ಪಲ್ಲಾಗಟ್ಟೆ: ಶಂಕಿತ ಡೆಂಗೆ ಜ್ವರಕ್ಕೆ ಒಂಬತ್ತು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಜಗಳೂರು ತಾಲೂಕಿನ ಪಲ್ಲಾಗಟ್ಟೆ ವ್ಯಾಪ್ತಿಯ ಗೋಡೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ತೇಜು (9) ಮೃತ ಬಾಲಕಿ. ಮೊದಲು ಸಣ್ಣ ಜ್ವರವೆಂದು ತಾಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಜ್ವರದ ತೀವ್ರತೆ ಹೆಚ್ಚಿದ್ದರಿಂದ ಪೋಷಕರು ಎರಡು ದಿನಗಳ ಹಿಂದೆ ದಾವಣಗೆರೆ ಬಾಪೂಜಿ ಆಸ್ಪತ್ರೆಗೆ ದಾಖಲಿಸಿ, ಬಾಲಕಿಗೆ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ತೇಜು ಬುಧವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.