ಆ್ಯಪ್ನಗರ

ಹುಬ್ಬಳ್ಳಿ: ಹೋಮ್ ಕ್ವಾರಂಟೈನ್‌ಗೆ ಒಳಗಾದ ಐವರು ಮಾಧ್ಯಮ ಪ್ರತಿನಿಧಿಗಳು

ವಿವಿಧ ಮಾಧ್ಯಮ ಸಂಸ್ಥೆಗಳಿಗೆ ಸೇರಿದ ಐವರು ಮಾಧ್ಯಮ ಪ್ರತಿನಿಧಿಗಳು ತಮ್ಮಲ್ಲಿ ಕೊರೊನಾದ ಯಾವುದೇ ಲಕ್ಷಣಗಳಿಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಣೆಯಿಂದ ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

Vijaya Karnataka Web 20 Apr 2020, 6:48 pm
ಹುಬ್ಬಳ್ಳಿ: ಐವರು ಮಾಧ್ಯಮ ಪ್ರತಿನಿಧಿಗಳು ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಣೆಯಿಂದ ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
Vijaya Karnataka Web ಕ್ವಾರಂಟೈನ್‌
ಕ್ವಾರಂಟೈನ್‌


ನಗರದ ವಿವಿಧ ಮಾಧ್ಯಮ ಸಂಸ್ಥೆಗಳಿಗೆ ಸೇರಿದ ಐವರು ಮಾಧ್ಯಮ ಪ್ರತಿನಿಧಿಗಳು ತಮ್ಮಲ್ಲಿ ಕೊರೊನಾದ ಯಾವುದೇ ಲಕ್ಷಣಗಳಿಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಣೆಯಿಂದ ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಏ.9 ರಂದು ಶಬ್ ಎ ಬರಾತ್ ಆಚರಣೆಯ ಕುರಿತು ವರದಿಗಾಗಿ ಅವರು ಹುಬ್ಬಳ್ಳಿಯ ತೊರವಿಹಕ್ಕಲದ ಖಬರಸ್ತಾನಕ್ಕೆ ತೆರಳಿದ್ದರು. ಸ್ಮಶಾನದ ಕಾವಲುಗಾರನಿಗೆ (ಪಿ- 363) ಕೊರೊನಾ ಸೋಂಕು ಇರುವುದು ಏ.18 ರಂದು ದೃಢಪಟ್ಟ ಹಿನ್ನೆಲೆಯಲ್ಲಿ ಈ ಎಲ್ಲಾ ಐವರು ಪ್ರತಿನಿಧಿಗಳನ್ನು ದ್ವಿತೀಯ ಹಂತದ ಸಂಪರ್ಕಿತರು ಎಂದು ಪರಿಗಣಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಇವರು ಹೋಮ್ ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ. ಈ ಐದೂ ಜನ ಮಾಧ್ಯಮ ಪ್ರತಿನಿಧಿಗಳ ಆರೋಗ್ಯ ಸ್ಥಿರವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ