಯಿಂದ ಭಾನುವಾರ ಆಯೋಜಿಸಿದ್ದ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದರು.

ಯಾವ ಸಮಯದಲ್ಲಿ ಏನು ಬೇಕಾದರು ಆಗಬಹುದು ಎನ್ನುವ ವಿಚಿತ್ರವಾದ ಪರಿಸ್ಥಿತಿಯಲ್ಲಿ ಈ ಸರಕಾರ ಇರುವುದನ್ನು ಗಮನಿಸುತ್ತಿದ್ದೇವೆ. ಈಗ ಯಾರು ಮಂತ್ರಿಯಾಗಬೇಕು ಎನ್ನುವ ತೀರ್ಮಾನ ಆದ ಮೇಲೆ ಯಾವ ರೀತಿ ಗೊಂದಲ ಸೃಷ್ಟಿಯಾಗಬಹುದು ಎನ್ನುವ ಪರಿಕಲ್ಪನೆ ಮಾಡಿಕೊಳ್ಳಬೇಕಾಗಿದೆ ಎಂದರು.

ದೇಶದಲ್ಲಿ ಆರ್ಥಿಕ ವ್ಯವಸ್ಥೆ ಕುಗ್ಗಿದೆ ಎನ್ನುವವರಿಗೆ ಈಗ ಜಿಡಿಪಿ 7.7ರಷ್ಟು ಬೆಳೆದಿದ್ದು, ಎಲ್ಲರನ್ನು ಬಾಯಿ ಮುಚ್ಚಿಸುವಂತೆ ಮಾಡಿದೆ. ಎಲ್ಲ ದೇಶಕ್ಕಿಂತ ಹೆಚ್ಚು ಜಿಡಿಪಿ ಪಡೆದುಕೊಂಡಿದೆ. ಪ್ರಧಾನಿ ಮೋದಿ ಅಭಿವೃದ್ಧಿ ಕನ್ನಡಿ ಕುರಿತು ಎಲ್ಲರಿಗೂ ತಿಳಿಸಬೇಕು. ಅವರ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಿದೆ. ಮೋದಿ ಸರಕಾರ ಅತ್ಯಂತ ಶ್ರೇಷ್ಠ ಮತ್ತು ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ.ವೈ.ಎ. ನಾರಾಯಣಸ್ವಾಮಿ, ಸಂಸದ ಜಿ.ಎಂ. ಸಿದ್ದೇಶ್ವರ್‌, ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್‌ ಜಾಧವ್‌, ಶಾಸಕ ಎಸ್‌.ಎ. ರವೀಂದ್ರನಾಥ್‌, ಪ್ರೊ.ಲಿಂಗಣ್ಣ, ಮಾಡಾಳ್‌ ವಿರೂಪಾಕ್ಷಪ್ಪ, ಎಂ.ಪಿ. ರೇಣುಕಾಚಾರ್ಯ, ಪ್ರೊ.ನರಸಿಂಹಪ್ಪ, ಜಿಪಂ ಅಧ್ಯಕ್ಷೆ ಮಂಜುಳಾ ಟಿ.ಎಸ್‌. ರಾಜು, ಜಿ.ಎಂ. ಸುರೇಶ್‌, ಬಸವರಾಜ್‌, ಅಣಬೇರು ಜೀವನ್‌ಮೂರ್ತಿ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ