ಆ್ಯಪ್ನಗರ

ಸಂತ್ರಸ್ತೆ ಕುಂಟುಂಬಕ್ಕೆ ಪರಿಹಾರ ನೀಡಲು ಆಗ್ರಹಿಸಿ ಮನವಿ

ಹುಬ್ಬಳ್ಳಿ : ವಿಜಯಪುರ ಜಿಲ್ಲೆದೇವರಹಿಪ್ಪರಗಿ ತಾಲೂಕಿನ ಅಸಂತಾಪುರ ಗ್ರಾಮದ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ವಿಮೋಚನೆ ಸಮಿತಿ ವತಿಯಿಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ನಗರದಲ್ಲಿಮನವಿ ಸಲ್ಲಿಸಲಾಯಿತು.

Vijaya Karnataka 30 Sep 2019, 5:00 am
ಹುಬ್ಬಳ್ಳಿ : ವಿಜಯಪುರ ಜಿಲ್ಲೆದೇವರಹಿಪ್ಪರಗಿ ತಾಲೂಕಿನ ಅಸಂತಾಪುರ ಗ್ರಾಮದ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ವಿಮೋಚನೆ ಸಮಿತಿ ವತಿಯಿಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ನಗರದಲ್ಲಿಮನವಿ ಸಲ್ಲಿಸಲಾಯಿತು.
Vijaya Karnataka Web 29VIJAY-4054049
ದಲಿತ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ವಿಮೋಚನೆ ಸಮಿತಿಯಿಂದ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಭಾನುವಾರ ಸಲ್ಲಿಸಲಾಯಿತು.

ಸೆ.19ರಂದು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಅಪರಾಧಿಯನ್ನು ಕೂಡಲೇ ಪತ್ತೆ ಮಾಡುವ ಮೂಲಕ ಕಠಿಣ ಶಿಕ್ಷೆ ವಿಧಿಸಬೇಕು. ಮೃತಳ ಕುಟುಂಬಕ್ಕೆ ರಾಜ್ಯ ಸರಕಾರ ಕೂಡಲೇ 20 ಲಕ್ಷ ಧನ ಸಹಾಯ, 4 ಎಕರೆ ಜಮೀನು ಹಾಗೂ ಅವರ ಕುಟುಂಬದ ಒಬ್ಬರಿಗೆ ಸರಕಾರಿ ನೌಕರಿ ನೀಡಬೇಕು ಎಂದು ಮನವಿಯಲ್ಲಿತಿಳಿಸಲಾಗಿದೆ.

ಸುರೇಶ ಖಾನಾಪೂರ, ಕೆಂಚಪ್ಪ ಮಲ್ಲಮ್ಮನವರ, ಬಸಪ್ಪ ಶಿವಣ್ಣನವರ, ವೀರಾಪೂರ, ರೇವಣಸಿದ್ದಪ್ಪ ಗುತ್ತಲ ಸೇರಿದಂತೆ ಅನೇಕರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ