ಆ್ಯಪ್ನಗರ

ಮೆಡಿಕಲ್‌ ಕೋರ್ಸ್‌ ಶುಲ್ಕ ಹೆಚ್ಚಳಕ್ಕೆ ಆಕ್ರೋಶ

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳ ಶುಲ್ಕ ಹೆಚ್ಚಳ ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

Vijaya Karnataka 14 Jul 2018, 5:00 am
ದಾವಣಗೆರೆ : ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳ ಶುಲ್ಕ ಹೆಚ್ಚಳ ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
Vijaya Karnataka Web outrage over the increase in medical course fees
ಮೆಡಿಕಲ್‌ ಕೋರ್ಸ್‌ ಶುಲ್ಕ ಹೆಚ್ಚಳಕ್ಕೆ ಆಕ್ರೋಶ


ಇಲ್ಲಿನ ಜಯದೇವ ವೃತ್ತದಲ್ಲಿ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳು ಸರಕಾರ ವಿರುದ್ಧ ಘೋಷಣೆ ಕೂಗಿ, ನಂತರ ಪ್ರತಿಭಟನಾ ಮೆರವಣಿಗೆ ಮೂಲಕ ಎಸಿ ಕಚೇರಿಗೆ ತೆರಳಿ ಉಪವಿಭಾಗಾಧಿಕಾರಿ ಮುಖೇನಾ ಸರಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಎಬಿವಿಪಿ ಜಿಲ್ಲಾ ಸಂಚಾಲಕ ರಾಮು ವರ್ಣೇಕರ್‌ ಮಾತನಾಡಿ, 2018-19ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಮೂರು ಪಟ್ಟು ಹೆಚ್ಚಿಸಿ, ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ರಂಗದ ಕನಸಿನಿಂದ ದೂರ ಇಡುತ್ತಿರುವ ಸರಕಾರದ ಕ್ರಮವನ್ನು ವಿರೋಧಿಸಿದರು.

ಮೆಡಿಕಲ್‌ ಶೇ.30 ಹೆಚ್ಚಳ:

ಕಳೆದ ವರ್ಷ ಸರಕಾರಿ ಕಾಲೇಜುಗಳಲ್ಲಿ ವೈದ್ಯಕೀಯ ಕೋರ್ಸ್‌ಗಳಿಗೆ 16,700 ರೂ. ಶುಲ್ಕ ಪಡೆಯಲಾಗುತ್ತಿತ್ತು. ಪ್ರಸ್ತುತ 50 ಸಾವಿರ ರೂ. ಶೇ.30ರಷ್ಟು ಏರಿಸಲಾಗಿದೆ. ಖಾಸಗಿ ಕಾಲೇಜುಗಳಲ್ಲಿ ಸರಕಾರಿ ಸೀಟು 77 ಸಾವಿರ ರೂ. ಶುಲ್ಕ ಇದ್ದು, ಇದನ್ನು 97,350 ರೂ.ಗೆ ಶೇ.25ರಷ್ಟು ಹೆಚ್ಚಳ ಮಾಡಲಾಗಿದೆ. ಖಾಸಗಿ ಕಾಲೇಜುಗಳಲ್ಲಿ ಖಾಸಗಿ ಸೀಟುಗಳು 6,32,500 ರೂ. ಶುಲ್ಕ ಪಡೆಯುತ್ತಿದ್ದು, ಈಗ 6,83,100 ರೂ. ಶೇ.8ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.

ದಂತ ವೈದ್ಯಕೀಯ ಶೇ.25:

ಸರಕಾರಿ ದಂತ ವೈದ್ಯಕೀಯ ಕಾಲೇಜುಗಳಲ್ಲಿ ಕಳೆದ ವರ್ಷ 14,400 ರೂ. ಶುಲಲ್ಕಿತ್ತು. ಪ್ರಸ್ತುತ 40 ಸಾವಿರ ರೂ. ಶೇ.25ರಷ್ಟು ಏರಿಕೆಯಾಗಿದೆ. ಖಾಸಗಿ ಕಾಲೇಜಿನ ಸರಕಾರಿ ಸೀಟು 49,500 ರೂ. ಶುಲ್ಕ ಈ ಬಾರಿ 63,030 ರೂ. ಶೇ.27ರಷ್ಟು ಹೆಚ್ಚಳವಾಗಿದೆ. ಖಾಸಗಿ ಕಾಲೇಜಿನಲ್ಲಿ ಖಾಸಗಿ ಸೀಟು 4,29,000 ಶುಲ್ಕ 4,63,320 ರೂ. ಶೇ.8ರಷ್ಟು ಹೆಚ್ಚಳ ಮಾಡಿರುವುದನ್ನು ವಿರೋಧ ವ್ಯಕ್ತಪಡಿಸಿದರು.

ಈ ರೀತಿ ಒಂದೇ ಬಾರಿಗೆ ಶುಲ್ಕ ಏರಿಸುವುದರಿಂದ ಉನ್ನತ ಶಿಕ್ಷಣ ಕೇವಲ ಶ್ರೀಮಂತರ ಸ್ವತ್ತು ಎಂದು ಸರಕಾರ ಸಾರಿದಂತಿದೆ. ಖಾಸಗಿ ಕಾಲೇಜುಗಳ ಓಲೈಕೆಗೆ ಸರಕಾರ ವಾಲಿದಂತೆ ಕಾಣುತ್ತಿದೆ. ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಕನಸಾಗಲಿದೆ. ಸರಕಾರ ಈ ನಿರ್ಧಾರವನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಗಗನ್‌, ಕೊಟ್ರೇಶ್‌, ಹರ್ಷ, ಶರತ್‌, ವಿವೇಕ್‌, ಸುಹಾಸ್‌ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ