ಆ್ಯಪ್ನಗರ

ಕುಂದಗೋಳ ತಾಲೂಕಿನ 11 ದೇಗುಲಕ್ಕೆ 55 ಲಕ್ಷ

ಹುಬ್ಬಳ್ಳಿ : ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮುಜರಾಯಿ ಇಲಾಖೆಗೆ ಒಳಪಡುವ ಧಾರವಾಡ ಲೋಕಸಭಾ ವ್ಯಾಪ್ತಿಯ ಕುಂದಗೋಳ ತಾಲೂಕಿನ ವಿವಿಧ ದೇವಸ್ಥಾನಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ರಾಜ್ಯದ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯವರು ಒತ್ತಾಯಿಸಿ ಈ ಹಿಂದೆ ಪತ್ರ ಬರೆದಿದ್ದರು.

Vijaya Karnataka 16 Mar 2020, 5:00 am
ಹುಬ್ಬಳ್ಳಿ : ಆರ್ಥಿಕವಾಗಿ ಸಂಕಷ್ಟದಲ್ಲಿರುವ ಮುಜರಾಯಿ ಇಲಾಖೆಗೆ ಒಳಪಡುವ ಧಾರವಾಡ ಲೋಕಸಭಾ ವ್ಯಾಪ್ತಿಯ ಕುಂದಗೋಳ ತಾಲೂಕಿನ ವಿವಿಧ ದೇವಸ್ಥಾನಗಳಿಗೆ ಅನುದಾನ ಬಿಡುಗಡೆ ಮಾಡುವಂತೆ ರಾಜ್ಯದ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿಯವರು ಒತ್ತಾಯಿಸಿ ಈ ಹಿಂದೆ ಪತ್ರ ಬರೆದಿದ್ದರು.
Vijaya Karnataka Web 55 lakhs for 11 shrines of kundagola taluk
ಕುಂದಗೋಳ ತಾಲೂಕಿನ 11 ದೇಗುಲಕ್ಕೆ 55 ಲಕ್ಷ


ಇದರ ಅನ್ವಯ ಕುಂದಗೋಳ ತಾಲೂಕಿನ 11 ದೇವಸ್ಥಾನಗಳಿಗೆ 55 ಲಕ್ಷ ರೂ. ಅನುದಾನವನ್ನು ಮುಜರಾಯಿ ಇಲಾಖೆ ಬಿಡುಗಡೆ ಮಾಡಿದೆ.

ಕುಂದಗೋಳ ತಾಲೂಕಿನ ಮತ್ತಿಗಟ್ಟಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ 5 ಲಕ್ಷ ರೂ., ಹಿರೇಹರಕುಣಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ 5 ಲಕ್ಷ ರೂ., ಹೊಸಕಟ್ಟಿ ಗ್ರಾಮದ ಶ್ರೀ ಹನುಮಂತ ದೇವಸ್ಥಾನಕ್ಕೆ 5 ಲಕ್ಷ ರೂ., ಚಾಕಲಬ್ಬಿ ಗ್ರಾಮದ ಶ್ರೀ ಯಲ್ಲಮ್ಮ ದೇವಸ್ಥಾನಕ್ಕೆ 5 ಲಕ್ಷ ರೂ., ಗುರುವಿನ ಹಳ್ಳಿ ಗ್ರಾಮದ ಶ್ರೀ ಫಕ್ಕೀರೇಶ್ವರ ಮಠಕ್ಕೆ 5 ಲಕ್ಷ ರೂ., ಕುಂದಗೋಳ ನಗರದ ಶ್ರೀ ಮೈಲಾರ ಲಿಂಗೇಶ್ವರ ದೇವಸ್ಥಾನಕ್ಕೆ 5 ಲಕ್ಷ ರೂ., ಛಬ್ಬಿ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನಕ್ಕೆ 5 ಲಕ್ಷ ರೂ., ಹಿರೇಗುಂಜಳ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ 5 ಲಕ್ಷ ರೂ., ರಾಯನಾಳ ಗ್ರಾಮದ ಶ್ರೀ ರೇವಣಸಿದ್ದೇಶ್ವರ ವಿರಕ್ತಮಠಕ್ಕೆ 5 ಲಕ್ಷ ರೂ., ಕಳಸ ಗ್ರಾಮದ ಗ್ರಾಮದೇವತೆ ದೇವಸ್ಥಾನಕ್ಕೆ ರೂ. 5ಲಕ್ಷ, ಸೇರಿದಂತೆ ಅರಳಿಕಟ್ಟಿ ಗ್ರಾಮದ ಗ್ರಾಮದೇವಿ ದೇವಸ್ಥಾನಕ್ಕೆ 5 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ. ಜನರ ನಂಬಿಕೆ ಹಾಗೂ ಭಾವನೆಗಳನ್ನು ಗೌರವಿಸುವ ನಿಟ್ಟಿನಲ್ಲಿಈ ಅನುದಾನ ಬಿಡುಗಡೆಯಾಗಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೂ ಮತಕ್ಷೇತ್ರದ ಜನರ ಪರವಾಗಿ ಸಚಿವ ಪ್ರಹ್ಲಾದ್‌ ಜೋಶಿಯವರು ಅಭಿನಂದನೆ ಸಲ್ಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ