ಆ್ಯಪ್ನಗರ

ಹುಬ್ಬಳ್ಳಿ-ಧಾರವಾಡ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ, ವ್ಯಕ್ತಿಯ ಯಕೃತ್ ಬೆಂಗಳೂರಿಗೆ ರವಾನೆ

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ 30 ವರ್ಷದ ವ್ಯಕ್ತಿಯ ಯಕೃತ್‌ ಅನ್ನು ಬೆಂಗಳೂರಿಗೆ ರವಾನಿಸಲಾಗಿದೆ. ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಿಂದ ವಿಮಾನ ನಿಲ್ದಾಣದವರೆಗೆ ಹಸಿರು ಪಥ (ಝೀರೋ ಟ್ರಾಫಿಕ್‌) ದಲ್ಲಿ ಕೊಂಡೊಯ್ದು ಬೆಂಗಳೂರಿಗೆ ರವಾನಿಸಲಾಗಿದೆ. ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಗಾಯಗೊಂಡ ಪ್ರಕಾಶ ಲಂಬಾಣಿ ಅವರಿಗೆ ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಮೆದುಳು ನಿಷ್ಕ್ರಿಯವಾಗಿದ್ದರೂ ಯಕೃತ್ ಮತ್ತು ಕಿಡ್ನಿ ಕಾರ್ಯ ನಿರ್ವಹಿಸುತ್ತಿತ್ತು. ಅಂಗಾಂಗ ದಾನದ ಕುರಿತು ಕಿಮ್ಸ್ ವೈದ್ಯರ ತಂಡ ಅವರ ಕುಟುಂಬದವರೊಂದಿಗೆ ತಿಳಿಸಿ ಜಾಗೃತಿ ಮೂಡಿಸಿ ಒಪ್ಪಿಸಿದ್ದರು.

Lipi 18 Aug 2022, 11:03 am
ಹುಬ್ಬಳ್ಳಿ-ಧಾರವಾಡ: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ 30 ವರ್ಷದ ವ್ಯಕ್ತಿಯ ಯಕೃತ್‌ ಅನ್ನು ಬೆಂಗಳೂರಿಗೆ ರವಾನಿಸಲಾಗಿದೆ.
Vijaya Karnataka Web Organ donation


ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಿಂದ ವಿಮಾನ ನಿಲ್ದಾಣದವರೆಗೆ ಹಸಿರು ಪಥ (ಝೀರೋ ಟ್ರಾಫಿಕ್‌) ದಲ್ಲಿ ಕೊಂಡೊಯ್ದು ಬೆಂಗಳೂರಿಗೆ ರವಾನಿಸಲಾಗಿದೆ. ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರ ಗಾಯಗೊಂಡ ಪ್ರಕಾಶ ಲಂಬಾಣಿ ಅವರಿಗೆ ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರ ಮೆದುಳು ನಿಷ್ಕ್ರಿಯವಾಗಿದ್ದರೂ ಯಕೃತ್ ಮತ್ತು ಕಿಡ್ನಿ ಕಾರ್ಯ ನಿರ್ವಹಿಸುತ್ತಿತ್ತು. ಅಂಗಾಂಗ ದಾನದ ಕುರಿತು ಕಿಮ್ಸ್ ವೈದ್ಯರ ತಂಡ ಅವರ ಕುಟುಂಬದವರೊಂದಿಗೆ ತಿಳಿಸಿ ಜಾಗೃತಿ ಮೂಡಿಸಿ ಒಪ್ಪಿಸಿದ್ದರು.

World Organ Donation Day; ಅಂಗಾಂಗ ದಾನಕ್ಕೆ ಹೆಚ್ಚಿದ ಬೇಡಿಕೆ, ರೋಗಿಗಳ ಸಂಖ್ಯೆಯೂ ಏರಿಕೆ!
ಅಷ್ಟೇ ಅಲ್ಲದೆ ಬೆಂಗಳೂರಿನ ಜೆ.ಪಿ. ನಗರದ ಆಸ್ಟರ್ ಆರ್.ವಿ. ಆಸ್ಪತ್ರೆಯಲ್ಲಿನ ರೋಗಿಯೊಬ್ಬರಿಗೆ ಯಕೃತ್ ಕಸಿ ಅಗತ್ಯವಿದ್ದ ಕಾರಣ, ಅಲ್ಲಿಯ ವೈದ್ಯರ ತಂಡ ಆಗಮಿಸಿ ಯಕೃತ್ ಅನ್ನು ತೆಗೆದಿದ್ದಾರೆ. ನಮ್ಮಲ್ಲಿಯೇ ದಾಖಲಾದ 39 ವರ್ಷದ ವ್ಯಕ್ತಿಗೆ ಅವರ ಕಿಡ್ನಿ ತೆಗೆದು ಕಸಿ ಮಾಡಲಾಗಿದೆ. ಮೆದುಳು ನಿಷ್ಕ್ರಿಯಗೊಂಡ ವ್ಯಕ್ತಿಯ ಅಂಗಾಂಗ ತೆಗೆದಿರುವ ಕಾರ್ಯ ಉತ್ತರ ಕರ್ನಾಟಕ ಭಾಗದ ಸರ್ಕಾರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿಯೇ ಇದು ಮೊದಲನೆಯದಾಗಿದೆ. ಆ ಮೂಲಕ ಕಿಮ್ಸ್ ಹೊಸ ಇತಿಹಾಸ ನಿರ್ಮಿಸಿದೆ ಎಂದು ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.

ಇನ್ನು ವೈದ್ಯರ ಕೋರಿಕೆ ಮೇರೆಗೆ ಕಿಮ್ಸ್ ಆಸ್ಪತ್ರೆಯಿಂದ ವಿಮಾನ ನಿಲ್ದಾಣದವರೆಗೆ 6.5 ಕಿ.ಮೀ ಮಾರ್ಗವನ್ನು ಝೀರೊ ಟ್ರಾಫಿಕ್ ಮಾಡಲಾಗಿತ್ತು. ಯಕೃತ್ ಹಾಗೂ ಬೆಂಗಳೂರಿನ ವೈದ್ಯರಿದ್ದ ಆ್ಯಂಬುಲೆನ್ಸ್ ಕೇವಲ ಎರಡು ನಿಮಿಷಗಳಲ್ಲಿ ವಿಮಾನ ನಿಲ್ದಾಣ ತಲುಪಿದೆ. ಅಲ್ಲಿಂದ ಸ್ಟಾರ್ ಏರ್ ವಿಮಾನದ ಮೂಲಕ ಬೆಂಗಳೂರಿಗೆ ಕೊಂಡೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ