ಆ್ಯಪ್ನಗರ

ಶಾಸಕರ ರಾಜೀನಾಮೆಯಲ್ಲಿ ಬಿಜೆಪಿ ಪಾತ್ರವಿಲ್ಲ: ಕೇಂದ್ರ ಸಚಿವ ಜೋಶಿ

ಹುಬ್ಬಳ್ಳಿ : ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ರಾಜೀನಾಮೆ ಪ್ರಕರಣದಲ್ಲಿ ಬಿಜೆಪಿಯ ಯಾವುದೇ ಪಾತ್ರವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟಪಡಿಸಿದ್ದಾರೆ.

Vijaya Karnataka 8 Jul 2019, 5:00 am
ಹುಬ್ಬಳ್ಳಿ : ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕರು ರಾಜೀನಾಮೆ ಪ್ರಕರಣದಲ್ಲಿ ಬಿಜೆಪಿಯ ಯಾವುದೇ ಪಾತ್ರವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸ್ಪಷ್ಟಪಡಿಸಿದ್ದಾರೆ.
Vijaya Karnataka Web pralhad joshi


ಸುದ್ದಿಗಾರರೊಂದಿಗೆ ಭಾನುವಾರ ಮಾತನಾಡಿದ ಅವರು, ''ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಕಾಂಗ್ರೆಸ್‌ನ ಒಂದು ಗುಂಪು ಕೆಲಸ ಮಾಡುತ್ತಿದೆ. ಇನ್ನೊಂದು ಗುಂಪು ಸಿದ್ದರಾಮಯ್ಯ ವಿರುದ್ಧ ಬಂಡೆದ್ದಿದೆ. ಇದು ಸಿದ್ದರಾಮಯ್ಯ ಆಟ ಎಂದು ಖರ್ಗೆಯವರಿಗೂ ಗೊತ್ತಿದೆ. ಈ ಕಾರಣದಿಂದ ರಾಜ್ಯದಲ್ಲಿ ರಾಜೀನಾಮೆ ಹೈಡ್ರಾಮಾ ನಡೆಯುತ್ತಿದೆ'' ಎಂದು ಆರೋಪಿಸಿದರು.

''ಅತೃಪ್ತ ಶಾಸಕರಿಗೆ ಬಿಜೆಪಿಯಿಂದ ವಿಮಾನ ವ್ಯವಸ್ಥೆ ಮಾಡಿಲ್ಲ. ರಾಜೀನಾಮೆ ಕೊಟ್ಟ ಶಾಸಕರಲ್ಲಿ ಹಲವರು ಸ್ವಂತ ವಿಮಾನ ಖರೀದಿಸುವ ಸಾಮರ್ಥ್ಯ‌ ಹೊಂದಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಒಂದು ವೇಳೆ ಮೈತ್ರಿ ಸರಕಾರ ಕುಸಿದರೆ ಮಧ್ಯಂತರ ಚುನಾವಣೆ ನಡೆಯಲು ಬಿಜೆಪಿ ಬಿಡುವುದಿಲ್ಲ. ನಾವೇ ಬಹುಮತ ಸಾಬೀತುಪಡಿಸಿ ಸರಕಾರ ರಚನೆ ಮಾಡುತ್ತೇವೆ'' ಎಂದರು.

''ರಾಹುಲ್‌ ಗಾಂಧಿ ಯಾವ ದೇಶಕ್ಕೆ ಹೋಗಿದ್ದಾರೆ, ಏತಕ್ಕಾಗಿ ಹೋಗಿದ್ದಾರೆ ಎಂಬುದು ಯಾರಿಗೂ ಗೊತ್ತಿಲ್ಲ. ಸಂಸದೀಯ ವ್ಯವಹಾರಗಳ ಕುರಿತು ನಾನು ಪತ್ರ ಬರೆಯಬೇಕಾದಾಗ ಕಾಂಗ್ರೆಸ್‌ನಲ್ಲಿ ಯಾರಿಗೆ ಕಳಿಸಬೇಕು ಎಂದು ಅವರ ನಾಯಕರಿಗೆ ಕೇಳಿದರೆ ವಿಚಾರ ಮಾಡಿ ಹೇಳ್ತೇವೆ ಎನ್ನುತ್ತಾರೆ. ನಾಯಕರಿಲ್ಲದೆ ಕಾಂಗ್ರೆಸ್‌ ಶಾಸಕರು ಬಂಡಾಯ ಎದ್ದಿದ್ದಾರೆ. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ಸಿಗೆ ನಾಯಕತ್ವ ಇಲ್ಲವಾಗಿದೆ. ಶಾಸಕರ ರಾಜೀನಾಮೆ ವಿಚಾರದ ಕುರಿತು ನಮ್ಮ ರಾಷ್ಟ್ರೀಯ ನಾಯಕರ ಬಗ್ಗೆ ಕಾಂಗ್ರೆಸ್‌ ಸುಳ್ಳು ಆರೋಪ ಮಾಡುತ್ತಿರುವುದು ಸರಿಯಲ್ಲ'' ಎಂದು ಅಸಮಾಧಾನ ವ್ಯಕ್ತಪಡಿಸಿದರು.

''ಸ್ಪೀಕರ್‌ ರಮೇಶ ಕುಮಾರ ಅವರು ಅತೃಪ್ತ ಶಾಸಕರ ರಾಜೀನಾಮೆಯನ್ನು ಸ್ವೀಕರಿಸುತ್ತಾರೆ ಎನ್ನುವ ವಿಶ್ವಾಸ ಇದೆ'' ಎಂದು ಸಚಿವ ಜೋಶಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ