ಆ್ಯಪ್ನಗರ

‘ದೊರೆಸ್ವಾಮಿ ಮಾತಿನಲ್ಲಿ ಹಿಡಿತವಿರಲಿ’ ಪ್ರಹ್ಲಾದ್ ಜೋಶಿ ಕಿಡಿ

ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌ ದೊರೆಸ್ವಾಮಿ ಮಾತಿನಲ್ಲಿ ಹಿಡಿತವಿರಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದ್ದಾರೆ. ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ವಿನಾಯಕ್ ದಾಮೋದರ್ ಸಾವರ್ಕರ್ ಕುರಿತಾಗಿ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದಿದ್ದಾರೆ.

Vijaya Karnataka Web 1 Mar 2020, 2:46 pm
ಹುಬ್ಬಳ್ಳಿ: ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್‌ ದೊರೆಸ್ವಾಮಿ ಮಾತಿನಲ್ಲಿ ಹಿಡಿತವಿರಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಾವರ್ಕರ್ ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು.
Vijaya Karnataka Web bjp central minister pralhad joshi on hs doreswamy
‘ದೊರೆಸ್ವಾಮಿ ಮಾತಿನಲ್ಲಿ ಹಿಡಿತವಿರಲಿ’ ಪ್ರಹ್ಲಾದ್ ಜೋಶಿ ಕಿಡಿ


ಸಾವರ್ಕರ್‌ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರು. ಬ್ರಿಟಿಷರ ವಿರುದ್ಧ ಹೋರಾಡಿ ಜೈಲಿನಲ್ಲಿ ಬಂಧಿಯಾಗಿದ್ದವರು. ಇಂತಹ ದೇಶಭಕ್ತರ ಬಗ್ಗೆ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ದೊರೆಸ್ವಾಮಿ ಪಾಕಿಸ್ತಾನದ ಏಜೆಂಟ್‌! ಯತ್ನಾಳ್ ವಿವಾದಾತ್ಮಕ ಹೇಳಿಕೆ

ಪ್ರಧಾನಿ ನರೇಂದ್ರ ಮೋದಿ ಹಾಗೂ ಸಾವರ್ಕರ್ ಬಗ್ಗೆ ದೊರೆಸ್ವಾಮಿಯವರಿಗೆ ವೈಯಕ್ತಿಕ ಭಿನ್ನಾಭಿಪ್ರಾಯ ಇರಬಹುದು. ಆದರೆ ಅವರ ಕುರಿತಾಗಿ ಕೀಳು ಭಾಷೆಯಲ್ಲಿ ಮಾತನಾಡುವುದು ಸರಿಯಲ್ಲ, ಇನ್ಮುಂದೆಯಾದರೂ ದೊರೆಸ್ವಾಮಿ ಮಾತಿನಲ್ಲಿ ಹಿಡಿತವಿರಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾವರ್ಕರ್ ಕುರಿತಾಗಿ ದೊರೆಸ್ವಾಮಿ ಆಡಿದ ಮಾತು ಖಂಡನೀಯ. ನೀವು ಯಾವ ಭಾಷೆಯಲ್ಲಿ ಮಾತನಾಡುತ್ತೀರಿ ಅದೇ ಭಾಷೆಯಲ್ಲಿ ಉತ್ತರ ಕೊಡಲು ಕೆಲವರು ತಯಾರಾಗುತ್ತಾರೆ ಎಂದು ಎಚ್ಚರಿಸಿದರು.

ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌ ದೊರೆಸ್ವಾಮಿ ಪಾಕಿಸ್ತಾನದ ಏಜೆಂಟ್‌ ಹಾಗೂ ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಶಾಸಕರ ಈ ಹೇಳಿಕೆಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆಯನ್ನು ನಡೆಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ