ಆ್ಯಪ್ನಗರ

ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಕುಂದಗೋಳ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಹಣದ ವ್ಯವಹಾರ ನಡೆಯುತ್ತಿದೆ ಮುಖ್ಯವಾಗಿ ಜಲಸಂಪನ್ಮೂಲ ಸಚಿವ ಡಿಕೆ...

Vijaya Karnataka 15 May 2019, 5:00 am
ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಿಂದ ಹಣದ ವ್ಯವಹಾರ ನಡೆಯುತ್ತಿದೆ. ಮುಖ್ಯವಾಗಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ವಾಸ್ತವ್ಯ ಹೂಡಿರುವ ನಗರದ ಗೋಕುಲ ರಸ್ತೆಯ ಎರಡು ಹೋಟೆಲ್‌ಗಳಲ್ಲಿ ಈ ವ್ಯವಹಾರ ನಡೆಸುತ್ತಿದ್ದಾರೆ. ಇದು ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಚುನಾವಣೆ ಆಯೋಗ ಮಧ್ಯ ಪ್ರವೇಶಿಸಿ ತಕ್ಷಣ ಕ್ರಮಕೈಗೊಳ್ಳಬೇಕೆಂದು ಬಿಜೆಪಿ ಒತ್ತಾಯಿಸಿದೆ.
Vijaya Karnataka Web bjp complains to election commission against dk shivkumar
ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು


ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರಿಗೆ ಬಿಜೆಪಿ ಮುಖಂಡರು ದೂರು ನೀಡಿದ್ದು, ಡಿ.ಕೆ. ಶಿವಕುಮಾರ ವಿವಿಧ ಸಮುದಾಯದ ಮುಖಂಡರನ್ನು ಹೋಟೆಲ್‌ಗಳಿಗೆ ಕರೆಸಿಕೊಂಡು ಹಣ ಹಂಚುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಪೊಲೀಸರು ಮತ್ತು ಕೆಲವು ಅಧಿಕಾರಿಗಳು ಪರೋಕ್ಷವಾಗಿ ಈ ಕೆಲಸದಲ್ಲಿ ಕೈ ಜೋಡಿಸಿದ್ದಾರೆ. ಆಯೋಗವು ಕೂಲಂಕಷ ತನಿಖೆ ನಡೆಸಿ ಹಣ ಹಂಚಿಕೆ ನಿರ್ಬಂಧಿಸಬೇಕೆಂದು ಎಂಎಲ್‌ಸಿ ಅರುಣ ಶಹಾಪುರ ನೇತೃತ್ವದ ಬಿಜೆಪಿ ಮುಖಂಡರ ನಿಯೋಗ ಆಗ್ರಹಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ