ಆ್ಯಪ್ನಗರ

ಧಾರವಾಡದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ!

ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ಪರೀಕ್ಷಾ ಕೇಂದ್ರಗಳ ಸುತ್ತ ಮುಂಜಾಗ್ರತಾ ಕ್ರಮವಾಗಿ ಕಲಂ 144 ಜಾರಿಗೊಳಿಸಿ, 200 ಮೀ. ಪ್ರದೇಶವನ್ನು ನಿರ್ಬಂಧಿತ ವಲಯ ಎಂದು ಧಾರವಾಡ ಪೊಲೀಸ್‌ ಆಯುಕ್ತ ಆರ್‌.ದಿಲೀಪ್‌ ಆದೇಶ ಹೊರಡಿಸಿದ್ದಾರೆ.

Vijaya Karnataka Web 16 Jun 2020, 7:43 pm
ಧಾರವಾಡ: ಹುಬ್ಬಳ್ಳಿ- ಧಾರವಾಡ ನಗರದ 46 ಪರೀಕ್ಷಾ ಕೇಂದ್ರಗಳಲ್ಲಿ ಜೂ.25ರಿಂದ ಜು.4ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಯ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷಾ ಕೇಂದ್ರಗಳ ಸುತ್ತ ಮುಂಜಾಗ್ರತಾ ಕ್ರಮವಾಗಿ ಕಲಂ 144 ಜಾರಿಗೊಳಿಸಿ ಕೇಂದ್ರದ ಸುತ್ತಲೂ 200 ಮೀ. ಪ್ರದೇಶವನ್ನು ನಿರ್ಬಂಧಿತ ವಲಯ ಎಂದು ಪೊಲೀಸ್‌ ಆಯುಕ್ತ ಆರ್‌.ದಿಲೀಪ್‌ ಆದೇಶ ಹೊರಡಿಸಿದ್ದಾರೆ.
Vijaya Karnataka Web school


ಜೊತೆಗೆ ಪರೀಕ್ಷಾ ಕೇಂದ್ರಗಳ ಸಮೀಪವಿರುವ ಝೆರಾಕ್ಸ್‌ ಮತ್ತು ಕಂಪ್ಯೂಟರ್‌ ಸೆಂಟರ್‌, ಅಂಗಡಿಗಳು ಪರೀಕ್ಷಾ ಸಮಯದಲ್ಲಿ ಕಾರ್ಯನಿರ್ವಹಿಸದಂತೆ ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. ಈ ಆಜ್ಞೆ ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಠಾಣಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕೊರೊನಾ ನೆಪದಲ್ಲಿ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಅವಕಾಶ ನೀಡದಿರಿ: ಸಿದ್ದರಾಮಯ್ಯ ಕಳಕಳಿ

ಪಿಯು ಪರೀಕ್ಷೆ ಕೇಂದ್ರಗಳು ನಿರ್ಬಂಧಿತ ಪ್ರದೇಶ!

ಧಾರವಾಡ: ಜೂ.18ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆಯು ಹುಬ್ಬಳ್ಳಿ-ಧಾರವಾಡ ನಗರದ 29 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಲು, ಪರೀಕ್ಷೆಗಳು ಸುಗಮವಾಗಿ ನಡೆಸುವ ಹಿತದೃಷ್ಟಿಯಿಂದ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ.

ರಾಜ್ಯದ ಮೀನುಗಾರರಿಗೆ ₹4ಸಾವಿರ ಕೋಟಿ ವಿಶೇಷ ಪ್ಯಾಕೇಜ್‌: ಕೋಟಾ ಶ್ರೀನಿವಾಸ ಪೂಜಾರಿ

ಜೊತೆಗೆ ಪರೀಕ್ಷಾ ಕೇಂದ್ರಗಳ ಸಮೀಪದ ಝೆರಾಕ್ಸ್‌ ಮತ್ತು ಕಂಪ್ಯೂಟರ್‌ ಸೆಂಟರ್‌ಗಳನ್ನು ಪರೀಕ್ಷೆಯ ಸಮಯದಲ್ಲಿ ಕಾರ್ಯನಿರ್ವಹಿಸದಂತೆ ನಿಷೇಧಿಸಿ, ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಮತ್ತು ನಗರ ಪೊಲೀಸ್‌ ಕಮೀಷನರ್‌ ಆರ್‌.ದಿಲೀಪ್‌ ಅವರು ಆದೇಶ ಹೊರಡಿಸಿದ್ದಾರೆ.

ಆಜ್ಞೆ ಉಲ್ಲಂಘಿಸುವವರ ವಿರುದ್ಧ ಕಲಂ 188 ಭಾರತೀಯ ದಂಡ ಸಂಹಿತೆಯ ಪ್ರಕಾರ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಠಾಣಾಧಿಕಾರಿಗೆ ಅನುಮತಿ ನೀಡಲಾಗಿದೆ ಎಂದು ಪೊಲೀಸ್‌ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ