ಆ್ಯಪ್ನಗರ

ಮದಿರ ನಾಶ ಪಡಿಸಿದವರ ವಿರುದ್ಧ ಕ್ರಮಕ್ಕೆ ಆಗ್ರಹ

ಧಾರವಾಡ : ದೆಹಲಿಯ ತುಘಲಕಬಾದ್‌ ಪ್ರದೇಶದಲ್ಲಿನ ರೋಹಿದಾಸ ಮಂದಿರ ನಾಶಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಡಾ.ಬಿ.ಆರ್‌. ಅಂಬೇಡ್ಕರ್‌ ಲಿಡ್ಕರ್‌ ಹಿತಾಭಿವೃದ್ಧಿ ಸಂಘದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.

Vijaya Karnataka 27 Aug 2019, 5:00 am
ಧಾರವಾಡ : ದೆಹಲಿಯ ತುಘಲಕಬಾದ್‌ ಪ್ರದೇಶದಲ್ಲಿನ ರೋಹಿದಾಸ ಮಂದಿರ ನಾಶಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಡಾ.ಬಿ.ಆರ್‌. ಅಂಬೇಡ್ಕರ್‌ ಲಿಡ್ಕರ್‌ ಹಿತಾಭಿವೃದ್ಧಿ ಸಂಘದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು.
Vijaya Karnataka Web DRW-26MAILAR09
ದೆಹಲಿಯ ತುಘಲಕಬಾದ್‌ ಪ್ರದೇಶದಲ್ಲಿನ ರೋಹಿದಾಸ ಮಂದಿರ ನಾಶಗೊಳಿಸಿದ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಡಾ.ಬಿ.ಆರ್‌. ಅಂಬೇಡ್ಕರ್‌ ಲಿಡ್ಕರ್‌ ಹಿತಾಭಿವೃದ್ಧಿ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.


ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡ ಪದಾಧಿಕಾರಿಗಳು, ಕಳೆದ ಆ.10ರಂದು ತುಘಲಕಬಾದ್‌ ರೋಹಿದಾಸ್‌ ಮಂದಿರ ನಾಶಗೊಳಿಸಿ ಸಮಸ್ತ ಸಮಗಾರ ಸಮುದಾಯದವರ ಭಾವನೆಗಳಿಗೆ ತೀವ್ರ ಧಕ್ಕೆ ಉಂಟುಮಾಡಲಾಗಿದೆ. ಇದರೊಂದಿಗೆ ಆ. 18ರಂದು ವಾಟ್ಸಪ್‌ ಗ್ರುಪ್‌ನಲ್ಲಿ ಸಮಗಾರ ಸಮುದಾಯದ ಭಾವನೆಗಳಿಗೆ ಧಕ್ಕೆ ಬರುವಂತೆ ಪೋಸ್ಟ್‌ಗಳನ್ನು ಮಾಡುವ ಮೂಲಕ ಜಾತಿ ನಿಂದನೆ ಮಾಡಿರುವ ದುಷ್ಕರ್ಮಿಗಳನ್ನು ಬಂಧಿಸಿ ಉಗ್ರಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಇಂತಹ ಘಟನೆಗಳು ಮರುಕಳಿಸದಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮತ್ರಿಗಳಿಗೆ ಮನವಿ ಸಲ್ಲಿಸಿದರು.

ಸಿದ್ದಾರ್ಥ ಕಲಘಟಗಿ, ಹನುಮಂತ ಮೊರಬ, ನಾರಾಯಣ ಮಾದರ, ಶಬ್ಬೀರ ಅತ್ತಾರ, ಪಿ.ಜಿ. ವಕ್ಕುಂದ ಸೇರಿದಂತೆ ಇತತರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ