ಆ್ಯಪ್ನಗರ

ಇದು ಅತ್ಯಂತ ದರಿದ್ರ ಸರಕಾರ: ಸಿದ್ದರಾಮಯ್ಯ ಆಕ್ರೋಶ

“ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಲ್ಯಾಪ್‌ಟಾಪ್ ನಿಲ್ಲಿಸಬಾರದು. ಸರಕಾರಕ್ಕೆ ಬಡ ಮಕ್ಕಳ ಮೇಲೆ ಕಾಳಜಿ ಇದ್ದರೆ ಲ್ಯಾಪ್‌ಟಾಪ್ ಕೊಡಬೇಕು,” ಎಂದು ಸಿದ್ದರಾಮಯ್ಯ ಹೇಳಿದರು.

Vijaya Karnataka 9 Feb 2020, 3:27 pm
ದಾವಣಗೆರೆ: ‘ನಮ್ಮ ಸರಕಾರದಲ್ಲಿ ಒಂದೂ ಚೆಕ್ ಬೌನ್ಸ್ ಆಗಿರಲಿಲ್ಲ. ಇದು ಅತ್ಯಂತ ದರಿದ್ರ ಸರಕಾರ. ನಮ್ಮ ಸರಕಾರ ಇದ್ದಾಗ ಹಣ ಇತ್ತು. ಈಗ ಇಲ್ಲ ಅಂದರೆ ಏನರ್ಥ?' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Vijaya Karnataka Web Siddaramaiah


ದಾವಣಗೆರೆಯ ಹರಿಹರ ತಾಲೂಕಿನ ರಾಜನಹಳ್ಳಿ ಶ್ರೀ ಕ್ಷೇತ್ರದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಆರ್ಥಿಕ ಕೊರತೆ ಎದುರಿಸುತ್ತಿರುವ ಕರ್ನಾಟಕ ಸರಕಾರ ಪದವಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಲ್ಯಾಪ್‌ಟಾಪ್‌ನ್ನು ನಿಲ್ಲಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, “ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಲ್ಯಾಪ್‌ಟಾಪ್ ನಿಲ್ಲಿಸಬಾರದು. ಸರಕಾರಕ್ಕೆ ಬಡ ಮಕ್ಕಳ ಮೇಲೆ ಕಾಳಜಿ ಇದ್ದರೆ ಲ್ಯಾಪ್‌ಟಾಪ್ ಕೊಡಬೇಕು,” ಎಂದರು.

ಇನ್ನು ಕೆಪಿಸಿಸಿಗೆ ಅಧ್ಯಕ್ಷರನ್ನು ಹೈಕಮಾಂಡ್ ಶೀಘ್ರವೇ ನಿರ್ಧರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದೇ ವೇಳೆ ಬಿಸಿ ಪಾಟೀಲ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, “ಬಿಸಿ ಪಾಟೀಲ್ ಏನು ಓದಿದ್ದಾನೆ ಯಾರಿಗೆ ಗೊತ್ತಿದೆ? ಅವರಿಗೆ ಕಾನೂನು ಗೊತ್ತೇ ಇಲ್ಲ,” ಎಂದು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ