ಆ್ಯಪ್ನಗರ

ಯೋಗೇಶ್​ ಗೌಡ ಹತ್ಯೆ ಪ್ರಕರಣ​​: ಧಾರವಾಡದಲ್ಲಿ ಬೀಡು ಬಿಟ್ಟ ಸಿಬಿಐ; ಪತ್ನಿ ಮಲ್ಲಮ್ಮ ಸೇರಿ ಹಲವರ ವಿಚಾರಣೆ

ಧಾರವಾಡದಲ್ಲಿ ಕಳೆದ ಎರಡು ದಿನಗಳಿಂದ ಠಿಕಾಣಿ ಹೂಡಿರುವ ಸಿಬಿಐ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಮಲ್ಲಮ್ಮ ಸೇರಿ ಹಲವರನ್ನು ಧಾರವಾಡ ಉಪನಗರ ಠಾಣೆಗೆ ಕರೆಸಿ ವಿಚಾರಣೆ ನಡೆಸಿದೆ.

Vijaya Karnataka Web 17 Sep 2020, 9:51 pm
ಧಾರವಾಡ: ಹೆಬ್ಬಳ್ಳಿ ಕ್ಷೇತ್ರದ ಜಿಪಂ ಸದಸ್ಯರಾಗಿದ್ದ ಯೋಗೇಶ್ ‌ಗೌಡ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ತಂಡ ಕಳೆದ ಎರಡು ದಿನಗಳಿಂದ ಧಾರವಾಡದಲ್ಲಿ ಬೀಡುಬಿಟ್ಟಿದ್ದು, ಹಲವರನ್ನು ಉಪನಗರ ಪೊಲೀಸ್ ಠಾಣೆಗೆ ಕರೆಸಿಕೊಂಡು ತೀವ್ರ ವಿಚಾರಣೆ ನಡೆಸುತ್ತಿದೆ.
Vijaya Karnataka Web cbi officers intensified yogesh gowda murder case investigation
ಯೋಗೇಶ್​ ಗೌಡ ಹತ್ಯೆ ಪ್ರಕರಣ​​: ಧಾರವಾಡದಲ್ಲಿ ಬೀಡು ಬಿಟ್ಟ ಸಿಬಿಐ; ಪತ್ನಿ ಮಲ್ಲಮ್ಮ ಸೇರಿ ಹಲವರ ವಿಚಾರಣೆ


ಗುರುವಾರ ಮೃತ ಯೋಗೇಶ್‌ ಗೌಡರ ಪತ್ನಿ ಮಲ್ಲಮ್ಮ ಹಾಗೂ ಆಕೆಯ ಸಹೋದರಿ ಸುಮಾ, ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ, ಕೆಪಿಸಿಸಿ ಕಾರ್ಯದರ್ಶಿ ನಾಗರಾಜ ಗೌರಿ, ಹೊಟೇಲ್ ಉದ್ಯಮಿ ಮಹೇಶ ಶೆಟ್ಟಿ ಸೇರಿ ಹಲವರನ್ನು ಠಾಣೆಗೆ ಕರೆಸಿಕೊಂಡ ಸಿಬಿಐ ತಂಡ ವಿಚಾರಣೆಗೆ ಒಳಪಡಿಸಿತು. ಈ‌ ವೇಳೆ‌ ಕೆಲ ಮಾಹಿತಿ ಸಿಬಿಐ ಅಧಿಕಾರಿಗಳಿಗೆ ಸಿಕ್ಕಿದೆ ಎನ್ನಲಾಗುತ್ತಿದೆ.

ಮಲ್ಲಮ್ಮ ಗೌಡರ ಅವರನ್ನು ಬಿಜೆಪಿಯಿಂದ ಕಾಂಗ್ರೆಸ್‌ಗೆ ಸೇರಿಸುವಲ್ಲಿ ಜಿಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಹಾಗೂ ಕೆಪಿಸಿಸಿ ಕಾರ್ಯದರ್ಶಿ ನಾಗರಾಜ ಗೌರಿ ಪ್ರಮುಖ ಪಾತ್ರ ವಹಿದ್ದರು ಎಂಬ ಕಾರಣಕ್ಕೆ ಅವರನ್ನು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ಯೋಗೇಶ್‌ ಗೌಡ ಹತ್ಯೆ ಪ್ರಕರಣದ‌ ತನಿಖೆ ನಡೆಸಿದ ಸಿಬಿಐ ಅಧಿಕಾರಿಗೆ ಗೃಹ ಸಚಿವಾಲಯದ ಪ್ರತಿಷ್ಠಿತ ಪದಕ

ಪೊಲೀಸ್ ಅಧಿಕಾರಿ ಸುಲ್ಫಿ, ಜೆಡಿಎಸ್ ಮುಖಂಡ ಗುರುರಾಜ ಹುಣಸಿಮರದ, ಕೆಲ ರಾಜಕೀಯ ವ್ಯಕ್ತಿಗಳು ಸೇರಿ ರಾಜಿ ಸಂಧಾನಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿ, ಉದ್ಯಮಿ ಮಹೇಶ ಶೆಟ್ಟಿಯನ್ನು ಠಾಣೆಗೆ ಕರೆಸಿದ ಸಿಬಿಐ ತಂಡ ವಿಚಾರಣೆಗೆ ಒಳಪಡಿಸಿದೆ ಎಂದು ಮೂಲಗಳು ತಿಳಿಸಿವೆ.

ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌, ಸಿಬಿಐನಿಂದ ಐವರು ಸುಪಾರಿ ಹಂತಕರ ಬಂಧನ

ಶಿವಾನಂದ ಕರಿಗಾರ, ನಾಗರಾಜ ಗೌರಿ, ಮಹೇಶ್‌ ಶೆಟ್ಟಿ, ಮಲ್ಲಮ್ಮ ಹಾಗೂ ಸುಮಾ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ವಿಚಾರಣೆ ನಡೆಸಿದ ಸಿಬಿಐ ಅಧಿಕಾರಿಗಳ ತಂಡ ಯೋಗೇಶ್‌ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಮಾಹಿತಿ ಕಲೆ ಹಾಕಿದೆ ಎನ್ನಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ